ಎಕ್ಸಪ್ರೆಸ್‌ವೇ ಕಾಮಗಾರಿ ಪೂರ್ಣಗೊಳ್ಳದೆ ಸಂಚಾರ ಬೇಡ

By Kannadaprabha NewsFirst Published Mar 21, 2023, 7:05 AM IST
Highlights

ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಕಾಮಗಾರಿ ಪೂರ್ಣಗೊಳ್ಳುವವರೆಗೆ ಸಂಚಾರ ಸ್ಥಗಿತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.

  ಮೈಸೂರು :  ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಕಾಮಗಾರಿ ಪೂರ್ಣಗೊಳ್ಳುವವರೆಗೆ ಸಂಚಾರ ಸ್ಥಗಿತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.

ಮಳೆಯಿಂದಾಗಿ ಈ ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಎನ್‌ಎಚ್‌ 275 ಈ ರಸ್ತೆಯಲ್ಲಿ ಅಪಘಾತ, ದರೋಡೆ ನಡೆಯುತ್ತಿದೆ. ಪೆಟ್ರೋಲ್‌ ಬಂಕ್‌ ಮತ್ತು ಶೌಚಾಲಯ ವ್ಯವಸ್ಥೆ ಇಲ್ಲದೆ ತೊಂದರೆ ಉಂಟಾಗುತ್ತಿದೆ. ಇದರ ಜೊತೆಗೆ ದುಪ್ಪಟ್ಟು ಟೋಲ್‌ ಪಾವತಿಸುತ್ತಿರುವುದರಿಂದ ಸಾರ್ವಜನಿಕರು ತೊಂದರೆಗೆ ಒಳಗಾಗಿದ್ದಾರೆ ಎಂದು ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಸುದ್ದಿಗೋಷ್ಠಿಯಲ್ಲಿ ಸೋಮವಾರ ದೂರಿದರು.

ಎಕ್ಸ್‌ಪ್ರೆಸ್‌ ವೇ ಜೊತೆಗೆ ಸವೀರ್‍ಸ್‌ ರಸ್ತೆ ಕಾಮಗಾರಿಯೂ ಪೂರ್ಣಗೊಳ್ಳಬೇಕು. ಇದಕ್ಕೆ ಸರ್ಕಾರ ಸ್ಪಂದಿಸದಿದ್ದರೆ 101 ವಾಹನಗಳ ಜತೆ ಚಳವಳಿ ನಡೆಸಿ ಪ್ರತಿಭಟಿಸಲಾಗುವುದು ಎಂದು ಅವರು ಎಚ್ಚರಿಸಿದರು.

ಸೆಸ್‌್ಕ ಎದುರು ಪ್ರತಿಭಟನೆ:

ಬೇಸಿಗೆ ವೇಳೆ ರೈತರು ಕೃಷಿ ಬೆಳೆ ಮತ್ತು ವಾಣಿಜ್ಯ ಬೆಳೆ ಕಾಪಾಡಿಕೊಳ್ಳಲು ಪಂಪ್‌ಸೆಟ್‌ ಮೇಲೆ ಹೆಚ್ಚು ಅವಲಂಬನೆ ಆಗುತ್ತಾರೆ. ಆದರೆ ಸೆಸ್‌್ಕ ಆರಂಭದಲ್ಲಿಯೇ ರೈತರಿಗೆ ಶಾಕ್‌ ನೀಡುತ್ತಿದೆ. ಇದರಿಂದ ರೈತರಿಗೆ ತೊಂದರೆ ಆಗುತ್ತಿದೆ. ಈ ಬಗ್ಗೆ ರೈತರು ಅಧಿಕಾರಿಗಳ ಜೊತೆ ಸಭೆ ನಡೆಸಲು ತೀರ್ಮಾನಿಸಿದ್ದು, ಹತ್ತು ಗಂಟೆ ಗುಣಾತ್ಮಕ ವಿದ್ಯುತ್‌ ಪೂರೈಕೆ, 75 ಗಂಟೆ ಒಳಗೆ ಟ್ರಾನ್ಸ್‌ಫಾರ್ಮರ್‌ ದುರಸ್ತಿಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾ. 26 ರಂದು ಸೆಸ್‌್ಕ ಎದುರು ಪ್ರತಿಭಟಿಸಲು ಮುಂದಾಗಿದ್ದೇವೆ ಎಂದರು.

