ಉತ್ತರ ಕರ್ನಾಟಕಕ್ಕೆ ಬಿಎಸ್‌ವೈ ಉತ್ತಮ ನೆರವು: ತೇಜಸ್ವಿ

Published : Sep 20, 2019, 03:45 PM ISTUpdated : Sep 20, 2019, 05:17 PM IST
ಉತ್ತರ ಕರ್ನಾಟಕಕ್ಕೆ ಬಿಎಸ್‌ವೈ ಉತ್ತಮ ನೆರವು: ತೇಜಸ್ವಿ

ಸಾರಾಂಶ

ಉತ್ತರ ಕರ್ನಾಟಕದಲ್ಲಿ ಆದ ಜಲಪ್ರವಾಹದಲ್ಲಿ ಮನೆ, ಜಮೀನು ಕಳೆದುಕೊಂಡವರಿಗೆ ಸಿಎಂ ಬಿಎಸ್ ವೈ ಪರಿಹಾರ ಘೋಷಣೆ ಮಾಡಿದ್ದಾರೆ|  ನಮ್ಮ ರಾಜ್ಯ ಆರ್ಥಿಕವಾಗಿ ಸದೃಢ, ಶಕ್ತಿ ಹೊಂದಿದೆ: ತೇಜಸ್ವಿ ಸೂರ್ಯ

ಬೆಳಗಾವಿ:(ಸೆ.20) ಉತ್ತರ ಕರ್ನಾಟಕದಲ್ಲಿ ಆದ ಜಲಪ್ರವಾಹದಲ್ಲಿ ಮನೆ, ಜಮೀನು ಕಳೆದುಕೊಂಡವರಿಗೆ ಸಿಎಂ ಬಿ. ಎಸ್. ಯಡಿಯೂರಪ್ಪ ಪರಿಹಾರ ಘೋಷಿಸಿದ್ದಾರೆ. ನಮ್ಮ ರಾಜ್ಯ ಆರ್ಥಿಕವಾಗಿ ಸದೃಢ, ಶಕ್ತಿ ಹೊಂದಿದೆ, ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅಭಿಪ್ರಾಯ ಪಟ್ಟಿದ್ದಾರೆ. 

ಇಂದು ನಗರದಲ್ಲಿ ಮಾತನಾಡಿ, ಪ್ರವಾಹ ಪೀಡಿತ ಉತ್ತರ ಕರ್ನಾಟಕ ಭಾಗಕ್ಕೆ ಅಗತ್ಯ ಪರಿಹಾರವನ್ನೂ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಈ ವಯಸ್ಸಿನಲ್ಲೂ ಸಿಎಂ ಬಿ.ಎಸ್.ವೈ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುತ್ತಿದ್ದಾರೆ, ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 
 
ಉತ್ತರ ಕರ್ನಾಟಕದ ಪ್ರವಾಹದ ಸಂತ್ರಸ್ತರಿಗೆ ಕೇಂದ್ರ ಸರಕಾರ ಅಗತ್ಯ ನೆರವು ನೀಡಿಲ್ಲ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರೂ ಕೇಂದ್ರ ಸರ್ಕಾರದ ಪ್ರತಿನಿಧಿಗಳೆ ಅಲ್ಲವೇ ಎಂದರು. 

ಪ್ರವಾಹದ ಹಾನಿಯ ಬಗ್ಗೆ ಕೇಂದ್ರಕ್ಕೆ ಮನವಿ 

ಈಗಾಗಲೇ ಪ್ರವಾಹದ ಹಾನಿಯ ವರದಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿಯಾಗಿದೆ. ಕೇಂದ್ರವೂ ರಾಜ್ಯಕ್ಕೆ ಹೆಚ್ಚಿನ ಪರಿಹಾರ ಬಿಡುಗಡೆ ಮಾಡಿ ಸ್ಪಂದಿಸುವ ಭರವಸೆ ಇದೆ‌, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ಕೆಲಸ ಮಾಡುತ್ತಿವೆ ಎಂಬ ಅರಿವು ರಾಜ್ಯದ ಜನರಿಗೆ ಇದೆ ಎಂದು ಅವರು ಹೇಳಿದರು.

PREV
click me!

Recommended Stories

ಹಳ್ಳಿ ಕೂಲಿ ಕಾರ್ಮಿಕರ ಮಕ್ಕಳ ಆರೈಕೆಗೆ ‘ಮಕ್ಕಳ ಮನೆ’: ಕಲ್ಯಾಣ ಕರ್ನಾಟಕದಲ್ಲಿ ಹೊಸ ಪ್ರಯೋಗ
4 ಸಾವಿರಕ್ಕೂ ಹೆಚ್ಚು ಜನರಿಂದ ಏಕಕಾಲಕ್ಕೆ ಅಷ್ಟಾಂಗ ಹೃದಯ ಸಂಹಿತೆ ಪಠಣ: ಆಯುರ್ವೇದದಲ್ಲಿ ಐತಿಹಾಸಿಕ ದಾಖಲೆ