ರಾಜ್ಯದಲ್ಲಿ ಹೆಚ್ಚುತ್ತಿರುವ ಮಾರಕ ಸೋಂಕಿನಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮಾದಪ್ಪನ ದೇಗುಲಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗುತ್ತಿದೆ.
ಚಾಮರಾಜನಗರ (ಸೆ.14): ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಇದೇ 16 ರಿಂದ 18 ರವರೆಗೆ ಮಲೆಮಹದೇಶ್ವರ ದೇಗುಲಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಆದೇಶಿಸಿದ್ದಾರೆ.
16ರಿಂದ 18 ರವರೆಗೆ ದೇವರಿಗೆ ಎಣ್ಣೆ ಮಜ್ಜನ, ಅಮವಾಸ್ಯೆ ವಿಶೇಷ ಪೂಜೆ ನಡೆಯುವುದರಿಂದ ಭಕ್ತರ ಸಂಖ್ಯೆ ಅಧಿಕವಾಗಿರಲಿದೆ.
undefined
ಕೊರೋನಾ ಹೆಚ್ಚುತ್ತಿರುವ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟಸಾಧ್ಯವಾದ್ದರಿಂದ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಆನೆ ಕಾರಿಡಾರ್ ನಿರ್ಮಾಣಕ್ಕೆ ರೈತರ ಭೂಮಿ ಸ್ವಾಧೀನಕ್ಕೆ ಸಿದ್ಧತೆ .
ಈಗಾಗಲೇ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಸಾಕಷ್ಟು ಲಕ್ಷ ಸಂಖ್ಯೆಯಲ್ಲಿ ವರದಿಯಾಗಿದೆ. ಕೊರೋನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಅಧಿಕವಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.