ಉತ್ತರ ಕರ್ನಾಟಕಕ್ಕೆ ಅನ್ಯಾಯ: ಹೊಸ ವರ್ಷದಂದೇ ಪ್ರತ್ಯೇಕ ರಾಜ್ಯದ ಕೂಗು

By Suvarna News  |  First Published Jan 1, 2020, 10:57 AM IST

ಬೆಳಗಾವಿಯಲ್ಲಿ ಮತ್ತೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕೂಗು| ಧ್ವಜಾರೋಹಣಕ್ಕೆ ಯತ್ನ| ಹಸಿರು ಹಳದಿ ಕೆಂಪು ಬಣ್ಣದ ಧ್ವಜ ವಶಪಡಿಸಿಕೊಂಡ ಪೊಲೀಸರು| ಪ್ರತಿ ವರ್ಷ ಜನವರಿ 1 ರಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯೋತ್ಸವ ಆಚರಣೆಗೆ ನಿರ್ಧಾರ|


ಬೆಳಗಾವಿ(ಜ.01): ಹೊಸ ವರ್ಷದ ದಿನದಂದೇ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬಂದಿದೆ. ಹೌದು, ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ವಶಕ್ಕೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಬುಧವಾರ ಹಿರೇಬಾಗೇವಾಡಿ ಗ್ರಾಮದಲ್ಲಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಅಡಿವೇಶ್ ಇಟಗಿ ನೇತೃತ್ವದಲ್ಲಿ ಪ್ರತಿಭಟನೆ  ನಡೆಸಿ ಧ್ವಜಾರೋಹಣಕ್ಕೆ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಹಸಿರು ಹಳದಿ ಕೆಂಪು ಬಣ್ಣದ ಧ್ವಜವನ್ನು ವಶಪಡಿಸಿಕೊಂಡಿದ್ದಾರೆ. 

Tap to resize

Latest Videos

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ನಿರಂತರವಾಗಿ ಉತ್ತರ ಕರ್ನಾಟಕಕ್ಕೆ ಅನ್ಯಾಯ, ತಾರತಮ್ಯವಾಗುತ್ತಿದೆ. ಹೀಗಾಗಿ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಕಾರ್ಯಕರ್ತರು ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿದ್ದಾರೆ. ಪ್ರತಿ ವರ್ಷ ಜನವರಿ 1 ರಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯೋತ್ಸವ ಆಚರಣೆಗೆ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಕಾರ್ಯಕರ್ತರು ನಿರ್ಧರಿಸಿದ್ದಾರೆ. 

ಉತ್ತರ ಕರ್ನಾಟಕವನ್ನು ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷಿಸುತ್ತಿದೆ, ಬೆಳಗಾವಿಯ ಸುವರ್ಣಸೌಧದಲ್ಲಿ ಇಲಿ, ಹೆಗ್ಗಣ, ಹಾವುಗಳು ಓಡಾಡುತ್ತಿವೆ. ಸುವರ್ಣಸೌಧಕ್ಕೆ ಸರ್ಕಾರಿ ಕಚೇರಿಗಳನ್ನು ಸ್ಥಳಾಂತರ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

click me!