ಮಂಗಳೂರು (ಸೆ.08): ಕೋವಿಡ್ ಹಿನ್ನೆಲೆಯಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರದಿಂದ ಶುಕ್ರವಾರವರೆಗೆ ಬೆಳಗ್ಗೆ 7ರಿಂದ ಸಂಜೆ 7 ಗಂಟೆವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ವಾರಾಂತ್ಯ(ಶನಿವಾರ, ಭಾನುವಾರ)ದ ದಿನ ಭಕ್ತರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರದಲ್ಲಿ ಇಳಿಕೆಯಾಗಿದ್ದರೂ, ಸಂಭಾವ್ಯ 3ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಈ ಆದೇಶ ಹೊರಡಿಸಿದ್ದಾರೆ.
ಧರ್ಮಸ್ಥಳ, ಕಟೀಲು, ಕುಕ್ಕೆಯಲ್ಲಿ ದೇಗುಲ ಬಂದ್ : ಯಾವಾಗ..?
ತೀರ್ಥ ಪ್ರಸಾದ, ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶವಿಲ್ಲ. ವಾರಾಂತ್ಯದಲ್ಲಿ ವಸತಿ ಗೃಹಗಳಲ್ಲಿ ತಂಗುವುದು ಅಥವಾ ದೇವರ ದರ್ಶನಕ್ಕೆ ಅವಕಾಶವಿಲ್ಲ. ಅರ್ಚಕರಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಜಾತ್ರೆಗಳು, ದೇವಾಲಯದ ಉತ್ಸವಗಳು ಹಾಗೂ ಮೆರವಣಿಗೆಗಳನ್ನು ಸಹ ನಿಷೇಧಿಸಲಾಗಿದೆ.