ಚಾಮರಾಜನಗರ (ಡಿ.24): ರಾಜ್ಯದಲ್ಲಿ ಕೊರೋನಾ (Corona) ಕೊಂಚ ಏರಿಕೆಯಾಗಿದ್ದುಈ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೊಸ ವರ್ಷದ ಹೊಸ್ತಿಲಲ್ಲಿ ಕೊರೋನಾ ಮತ್ತೆ ಏರಬಹುದಾದ ಹಿನ್ನೆಲೆ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ ನಿಡಲಾಗಿದೆ. ರಾಜ್ಯದಲ್ಲಿ (karnataka Govt) ಸರ್ಕಾರ ಅನೇಕ ನಿಯಮಾವಳಿಗಳನ್ನು ರೂಪಿಸಿದ್ದು, ಇದೀಗ ಬಂಡೀಪುರದಲ್ಲಿ (Bandipura) ಹೊಸ ವರ್ಷಾಚರಣೆಯ ಮೋಜು ಮಸ್ತಿಗೆ ಬ್ರೇಕ್ ಹಾಕಲಾಗಿದೆ.
ಅರಣ್ಯ ಇಲಾಖೆಯ ಡಾರ್ಮೆಟರಿಗಳು, ಕಾಟೇಜ್ ಗಳು ಹಾಗು ಗೆಸ್ಟ್ ಹೌಸ್ ಗಳಲ್ಲಿ (Guest House) ಪ್ರವಾಸಿಗರ (Tourists) ವಾಸ್ತವ್ಯಕ್ಕೆ ಹೊಸ ವರ್ಷಕ್ಕೆ ನಿಷೇಧ ಹೇರಲಾಗಿದೆ. ಡಿಸೆಂಬರ್ 31 ಹಾಗು ಜನವರಿ1 ರಂದು ಬಂಡಿಪುರದ ಪ್ರದೇಶದಲ್ಲಿ ಹೊಸ ವರ್ಷಾಚರಣೆ (New Year) ಮಾಡಲು ಹಾಗೂ ವಾಸ್ತವ್ಯಕ್ಕೆ ನಿರ್ಬಂಧ ಹೇರಲಾಗಿದೆ.
undefined
ಡಿ. 31 ಹಾಗು ಜ. 1 ಕ್ಕೆ ಆನ್ ಲೈನ್ ಬುಕಿಂಗ್ ಬ್ಲಾಕ್ ಆಗಲಿದೆ. ಆದರೆ ಈ ದಿನಗಳಲ್ಲಿ ಸಫಾರಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಎಂದಿನಂತೆ ಬೆಳಿಗ್ಗೆ ಹಾಗು ಸಂಜೆ ಸಫಾರಿ ಇರಲಿದೆ, ಆದರೆ ವಾಸ್ತವ್ಯಕ್ಕೆ ಮಾತ್ರ ಹೊಸ ವರ್ಷದ ಸಂದರ್ಭದಲ್ಲಿ ಅವಕಾಶ ಇರುವುದಿಲ್ಲ ಎಂದು ಬಂಡೀಪುರ (Bandipura) ಅರಣ್ಯ ಸಂರಕ್ಷಣಾಧಿಕಾರಿ ನಟೇಶ್ ತಿಳಿಸಿದ್ದಾರೆ.
ನಂದಿ ಬೆಟ್ಟದಲ್ಲಿಯೂ ನಿಷೇಧ :
ಹೊಸ ವರ್ಷದ(New Year) ಮೊದಲ ದಿನದಂದು ಜಿಲ್ಲೆಯ ವಿಶ್ವ ವಿಖ್ಯಾತ ನಂದಿಗಿರಿಧಾಮಕ್ಕೆ(Nandi Hills) ಬಂದು ಮೋಜು, ಮಸ್ತಿಯಲ್ಲಿ ತೊಡಗಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಮುಳಗಿ ತೇಲುತ್ತಿದ್ದ ಪ್ರವಾಸಿಗರಿಗೆ, ಯುವ ಪ್ರೇಮಿಗಳಿಗೆ ಜಿಲ್ಲಾಡಳಿತ ಬಿಗ್ ಶಾಕ್ ಕೊಟ್ಟಿದೆ.
