ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲವಾಗಿದ್ದು, ಸಾರ್ವಜನಿಕರು ಜಾಗೃತರಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಅನಗತ್ಯವಾಗಿ ಸಂಚರಿಸುವುದನ್ನು ನಿಲ್ಲಿಸುವುದು ಮತ್ತು ಸ್ವಚ್ಛತೆ ಕಾಪಾಡುವ ಮೂಲಕ ಕೊರೋನಾವನ್ನು ಹಿಮ್ಮೆಟ್ಟಿಸುವುದೇ ಲಾಕ್‌ಡೌನ್‌ಗಿಂತ ಪರಿಣಾಮಕಾರಿ ಎಂದು ಉಪ ಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು.
ಚಿಕ್ಕಬಳ್ಳಾಪುರ(ಜು.04): ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲವಾಗಿದ್ದು, ಸಾರ್ವಜನಿಕರು ಜಾಗೃತರಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಅನಗತ್ಯವಾಗಿ ಸಂಚರಿಸುವುದನ್ನು ನಿಲ್ಲಿಸುವುದು ಮತ್ತು ಸ್ವಚ್ಛತೆ ಕಾಪಾಡುವ ಮೂಲಕ ಕೊರೋನಾವನ್ನು ಹಿಮ್ಮೆಟ್ಟಿಸುವುದೇ ಲಾಕ್‌ಡೌನ್‌ಗಿಂತ ಪರಿಣಾಮಕಾರಿ ಎಂದು ಉಪ ಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು.
ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಶುಕ್ರವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಂಭಿಕ ಹಂತದಲ್ಲಿ ಕೊರೋನಾವನ್ನು ತಡೆಯಲು ಸುಧೀರ್ಘ ಕಾಲ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಆದರೆ ಮತ್ತೆ ಲಾಕ್‌ಡೌನ್ ಮಾಡಿದಲ್ಲಿ ರಾಜ್ಯ ಆರ್ಥಿಕ ಮುಗ್ಗಟ್ಟನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಜನತೆ ಕೊರೋನಾ ಸೋಂಕು ತಾಕದಂತೆ ಜೀವಿಸುವುದು ಬೆಳೆಸಿಕೊಳ್ಳಬೇಕಿದೆ ಎಂದು ಹೇಳಿದರು.
ದೊಣ್ಣೆಯಿಂದ ರೈತರ ಮೇಲೆ ಹಲ್ಲೆ ಮಾಡಿದ ಅರಣ್ಯಾಧಿಕಾರಿ
ಪ್ರಸ್ತುತ ಕೊರೋನಾ ಸೋಂಕು ಹೆಚ್ಚುತ್ತಿರುವುದು ಆತಂಕಕಾರಿ ವಿಚಾರವಾಗಿದೆ. ಕೊರೋನಾ ನಿಯಂತ್ರಣಾ ಕ್ರಮಗಳೊಂದಿಗೆ, ಎಲ್ಲ ಆರೋಗ್ಯ ಕೇಂದ್ರಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿ ವೈದ್ಯಕೀಯ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ದಿಟ್ಟಹೆಜ್ಜೆಯನ್ನಿಟ್ಟಿದೆ. ಪ್ರಕರಣಗಳ ಸಂಖ್ಯೆ ಹೆಚ್ಚಾದರೂ ಸೂಕ್ತ ನಿರ್ವಹಣೆ ಮಾಡಲು ಸರ್ಕಾರ ಸಜ್ಜಾಗಿದೆ ಎಂದರು.
ಬೆಂಗಳೂರು ಸೇರಿದಂತೆ ಇತರೆ ನಗರ ಪ್ರದೇಶಗಳಲ್ಲಿ ಸೋಂಕಿತ ಸಂಖ್ಯೆ ನಿರೀಕ್ಷೆಗೂ ಮೀರಿ ಹೆಚ್ಚುತ್ತಿರುವುದರಿಂದ ಕೆಲ ಲೋಪಗಳು ಕಂಡು ಬರುತ್ತಿದ್ದು, ತ್ವರಿತವಾಗಿ ಸಮಸ್ಯೆ ಬಗೆಹರಿಸಲಾಗುತ್ತಿದೆ. ಚೀನಾ ಹಾಗೂ ಪಾಕಿಸ್ತಾನದ ಅತಿಕ್ರಮಣ, ದೇಶದಲ್ಲಿಯೇ ಇರುವ ಆತಂಕವಾದಿಗಳ ಉಪಟಳ ಇವುಗಳ ನಡುವೆ ದೇಶವನ್ನು ಕೊರೋನಾ ಸಂಕಷ್ಟವನ್ನು ಸಮರ್ಥವಾಗಿ ಎದುರಿಸುತ್ತಿರುವ ಸಂದರ್ಭದಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡದೇ ಒಗ್ಗಟ್ಟಿನೊಂದಿಗೆ ಸಮಸ್ಯೆ ಎದುರಿಸಲು ಸಾಥ್ ನೀಡಬೇಕಿದೆ. ಚೀನಾ ಒಂದು ಇಂಚು ಪ್ರದೇಶವನ್ನು ಅತಿಕ್ರಮಣ ಮಾಡಲು ಬಿಡಲ್ಲ. ಚೀನಾ ಎಷ್ಟೇ ಪ್ರಬಲ ರಾಷ್ಟ್ರವಾಗಿದ್ದರೂ ಎಲ್ಲ ರೀತಿಯಲ್ಲೂ ಎದುರಿಸುವ ಶಕ್ತಿ ಭಾರತಕ್ಕಿದೆ ಎಂದು ಹೇಳಿದರು.
ಹೋಮ್ ಕೇರ್ ವಿಧಾನದಲ್ಲಿ ಚಿಕಿತ್ಸೆ:
ಕೊರೋನಾ ಸೋಂಕಿನ ಲಕ್ಷಣಗಳಿಲ್ಲದವರಿಗೆ, ಯುವಕರಿಗೆ ಹಾಗೂ ಗಂಭೀರ ಸಮಸ್ಯೆ ಇಲ್ಲದ ಸೋಂಕಿತರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡುವ ಹೋಮ್ ಕೇರ್ ವಿಧಾನವನ್ನು ಅನುಸರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಎಲ್ಲ ವೈದ್ಯಕೀಯ ಸೇವೆಗಳನ್ನು ಸೋಂಕಿತರ ಮನೆಗೆ ತಲುಪಿಸುವ ಹೋಮ್‌ಕೇರ್ ಕುರಿತು ಸದಸ್ಯದಲ್ಲಿಯೇ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಲಿದೆ ಎಂದು ಉಪ ಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಮನೆಯಂಗಳಲ್ಲಿ ಒಂದೆರಡಲ್ಲ, 13 ಹೆಬ್ಬಾವಿನ ಮರಿ..!
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅಭಿಮಾನ ಪಡಲಿ, ದುರಾಭಿಮಾನ ಬೇಡ. ಮೋದಿ ಅವರ ಕಾರ್ಯಗಳನ್ನು ನೋಡಿ ವಿಶ್ವವೇ ಹೆಮ್ಮೆ ಪಡುತ್ತಿದೆ. ಇಂತಹ ಸಮಯದಲ್ಲಿ ದುರಾಭಿಮಾನ ವ್ಯಕ್ತಪಡಿಸುವುದು ಸರಿಯಲ್ಲಿ ಎಂದು ಸಚಿವ ಅಶ್ವತ್ಥನಾರಾಯಣ್ ಹೇಳಿದರು.