ಪೌರತ್ವ ಕಾಯ್ದೆಯಿಂದ ಯಾರಿಗೂ ತೊಂದರೆ ಇಲ್ಲ: ಸಂಸದ ಮುನಿಸ್ವಾಮಿ

By Kannadaprabha News  |  First Published Feb 8, 2023, 8:22 PM IST

ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಕಾಂಗ್ರೆಸ್‌ ದಲಿತರನ್ನು ಮತ್ತು ಮುಸ್ಲಿಂ ಸಮುದಾಯವನ್ನು ಕೇವಲ ಓಟ್‌ ಬ್ಯಾಂಕ್‌ ಮಾಡಿಕೊಂಡಿದ್ದಾರೆಯೇ ಹೊರತು ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದ್ದಾರೆ ಎಂದು ಸಂಸದ ಎಸ್‌.ಮುನಿಸ್ವಾಮಿ ತಿಳಿಸಿದರು.


ಕೋಲಾರ (ಫೆ.08): ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಕಾಂಗ್ರೆಸ್‌ ದಲಿತರನ್ನು ಮತ್ತು ಮುಸ್ಲಿಂ ಸಮುದಾಯವನ್ನು ಕೇವಲ ಓಟ್‌ ಬ್ಯಾಂಕ್‌ ಮಾಡಿಕೊಂಡಿದ್ದಾರೆಯೇ ಹೊರತು ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದ್ದಾರೆ ಎಂದು ಸಂಸದ ಎಸ್‌.ಮುನಿಸ್ವಾಮಿ ತಿಳಿಸಿದರು.

ನಗರದಲ್ಲಿ ಸುಲ್ತಾನ್‌ ತಿಪ್ಪಸಂದ್ರದಲ್ಲಿ ಮುಸ್ಲಿಂ ಸಮುದಾಯದವರು ವಿವಿಧ ಪಕ್ಷಗಳನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಕಾರ್ಯಕ್ರಮದಲ್ಲಿ ಮಾತನಾಡಿ, ಕೇಂದ್ರ-ರಾಜ್ಯದ ಡಬ್ಬಲ್‌ ಎಂಜಿನ್‌ ಆಡಳಿತದಲ್ಲಿ ಮಾತ್ರವೇ ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳು ಸುರಕ್ಷಿತವಾಗಿ ಇರುವಂತೆ ಪ್ರಧಾನಿ ನರೇಂದ್ರ ಮೋದಿ ಕಾನೂನು ರೂಪಿಸಿದ್ದಾರೆ. ಜೊತೆಗೆ ತಂದೆ ತಾಯಿಗೆ ಗೌರವ ಕೊಟ್ಟಂತೆ ದೇಶಕ್ಕೂ ಗೌರವ ಕೊಡುವಂತೆ ಮಾಡಿದ್ದಾರೆ ಎಂದರು.

Tap to resize

Latest Videos

ರಾಜಕೀಯಕ್ಕೆ ಬಂದಿರುವುದು ಜನ ಸೇವೆ ಮಾಡಲಿಕ್ಕೆ: ಸಚಿವ ಎಂಟಿಬಿ ನಾಗರಾಜ್‌

ಪೌರತ್ವ ಕಾಯ್ದೆಯಿಂದ ತೊಂದರೆ ಇಲ್ಲ: ದೇಶದಲ್ಲಿ ಹಿಂದು, ಕ್ರೈಸ್ತರು, ಮುಸ್ಲಿಂ ಸಮುದಾಯದದವರು ಅಣ್ಣ ತಮ್ಮಂದಿರ ರೀತಿಯಲ್ಲಿ ಜೀವಿಸುವ ವಾತಾವರಣ ಸೃಷ್ಟಿಯಾಗಿದೆ, ಪೌರತ್ವ ಕಾಯ್ದೆ ತಿದ್ದುಪಡಿಯಿಂದ ಯಾವುದೇ ತೊಂದರೆ ಆಗುವುದಿಲ್ಲ, ಆದರೆ ಕಾಂಗ್ರೆಸ್‌ ನಿಮ್ಮನ್ನು ಕೇವಲ ಓಟಿಗಾಗಿ ವಿರೋಧಿಸಿದ್ದಾರೆ, ದೇಶದಲ್ಲಿ ಎಲ್ಲರೂ ನೆಮ್ಮದಿಯಾಗಿ ಸುಭದ್ರವಾಗಿ ಇರಬೇಕು ಎಂಬುದು ಪ್ರಧಾನಿಯ ಮೋದಿಯ ಪರಿಕಲ್ಪನೆಯಾಗಿದೆ ಎಂದರು.