ಚುನಾವಣೆ ವೇಳೆ ಜನರ ಸಮಸ್ಯೆ ಕುರಿತು ಚರ್ಚೆ ಆಗದೆ ಕೆಲಸಕ್ಕೆ ಬಾರದ ಮತ್ತು ಮತೀಯವಾದದ ವಿಷಂåÜು ಚರ್ಚೆ ಆಗುತ್ತಿದೆ. ಕಬ್ಬು ಬೆಳೆಗಾರರ ಸಮಸ್ಯೆಗೆ ನಾವು ಸ್ಪಂದಿಸಿದ್ದೇವೆ. ಆದರೆ ಸಮಸ್ಯೆ ಇಂದಿಗೂ ಬಗೆಹರಿದಿಲ್ಲ. ಉರಿಗೌಡ-ನಂಜೇಗೌಡ ಅವರ ಬಗ್ಗೆ ನಾನು ಇತಿಹಾಸದಲ್ಲಿ ಓದಿಲ್ಲ. ಇದನ್ನು ಏಕೆ ದೊಡ್ಡ ವಿಚಾರವನ್ನಾಗಿ ವåಾಡುತ್ತಿದ್ದಾರೆ ಗೊತ್ತಿಲ್ಲ ಎಂದು ಅವರು ಹೇಳಿದರು.

ಮೈಸೂರು ಜಿಲ್ಲೆಂåÜುಲ್ಲಿ ಸಾಕಷ್ಟುಸಮಸ್ಯೆ ಇದೆ. ಆದರೆ ಬಿಜೆಪಿಯವರು ಸಾಮರಸ್ಯ ಕದಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇಂತಹ ವಿಷಯ ಬಿಟ್ಟು ಜನರ ಸಮಸ್ಯೆಗಳ ಬಗ್ಗೆ ವåಾತನಾಡಬೇಕು. ಸರ್ವೋದಯ ಇಂಡಿಯಾ ಮತ್ತು ರೈತ ಸಂಘದವರು ಐದು ಕ್ಷೇತ್ರಗಳಲ್ಲಿ ಈಗಾಗಲೇ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಮಂಡಕಳ್ಳಿ ಮಹೇಶ್‌, ಮರಂಕಯ್ಯ ಇದ್ದರು.

ಬಣ್ಣ ಬಯಲು

ರಾಮನಗರ (ಮಾ.18): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒಂದು ವಾರದ ಹಿಂದಷ್ಟೇ ಉದ್ಘಾಟಿಸಿದ 8,500 ಕೋಟಿ ರೂ. ವೆಚ್ಚದ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ ದುಸ್ಥಿತಿ ಕಂಡು ರಾಜ್ಯದ ಜನರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಛೀಮಾರಿ ಹಾಕುತ್ತಿದ್ದಾರೆ. ರಸ್ತೆಯಲ್ಲಿ 3-4 ಅಡಿ ನೀರು ನಿಂತಿದ್ದು, ಕೆಲ ವಾಹನಗಳು ಕೆಟ್ಟು ಹೋದರೆ ಮತ್ತೆ ಕೆಲವು ಸರಣಿ ಅಪಘಾತಕ್ಕೀಡಾಗಿವೆ.

ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೇ.90 ಪೂರ್ಣಗೊಂಡಿದ್ದು, ಇನ್ನೂ ಹಲವು ಕಾಮಗಾರಿಗಳು ಬಾಕಿಯಿವೆ. ಆದರೆ, ತರಾತುರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾ.12ರಂದು ಬಂದು ರಸ್ತೆಯನ್ನು ಲೋಕಾರ್ಪಣೆ ಮಾಡಿ ಹೋಗಿದ್ದಾರೆ. ಇದಾದ ಎರಡು ದಿನಗಳ ನಂತರ ಮಾ.14ರಂದು ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್‌ವೇಗೆ ಟೋಲ್‌ ಸಂಗ್ರವನ್ನೂ ಆರಂಭಿಸಲಾಗಿದೆ. ಆದರೆ ಈ ರಸ್ತೆಯಲ್ಲಿ ದೊಡ್ಡ ಮಟ್ಟದಲ್ಲಿ ನೀರು ನಿಲ್ಲುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. 8,480 ಕೋಟಿ ರೂ. ಖರ್ಚು ಮಾಡಿ ನಿರ್ಮಿಸಲಾಗುತ್ತಿರುವ ರಸ್ತೆಯಲ್ಲಿ ನೀರು ನಿಂತಿರುವುದಕ್ಕೆ ರಸ್ತೆ ಬಳಕೆದಾರರು ಮೋದಿ ಹಾಗೂ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಮೈಸೂರು ಹೆದ್ದಾರಿ ಟೋಲ್‌ಗೆ ಪ್ರಕಾಶ್‌ ರಾಜ್‌ ವಿರೋಧ: ರಸ್ತೆ ಹಾಕ್ಸಿದ್‌ ನಮ್‌ ದುಡ್ಡು- ನಾವೇ ಟೋಲ್‌ ಕಟ್ಟಬೇಕು

ಕೆಟ್ಟು ನಿಂತ ಕಾರಿಗೆ ಲಾರಿ ಡಿಕ್ಕಿ: ಮಳೆ ನೀರಿಗೆ ಕೆಟ್ಟುನಿಂತ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. ಹೆದ್ದಾರಿ ಪ್ರಾಧಿಕಾರಕ್ಕೆ ಕರೆ ಮಾಡಿದರು ಯಾರೊಬ್ಬರು ನೆರವಿಗೆ ಬಂದಿಲ್ಲಎಂದು ಸರ್ಕಾರ ಹಾಗೂ ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುಬಾರಿ ಟೋಲ್‌ ಕಟ್ಟಿದರೂ ಸರಿಯಾದ ವ್ಯವಸ್ಥೆ ಇಲ್ಲ, ಹೆದ್ದಾರಿ ಕ್ರೆಡಿಟ್ ಗಾಗಿ ಕಿತ್ತಾಡುವ ರಾಜಕೀಯ ನಾಯಕರು ಸಮಸ್ಯೆ ಎದುರಾದಾಗ ಸ್ಥಳಕ್ಕೆ ಬರುವುದಿಲ್ಲ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಗರಂ ಆಗಿದ್ದಾರೆ.

ಕಳೆದ ವರ್ಷವೂ ಸೃಷ್ಟಿಯಾಗಿದ್ದ ಅವಾಂತರ: ಇನ್ನೂ ಕಳೆದ ವರ್ಷ ಕೂಡ ಎಕ್ಸ್‌ಪ್ರೆಸ್‌ ವೇ ನಲ್ಲಿ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಾಕಷ್ಟು ವಾಹನಗಳು ಜಲಾವೃತಗೊಂಡು ಅವಾಂತರ ಸೃಷ್ಟಿಯಾಗಿತ್ತು. ಆಗ ಕಾಮಗಾರಿ ಪ್ರಗತಿ ಹಂತದಲ್ಲಿದೆ ಸಮಸ್ಯೆ ಬಗೆಹರಿಸುತ್ತೇವೆ ಎಂದು ಅಧಿಕಾರಿಗಳು ಸಬೂಬು ಹೇಳಿದ್ದರು. ಆದರೆ ಇದೀಗ ಮತ್ತೆ ಅದೇ ಸ್ಥಳದಲ್ಲಿ ನೀರು ನಿಂತಿರೋದು ಅವೈಜ್ಞಾನಿಕ ಕಾಮಗಾರಿಗೆ ಸಾಕ್ಷಿಯಾಗಿವೆ. ಉದ್ಘಾಟನೆಯಾದ ಒಂದೇ ವಾರಕ್ಕೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಹೆದ್ದಾರಿ ಪ್ರಾಧಿಕಾರದಿಂದ ನೀರು ಹರಿಸಲು ಯತ್ನ: ಇನ್ನೂ ಹೆದ್ದಾರಿಯಲ್ಲಿ ಮಳೆ ಅವಾಂತರದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಡಿಬಿಎಸ್ ಸಿಬ್ಬಂದಿ ನೀರನ್ನ ಹೊರಹಾಕುವ ಕೆಲಸಕ್ಕೆ ಮುಂದಾಗಿದ್ದಾರೆ. ಜೆಸಿಬಿ ಹಾಗೂ ಹಿಟಾಚಿ ವಾಹನಗಳ ಮೂಲಕ ಡ್ರೈನೇಜ್ ವ್ಯವಸ್ಥೆ ಮಾಡಿ ನೀರು ಹೊರಹಾಕಿದ್ದಾರೆ. ಇಷ್ಟಾದರೂ ಸ್ಥಳಕ್ಕೆ ಬಾರಿಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಸ್ಥಳೀಯರು ಕಿಡಿಕಾರಿದ್ದಾರೆ. ಒಟ್ಟಾರೆ ದುಬಾರಿ ಟೋಲ್ ಕಟ್ಟಿ ಎಕ್ಸ್‌ಪ್ರೆಸ್‌ ವೇ ಸಂಚಾರ ಮಾಡಿದ್ರೂ ವಾಹನ ಸವಾರರು ಆತಂಕಕ್ಕೆ ಒಳಗಾಗುವ ಪರಿಸ್ಥಿತಿ ಎದುರಾಗಿದೆ. ಇನ್ನಾದರೂ ಹೆದ್ದಾರಿ ಪ್ರಾಧಿಕಾರ ಸಮಸ್ಯೆ ಬಗೆಹರಿಸುವುದೇ ಎಂದು ಕಾದುನೋಡಬೇಕಿದೆ.

click me!