ರಾಜ್ಯದಲ್ಲಿ ಮನೆ ಬಾಗಿಲಿಗೆ ಬರುತ್ತಾ ಮದ್ಯ..?

Kannadaprabha News   | Asianet News
Published : Sep 03, 2020, 07:32 AM IST
ರಾಜ್ಯದಲ್ಲಿ ಮನೆ ಬಾಗಿಲಿಗೆ ಬರುತ್ತಾ ಮದ್ಯ..?

ಸಾರಾಂಶ

ಮದ್ಯಪ್ರಿಯರಿಗೆ ಸಿಗುತ್ತಾ ಗುಡ್ ನ್ಯೂಸ್..? ಮನೆ ಬಾಗಿಲಿಗೆ ಬರುತ್ತಾ ಮದ್ಯ..? ಈ ಬಗ್ಗೆ ನಮ್ಮ ಅಬಕಾರಿ ಸಚಿವರು ಏನ್ ಹೇಳ್ತಾರೆ?

ಕೋಲಾರ (ಸೆ.03): ಆನ್‌ಲೈನ್‌ ಮದ್ಯ ಮಾರಾಟದ ಕುರಿತು ತರಾತುರಿಯಲ್ಲಿ ತೀರ್ಮಾನ ಕೈಗೊಳ್ಳುವುದಿಲ್ಲ, ಸಾಧಕ ಬಾಧಕಗಳ ಕುರಿತು ಚರ್ಚಿಸಿಯೇ ಕ್ರಮ ಕೈಗೊಳ್ಳುವುದಾಗಿ ಅಬಕಾರಿ ಸಚಿವ ಎಚ್‌.ನಾಗೇಶ್‌ ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಆನ್‌ಲೈನ್‌ ಮದ್ಯ ಮಾರಾಟಕ್ಕೆ ಬಾರ್‌ಗಳ ಅಸೋಸಿಯೇಷಯನ್‌ ವಿರೋಧ ವ್ಯಕ್ತಪಡಿಸಿದೆ. ಇತರೆ ರಾಜ್ಯಗಳಲ್ಲಿ ಆನ್‌ಲೈನ್‌ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಅದನ್ನು ಖುದ್ದು ಹೋಗಿ ಪರಿಶೀಲಿಸಿ ವರದಿ ನೀಡಲು ಅಧಿಕಾರಿಗಳ ತಂಡ ರಚಿಸಲಾಗಿದೆ. ಆನ್‌ಲೈನ್‌ ಮದ್ಯ ಮಾರಾಟದಿಂದ 18 ವರ್ಷದೊಳಗಿನ ಮಕ್ಕಳಿಗೆ ಸಮಸ್ಯೆಯಾಗಲಿದೆಯೇ, ಮಹಿಳೆಯರಿಗೆ ತೊಂದರೆಯಾಗಲಿದೆಯೇ ಎಂಬೆಲ್ಲಾ ಮಾಹಿತಿ ಪರಿಶೀಲಿಸಿಯೇ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಕೊರೋನಾತಂಕ ನಡುವೆ ಆನ್‌ಲೈನ್‌ಮೂಲಕ ಮನೆ ಬಾಗಿಲಿಗೆ ಮದ್ಯ! ...

ಇನ್ನು ಇಲಾಖೆಯಲ್ಲಿ ಇರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. ಈಗಾಗಲೇ ಪಿಎಸ್‌ಐ ಹುದ್ದೆಗಳಿಂದ ಸಿಐ ಹುದ್ದೆಗಳಿಗೆ ಬಡ್ತಿ ನೀಡಲಾಗಿದೆ. ಇದರಿಂದ ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು

ಈ ಹಿಂದೆಯೂ ಅನೇಕ ಬಾರೀ ಆನ್‌ಲೈನ್ ಮದ್ಯ ಮಾರಾಟದ ಪ್ರಸ್ತಾಪ ಆಗಿದ್ದು, ಇದೀಗ ಮತ್ತೊಮ್ಮೆ ಈ ಬಗ್ಗೆ ರಾಜ್ಯದಲ್ಲಿ ಚರ್ಚೆ ಹೆಚ್ಚಾಗಿದೆ.

PREV
click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