ಸದ್ಯಕ್ಕೆ ಕನಕಪುರಕ್ಕೆ ಮೆಡಿಕಲ್ ಕಾಲೇಜು ಇಲ್ಲ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣದ ಬಗ್ಗೆ ಮಾತನಾಡಿದ ಅವರು ಈ ರೀತಿ ಹೇಳಿದ್ದಾರೆ.
ಮೈಸೂರು(ಜ.23): ಸದ್ಯಕ್ಕೆ ಕನಕಪುರಕ್ಕೆ ಮೆಡಿಕಲ್ ಕಾಲೇಜು ಇಲ್ಲ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣದ ಬಗ್ಗೆ ಮಾತನಾಡಿದ ಅವರು ಈ ರೀತಿ ಹೇಳಿದ್ದಾರೆ.
ಸದ್ಯಕ್ಕೆ ಕನಕಪುರಕ್ಕೆ ಮೆಡಿಕಲ್ ಕಾಲೇಜು ಬರುವುದಿಲ್ಲ. ಸದ್ಯ ಪ್ರತಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಮಾಡುತ್ತಿದ್ದೇವೆ. ರಾಮನಗರದಲ್ಲಿ ಮೆಡಿಕಲ್ ಕಾಲೇಜು ಜೊತೆ ಹೆಲ್ತಿ ಸಿಟಿ ಮಾಡಲಾಗುತ್ತದೆ. ರಾಮನಗರದಲ್ಲಿ ಮೆಡಿಕಲ್ ಕಾಲೇಜು ಮಾಡುತ್ತಿರುವುದರಿಂದ ತಾಲೂಕು ಕೇಂದ್ರಕ್ಕೆ ಮೆಡಿಕಲ್ ಕಾಲೇಜು ಮಂಜೂರು ಮಾಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಡಿಕೆಶಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ : ಸಮಾಧಾನಿಸಲು ಯತ್ನ
ಮಂಜೂರಾಗಿರುವ ನಾಲ್ಕು ಮೆಡಿಕಲ್ ಕಾಲೇಜಿಗೆ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಈ ಹಿಂದಿನ ಸರ್ಕಾರವಿದ್ದ ಸಂದರ್ಭ ಕನಕಪುರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಲು ತೀರ್ಮಾನ ಮಾಡಲಾಗಿತ್ತು. ಆದರೆ ಬಿಎಸ್‌ವೈ ಸಿಎಂ ಆದ ನಂತರ ಕನಕಪುರದಿಂದ ಚಿಕ್ಕಬಳ್ಳಾಪುರದಲ್ಲಿ ಕಾಲೇಜು ನಿರ್ಮಾಣಕ್ಕೆ ತೀರ್ಮಾನಿಸಲಾಗಿತ್ತು.