ಅ.28ರಿಂದ ಹಾಸನಾಂಬೆ ದರ್ಶನ: ಭಕ್ತರಿಗಿಲ್ಲ ನೇರ ಅವಕಾಶ

Kannadaprabha News   | Asianet News
Published : Oct 08, 2021, 12:11 PM ISTUpdated : Oct 08, 2021, 12:14 PM IST
ಅ.28ರಿಂದ ಹಾಸನಾಂಬೆ ದರ್ಶನ: ಭಕ್ತರಿಗಿಲ್ಲ ನೇರ ಅವಕಾಶ

ಸಾರಾಂಶ

*  ಕೊರೋನಾ ಹಿನ್ನೆಲೆ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧಾರ *  ಹಾಸನ ನಗರದಲ್ಲಿ ದೀಪಾಲಂಕಾರ ಹಾಗೂ ಪುಷ್ಪಲಂಕಾರ ವ್ಯವಸ್ಥೆ  *  ದಸರಾ ಆಚರಣೆಯ ಮಾರ್ಗ ಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ 

ಹಾಸನ(ಅ.08): ಈ ಬಾರಿ ಹಾಸನಾಂಬೆ(Hasanabe) ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಅ.28 ರಿಂದ ನ.6 ರವರೆಗೆ ನಡೆಯಲಿದ್ದು, ಕೊರೋನಾ(Coronavirus) ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. 

ಪರಿಣಾಮವಾಗಿ ಈ ಬಾರಿಯೂ ಸಾರ್ವಜನಿಕರಿಗೆ ದೇವಿಯ ನೇರ ದರ್ಶನ ಇರುವುದಿಲ್ಲ. ಕಳೆದ ಬಾರಿಯಂತೆ ನಗರದ 7-8 ಕಡೆ ಎಲ್‌ಇಡಿ ದೊಡ್ಡ ಪರದೆ ಅಳವಡಿಸುವ ಮೂಲಕ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. 
ಗುರುವಾರ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಹಾಸನಾಂಬಾ ಉತ್ಸವಕ್ಕೆ ಚಾಲನೆ ನೀಡಲು ಈ ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹಾಗೂ ಆದಿಚುಂಚನಗಿರಿಯ ನಿರ್ಮಲಾನಂದ ಸ್ವಾಮೀಜಿ(Niramalanand Swamiji) ಅವರನ್ನು ಆಹ್ವಾನಿಸಲಾಗುವುದು. ದೇವಿಗೆ ನೆರವೇರಿಸುವ ಪೂಜೆಯನ್ನು ಆನ್‌ಲೈನ್‌ ಮೂಲಕ ಪ್ರಸಾರ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಶಾಸಕ ಪ್ರೀತಂ ಗೌಡ ವಿರುದ್ಧ ಗಂಭೀರ ಆರೋಪ : ಹಾಸನಾಂಬೆ ಮುಂದೆ ಆಣೆ ಮಾಡಲು ಸವಾಲು

ರಾಜ್ಯ ಸರ್ಕಾರ ದಸರಾ ಆಚರಣೆಯ ಮಾರ್ಗ ಸೂಚಿಯನ್ನು ಪ್ರಕಟಿಸಿದ್ದು, ಜೊತೆಗೆ ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೊರೋನಾ ಸೋಂಕಿನ ದರ ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯೂ ಹಾಸನಾಂಬಾ ನೇರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡದಿರಲು ತೀರ್ಮಾನಿಸಿರುವುದಾಗಿ ತಿಳಿಸಿದರು.

ನಗರದಲ್ಲಿ ದೀಪಾಲಂಕಾರ ಹಾಗೂ ಪುಷ್ಪಲಂಕಾರ ವ್ಯವಸ್ಥೆ ಮಾಡಲಾಗುತ್ತದೆ. ವಿಶೇಷ ಪೂಜೆ ಹೊರತುಪಡಿಸಿ ಧಾರ್ಮಿಕ ಕಾರ್ಯಕ್ರಮಗಳು ಮಾತ್ರ ನಡೆಯಲಿದೆ. ಕಳೆದ ಬಾರಿಯಂತೆ ನಗರದ 7-8 ಕಡೆ ಎಲ್‌ಇಡಿ ದೊಡ್ಡ ಪರದೆ ಅಳವಡಿಸುವ ಮೂಲಕ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ವಿದ್ಯುತ್‌ ದೀಪಾಲಂಕಾರ, ಹೂವಿನ ಅಲಂಕಾರಗಳು, ಉತ್ಸವ ಕುರಿತ ಫ್ಲೆಕ್ಸ್‌ ಹಾಕಲಾಗುವುದು ಎಂದರು.ಹಾಸನಾಂಬಾ ಉತ್ಸವದಲ್ಲಿ ಯಾವುದೇ ಸಂಪ್ರದಾಯಗಳು, ಆಚರಣೆಗಳು ಮತ್ತು ವಿಜೃಂಭಣೆಗೆ ಕೊರತೆಯಾಗದಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
 

PREV
click me!

Recommended Stories

ಡಿವೈಡರ್‌ನಿಂದ ಹಾರಿ KSRTC ಬಸ್‌ಗೆ ಡಿಕ್ಕಿಯಾದ ಕಾರ್, ಮೂರು ಸಾವು ಚೆಲ್ಲಾಪಿಲ್ಲಿಯಾದ ಮೃತದೇಹಗಳು
ಸರ್ಕಾರಿ ಶಾಲೆ ಟಾಯ್ಲೆಟ್‌ ಸ್ವಚ್ಛತೆಗೆ ಉದ್ಯಮಿ ನೆರವು