ಸಾಮಾನ್ಯವಾಗಿ ಜಿಲ್ಲಾಡಳಿತ ವರ್ಷದ ಕೊನೆಯ ದಿನ ಅಂದರೆ 30 ಅಥವಾ 31ರ ಸಂಜೆ 3 ರಿಂದ ಹೊಸ ವರ್ಷದ ಮೊದಲ ಜನ ಅಂದರೆ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೂ ಮಾತ್ರ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸುತ್ತಿದ್ದ ಜಿಲ್ಲಾಡಳಿತ ಇದೀಗ ಕೊರೋನಾ(Coronavirus) ಮೂರನೇ ಅಲೆಯ ಒಮಿಕ್ರೋನ್(Omicron) ಆತಂಕದ ಹಿನ್ನಲೆಯಲ್ಲಿ ಜನವರಿ 1ರಂದು ಕೂಡ ಸಂಪೂರ್ಣ ಗಿರಿಧಾಮವನ್ನು ಬಂದ್‌ಗೊಳಿಸಲು ಜಿಲ್ಲಾಡಳಿತ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ. ಆಗಾಗಿ ನಂದಿಗಿರಿಧಾಮದಲ್ಲಿ ಹೊಸ ವರ್ಷದ ಸಂಭ್ರಮಕ್ಕೆ ಯೋಜನೆ ರೂಪಿಸಿಕೊಂಡಿದ್ದವರು, ಪ್ರವಾಸಕ್ಕೆ(Tour) ಬುಕ್ಕಿಂಗ್ ಮಾಡಿದವರು ತಮ್ಮ ಯೋಜನೆ ಬದಲಿಸಿಕೊಳ್ಳುವುದು ಅನಿರ್ವಾಯವಾಗಿದೆ.
ಕೊಚ್ಚಿ ಹೋಗಿದ್ದ ನಂದಿ ಬೆಟ್ಟ ರಸ್ತೆ ಪುನರ್ ನಿರ್ಮಾಣ ಚುರುಕು
ಡೀಸಿ ಆದೇಶದಲ್ಲಿ ಏನಿದೆ?
2022ರ ಜನವರಿ 1 ರ ಹೊಸ ವರ್ಷದ ದಿನಾಚರಣೆಯ ಸಂಬಂಧವಾಗಿ, ಚಿಕ್ಕಬಳ್ಳಾಪುರ(Chikkaballapura) ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ಸ್ಥಳವಾದ ನಂದಿ ಬೆಟ್ಟಕ್ಕೆ ಬೆಂಗಳೂರು(Bengaluru), ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆ ಹಾಗೂ ಇನ್ನಿತರೆ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ಸಾಧ್ಯತೆ ಇರುವುದರಿಂದ ಹಾಗೂ ಕೋವಿಡ್-19(Covid-19) ರೂಪಾಂತರಿ ಓಮಿಕ್ರಾನ್ ಸಾಂಕ್ರಾಮಿಕ ರೋಗ(Infectious Disease) ಹರಡುವ ಸಾಧ್ಯತೆಗಳು ಇರುವುದರಿಂದ, ಪರಿಸರವನ್ನು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಡುವ ಹಿತದೃಷ್ಟಿಯಿಂದ ಡಿ.31 ರ ಮಧ್ಯರಾತ್ರಿ ಹಾಗೂ 2022ರ ಜನವರಿ 1 ರಂದು ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ನಂದಿ ಗಿರಿಧಾಮಕ್ಕೆ ಡಿ. 30ರ ಸಂಜೆ 6 ಗಂಟೆಯಿಂದ 2022ರ ಜನವರಿ 2 ರ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೊರಡಿಸಿರುವ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.