ಎರಡು ಪ್ರಕರಣಗಳಲ್ಲಿ ಆರೋಪಿಗಳ ಪರವಾಗಿ ವಕಾಲತ್ತು ವಹಿಸಲು ವಕೀಲರು ಮುಂದೆ ಬರುತ್ತಿಲ್ಲ. ನೇಹಾ ಹತ್ಯೆ ಪ್ರಕರಣದಲ್ಲಂತೂ ಅವರ ಮನೆಗೆ ಹೋಗಿದ್ದ ಕೆಲ ವಕೀಲರ ನಿಯೋಗ ಆರೋಪಿ ಪರವಾಗಿ ವಕಾಲತ್ತು ವಹಿಸುವುದಿಲ್ಲ ತಿಳಿಸಿತ್ತು. ಇದೀಗ ಅಂಜಲಿ ಹತ್ಯೆ ಕೇಸ್‌ಲ್ಲೂ ವಕೀಲರು ವಕಾಲತ್ತು ವಹಿಸಲು ಮುಂದಾಗುತ್ತಿಲ್ಲ. ವಕೀಲರ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಹುಬ್ಬಳ್ಳಿ(ಮೇ.25): ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಹತ್ಯೆ ಆರೋಪಿಗಳ ಪರ ವಕಾಲತ್ತು ವಹಿಸಲು ಯಾವ ವಕೀಲರು ಮುಂದಾಗುತ್ತಿಲ್ಲ. ಇದು ಆರೋಪಿಗಳಿಗೆ ಸಂಕಟ ಎದುರಾಗಿದೆ. ಇಲ್ಲಿನ ವಕೀಲರ ನಡೆಗೆ ಸಾರ್ವಜನಿಕ ವಲಯದಲ್ಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಏ. 18ರಂದು ಕಾಲೇಜ್ ಕ್ಯಾಂಪಸ್‌ನಲ್ಲಿ ನೇಹಾ ಹಿರೇಮಠ, ಮೇ 15ರಂದು ಅಂಜಲಿ ಅಂಬಿಗೇರ ಹತ್ಯೆಯಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಎರಡು ಪ್ರಕರಣಗಳನ್ನು ಸಿಐಡಿಗೆ ವಹಿಸಿತ್ತು. ನೇಹಾ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ತಲುಪಿದ್ದು, ಚಾರ್ಜ್‌ಶೀಟ್ ಸಲ್ಲಿಸುವುದು ಬಾಕಿಯುಳಿದಿದೆ. ಇನ್ನು ಅಂಜಲಿ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ.
ಹುಬ್ಬಳ್ಳಿ ಅಂಜಲಿ ಕೊಲೆಗೈದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ಗಿರೀಶ; 8 ದಿನ ಸಿಐಡಿ ಕಸ್ಟಡಿಗೊಪ್ಪಿಸಿದ ಕೋರ್ಟ್
ಎರಡು ಪ್ರಕರಣಗಳಲ್ಲಿ ಆರೋಪಿಗಳ ಪರವಾಗಿ ವಕಾಲತ್ತು ವಹಿಸಲು ವಕೀಲರು ಮುಂದೆ ಬರುತ್ತಿಲ್ಲ. ನೇಹಾ ಹತ್ಯೆ ಪ್ರಕರಣದಲ್ಲಂತೂ ಅವರ ಮನೆಗೆ ಹೋಗಿದ್ದ ಕೆಲ ವಕೀಲರ ನಿಯೋಗ ಆರೋಪಿ ಪರವಾಗಿ ವಕಾಲತ್ತು ವಹಿಸುವುದಿಲ್ಲ ತಿಳಿಸಿತ್ತು. ಇದೀಗ ಅಂಜಲಿ ಹತ್ಯೆ ಕೇಸ್‌ಲ್ಲೂ ವಕೀಲರು ವಕಾಲತ್ತು ವಹಿಸಲು ಮುಂದಾಗುತ್ತಿಲ್ಲ. ವಕೀಲರ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್ ನ್ಯಾಯಾಂಗ ಬಂಧನದಲ್ಲಿದ್ದರೆ, ಅಂಜಲಿ ಹಂತಕ ಗಿರೀಶ ಸಾವಂತ್ ಸಿಐಡಿ ಕಸ್ಟಡಿಯಲ್ಲಿದ್ದಾನೆ. ಹೀಗಾಗಿ ಇವರಿಬ್ಬರ ಪರವಾಗಿ ಯಾರೊಬ್ಬರು ಜಾಮೀನು ಹಾಕಿಲ್ಲ. ಇಬ್ಬರಿಗೂ ಜೈಲೇ ಗತಿ ಎಂಬಂತಾಗಿದೆ.