ಕರ್ನಾಟಕ ಬಜೆಟ್‌ 2020: ಉತ್ತರ ಕರ್ನಾಟಕಕ್ಕೆ ಸಿಕ್ಕಿದ್ದೇನು?

By Suvarna NewsFirst Published Mar 5, 2020, 1:50 PM IST
Highlights

ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ 500 ಕೋಟಿ| ಹಾವೇರಿ ಜಿಲ್ಲೆಯ ಶಿಗ್ಗಾಂವಿ ಹಾಗೂ ಕಾರ್ಕಳದಲ್ಲಿ ನೂತನ ಜವಳಿ ಪಾರ್ಕ್ ಸ್ಥಾಪನೆ|ಜವಳಿ ಪಾರ್ಕ್ ಸ್ಥಾಪನೆಯಿಂದ 3000 ಉದ್ಯೋಗ ಸೃಷ್ಟಿ| ಧಾರವಾಡ-ಬೆಳಗಾವಿ ನಡುವೆ ಕಿತ್ತೂರು ಮೂಲಕ ರೈಲು ಮಾರ್ಗ ನಿರ್ಮಾಣ| 

ಬೆಂಗಳೂರು(ಮಾ.05): ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬಜೆಟ್‌ನಲ್ಲಿ ಮಹದಾಯಿ ಯೋಜನೆಗೆ ಬಜೆಟ್‌ನಲ್ಲಿ 500 ಕೋಟಿ ರು. ಮೀಸಲು ಇಡುವ ಮೂಲಕ ಈ ಭಾಗದ ಜನರ ಮನಸ್ಸು ಗೆದ್ದಿದ್ದಾರೆ. ಇನ್ನು ಉತ್ತರ ಕರ್ನಾಟಕದ ಯಾವ್ಯಾವ ಜಿಲ್ಲೆಗೆ ಎಷ್ಟೆಷ್ಟು ಅನುದಾನ ನೀಡಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ.

"

ಕೊಟ್ಟ ಮಾತು ಉಳಿಸಿಕೊಂಡಿರುವ ಸಿಎಂ ಯಡಿಯೂರಪ್ಪ ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ 500 ಕೋಟಿ ರು. ನೀಡಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ಹಾಗೂ ಕಾರ್ಕಳದಲ್ಲಿ ನೂತನ ಜವಳಿ ಪಾರ್ಕ್ ಸ್ಥಾಪನೆ ಮಾಡಲಾಗವುದು ಎಂದು ಘೋಷಿಸಿದ್ದಾರೆ. ನೂತನ ಜವಳಿ ಪಾರ್ಕ್ ಸ್ಥಾಪನೆಯಿಂದ 3000 ಉದ್ಯೋಗ ಸೃಷ್ಟಿಯಾಗಲಿದೆ. ಧಾರವಾಡ-ಬೆಳಗಾವಿ ನಡುವೆ ಕಿತ್ತೂರು ಮೂಲಕ ರೈಲು ಮಾರ್ಗ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ. 

ಭಾವನೆಗಳಿಗೆ BSY ಸ್ಪಂದನೆ: 'ಯಡಿಯೂರಪ್ಪಗೆ ಮಹದಾಯಿ ಹೋರಾಟಗಾರರಿಂದ ಅಭಿನಂದನೆ'

ಹೈದ್ರಾಬಾದ್ ಕರ್ನಾಟಕವನ್ನ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಲಾಗುವುದು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 1500 ಕೋಟಿ ರು. ಮೀಸಲು, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕೃಷಿ ಹಾಗೂ ಸಾಂಸ್ಕೃತಿಕ ಸಂಘ ರಚನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

click me!