ಜ್ವರವಿದ್ದರೂ ಉತ್ತರ ಕರ್ನಾಟಕದ ಸಮಸ್ಯೆ ಆಲಿಸಹೊರಟ HDK

Published : Aug 10, 2019, 12:41 AM ISTUpdated : Aug 10, 2019, 12:43 AM IST
ಜ್ವರವಿದ್ದರೂ ಉತ್ತರ ಕರ್ನಾಟಕದ ಸಮಸ್ಯೆ ಆಲಿಸಹೊರಟ HDK

ಸಾರಾಂಶ

ಅನಾರೋಗ್ಯದ ಕಾರಣದಿಂದ ನೆರೆ  ಸಂತ್ರಸ್ತರ ಸಮಸ್ಯೆ ಆಲಿಸುವುದಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಇದೀಗ ನಿರ್ಧಾರ ಬದಲಿಸಿ ಉತ್ತರ ಕರ್ನಾಟಕ ಪ್ರವಾಸ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

ಬೆಂಗಳೂರು[ಆ. 09]  ಅನಾರೋಗ್ಯವಿದ್ದರೂ, ರಾಜ್ಯದ ಜನರು ನೆರೆಯಿಂದ ನಲುಗುತ್ತಿರುವುದು ಕಂಡು ನನ್ನ ಮನಸ್ಸು ತುಡಿಯುತ್ತಿದೆ. ನಾಳೆ (10/8/19) ಬೆಳಗ್ಗೆ ಬೆಳಗಾವಿ, ಸಂಕೇಶ್ವರ, ಚಿಕ್ಕೋಡಿ, ನರಗುಂದ, ನವಲಗುಂದ ಹಾಗೂ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲಿದ್ದೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ಜ್ವರದಿಂದ ಬಳಲುತ್ತಿರುವ ನಾನು ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದರು. ಆದರೆ ಈಗ ಪ್ರವಾಸ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ.

ಮಹಾರಾಷ್ಟ್ರದಿಂದ ಬಿಡುಗಡೆಯಾಗಿರುವ ನೀರು ಮತ್ತು ಉತ್ತರ ಕರ್ನಾಕದ  ಮಳೆ ಬೆಳಗಾವಿ ಜಿಲ್ಲೆಯ ಶೇ. 70 ರಷ್ಟು ಪ್ರದೇಶವನ್ನು ಜಲಾವೃತ ಮಾಡಿದ್ದು ಸೇನಾ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ.

PREV
click me!

Recommended Stories

ಉಡುಪಿ ನೀರು ಸೇದುವಾಗ ಅಮ್ಮನ ಕೈತಪ್ಪಿ ಬಾವಿಗೆ ಬಿದ್ದ ಮಗು; ತಾಯಿ ಬಾವಿಗಿಳಿಯುವಷ್ಟರಲ್ಲಿ ಮಗು ಸಾವು!
'ಮಾದೇಶ್ವರ ದಯಬಾರದೆ..' ಯೂಟ್ಯೂಬ್‌ನಲ್ಲಿ ಟ್ರೆಂಡ್‌ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡು!