ಚಿಕ್ಕಮಗಳೂರು ಜಿಲ್ಲಾ ಪ್ರವಾಸಕ್ಕೆ ತೆರಳಲು ಇದೆ ಮುಕ್ತ ಅವಕಾಶ

By Kannadaprabha News  |  First Published Aug 30, 2020, 7:06 AM IST


ಕೊರೋನಾ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪ್ರವಾಸಕ್ಕೆ ತೆರಳಲು ಪ್ರವಾಸಿಗರಿಗೆ ಇಷ್ಟು ದಿನಗಳ ಕಾಲ ನಿರ್ಬಂಧ ವಿಧಿಸಲಾಗಿತ್ತು. ಆದರೆ ಪ್ರವಾಸಿಗರಿಗೆ ಇದ್ದ ನಿರ್ಬಂಧವನ್ನು ಇದೋಗ ಸಡಿಲಗೊಳಿಸಲಾಗಿದೆ. 


ಚಿಕ್ಕಮಗಳೂರು (ಆ.30)ಕೋವಿಡ್‌ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರವಾಸಿಗರ ಭೇಟಿಗೆ ಹೇರಲಾಗಿದ್ದ ನಿರ್ಬಂಧವನ್ನು ಸಡಿಲಗೊಳಿಸಿ ಜಿಲ್ಲಾಡಳಿತ ಶನಿವಾರ ಆದೇಶ ಹೊರಡಿಸಿದೆ.

ಪ್ರವಾಸಿಗರು ಗುಂಪಾಗಿ ಪ್ರಯಾಣಿಸಲು ಹಾಗೂ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಅವಕಾಶ ಇಲ್ಲ. ಬಸ್‌, ಟ್ಯಾಕ್ಸಿಗಳಲ್ಲಿ ಪ್ರಯಾಣಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. ಕಾರು, ದ್ವಿಚಕ್ರ ವಾಹನ, ಜೀಪ್‌ಗಳಲ್ಲಿ ಮಾತ್ರ ಆಗಮಿಸಬಹುದು. ಮಾಸ್ಕ್‌, ಸ್ಯಾನಿಟೈಸರ್‌ ಬಳಕೆ, ಸಾಮಾಜಿಕ ಅಂತರ ನಿಯಮಗಳನ್ನು ಕಡ್ಡಾಯ ಪಾಲಿಸಬೇಕು.

Tap to resize

Latest Videos

ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು, ಮೂತ್ರ ವಿಸರ್ಜನೆ, ತಿಂಡಿ ತಿನಿಸು ಇತರೆ ಸಾಮಗ್ರಿಗಳನ್ನು ಎಲ್ಲೆಂದರಲ್ಲಿ ಬಿಸಾಡುವುದು ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಆದೇಶದಲ್ಲಿ ತಿಳಿಸಿದ್ದಾರೆ.

ದೇಶದಲ್ಲಿ ಕಳೆದ ಮಾರ್ಚ್ ತಿಂಗಳಿನಿಂದ ಕೊರೋನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ಇದೀಗ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4 ಲಕ್ಷದಷ್ಟಾಗಿದೆ. ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಹಲವು ಪ್ರವಾಸಿ ತಾಣಗಳ ಭೇಟಿಯನ್ನು ರದ್ದು ಮಾಡಲಾಗಿತ್ತು. ಪ್ರವಾಸಿಗರಿಗೆ ಹಲವು ಪ್ರದೇಶಗಳಿಗೆ ಭೇಟಿ ನೀಡಲು ಅವಕಾಶ ನೀಡುತ್ತಿರಲಿಲ್ಲ. 

ಇದೀಗ ಮತ್ತೆ ಎಂದಿನಂತೆ ಜನಜೀವನ ಆಗುತ್ತಿದ್ದು, ಕೊರೋನಾ ಆತಂಕದ ನಡುವೆಯೂ ಹಲವು ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಅವಕಾಶ ನೀಡಲಾಗುತ್ತಿದೆ.

click me!