ದೇಶದಲ್ಲಿ ನರೇಂದ್ರ ಮೋದಿ ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ್‌ ಬೊಮ್ಮಯಿ ನೇತೃತ್ವದಲ್ಲಿ ಬಿಜೆಪಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ. ಇದನ್ನು ಸಹಿಸಿದ ಪ್ರತಿಪಕ್ಷಗಳು ತ್ರಿಬಲ್‌ ತಾಲಾಕ್‌, ಪೌರತ್ವ ಕಾಯಿದೆ ಮುಸ್ಲಿಂ ವಿರೋಧಿ ಕಾಯಿದೆಗಳು ಅಂತ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿವೆ. ಜನರನ್ನು ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ. ಕಾಯ್ದೆಗಳಿಂದ ನಿಮಗೆ ಅನುಕೂಲವಾಗಲಿದ್ದು, ದೇಶದಲ್ಲಿರುವ ಮುಸ್ಲಿಂ ಸಮುದಾಯಕ್ಕೆ ಯಾವುದೇ ತೊಂದರೆ ಇಲ್ಲ, ಇದನ್ನು ವಿದ್ಯಾವಂತರು ಮನವರಿಕೆ ಮಾಡಿಕೊಡಬೇಕು ಜೊತೆಗೆ ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕು ಎಂದರು.

ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿ: ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ನೀವುಗಳು ಪ್ರಶ್ನೆ ಮಾಡಬೇಕು. ಸಿದ್ದರಾಮಯ್ಯ ಕೊನೆ ಚುನಾವಣೆ ಅಂತ ನಿಮ್ಮ ಮುಂದೆ ಬರುತ್ತಿದ್ದಾರೆ. ಅಂಬೇಡ್ಕರ್‌ ಹೆಸರು ಹೇಳಲಿಕ್ಕೂ ಲಾಯಕ್‌ ಇಲ್ಲದ ಕಾಂಗ್ರೆಸ್‌ ಪಕ್ಷಕ್ಕೆ ಈ ಬಾರಿಯ ಚುನಾವಣೆಯಲ್ಲಿ ಪಾಠ ಕಲಿಸಬೇಕು ಎಂದರು. ಬಿಜೆಪಿ ಮುಖಂಡ ಬೆಗ್ಲಿ ಸಿರಾಜ್‌ ಮಾತನಾಡಿ, ಮುಸ್ಲಿಂ ಸಮುದಾಯವು ಪ್ರತಿಯೊಂದು ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷವನ್ನು ಬೆಂಬಲಿಸಿದ್ದಾರೆ. 

ಭ್ರಷ್ಟಾಚಾರ ಆರೋಪ ಬೆನ್ನಲ್ಲೇ ಮಂಗಳೂರಿಗೆ ಎಡಿಜಿಪಿ: ಸಾರ್ವಜನಿಕರ ಕುಂದುಕೊರತೆ ಆಲಿಸಲಿರುವ ಅಲೋಕ್ ಕುಮಾರ್!

ಅವರ ಆಡಳಿತದಲ್ಲಿನ ಅಭಿವೃದ್ಧಿಗಳ ಪಟ್ಟಿ ಕೊಡಲಿ ನಮ್ಮ ಬಿಜೆಪಿ ಪಕ್ಷದ ಅಧಿಕಾರದ ಅವಧಿಯಲ್ಲಿನ ಅಭಿವೃದ್ಧಿ ಪಟ್ಟಿಕೊಡತ್ತೇವೆ. ಯಾರು ಹೆಚ್ಚು ಅಭಿವೃದ್ಧಿ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಿ ಮತ ಹಾಕಲಿ ಎಂದರು. ಬಿಜೆಪಿ ಜಿಲ್ಲಾ ಅಧ್ಯಕ್ಷ ಡಾ.ವೇಣುಗೋಪಾಲ್‌, ಮುಖಂಡರಾದ ಜಾವೀದ್‌, ಅನ್ಸರ್‌, ಶಫೀಉಲ್ಲಾ, ಅಬ್ದುಲ್‌, ಅಜರತ್‌, ಜಮೀರ್‌ ಪಾಷ, ಚಂದ್ರಶೇಖರ್‌, ಜಾವೀದ್‌ ಉಲ್ಲಾ ಖಾನ್‌ ಇದ್ದರು.

click me!