ಕುಮಾರಸ್ವಾಮಿ ಏನಾದ್ರೂ ಹೇಳಲಿ, ಕಾಂಗ್ರೆಸ್ ಸೇರಲ್ಲ: ಶಿವರಾಮೇಗೌಡ ಸ್ಪಷ್ಟನೆ

By Kannadaprabha News  |  First Published Sep 28, 2019, 10:20 AM IST

ಕುಮಾರಸ್ವಾಮಿ ನನ್ನ ಬಗ್ಗೆ ಏನೂ ಬೇಕಾದರೂ ಮಾತನಾಡಲಿ. ಆದರೆ, ನಾನು ಕಾಂಗ್ರೆಸ್‌ ಪಕ್ಷ ಸೇರುವುದಿಲ್ಲ ಎಂದು ಮಾಜಿ ಸಂಸದ ಎಲ್. ಆರ್‌.ಶಿವರಾಮೇಗೌಡ ಹೇಳಿದ್ದಾರೆ. ನಾನು ಜೆಡಿಎಸ್‌ ಬಿಡುವ ಪ್ರಶ್ನೆಯೇ ಇಲ್ಲ. ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರೂ ಅಣ್ಣತಮ್ಮಂದಿರಂತೆ ಇದ್ದೇವೆ ಎಂದಿದ್ದಾರೆ.


ಮಂಡ್ಯ(ಸೆ.28): ನಾನು ಜೆಡಿಎಸ್‌ ಬಿಡುವ ಪ್ರಶ್ನೆಯೇ ಇಲ್ಲ. ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರೂ ಅಣ್ಣತಮ್ಮಂದಿರಂತೆ ಇದ್ದೇವೆ. ನಮ್ಮಿಬ್ಬರ ನಡುವಿನ ಸಣ್ಣ ಪುಟ್ಟವ್ಯತ್ಯಾಸಗಳನ್ನು ನಾವೇ ಸರಿಪಡಿಸಿಕೊಳ್ಳುತ್ತೇವೆ ಎಂದು ಮಾಜಿ ಸಂಸದ ಎಲ್. ಆರ್‌.ಶಿವರಾಮೇಗೌಡ ಹೇಳಿದ್ದಾರೆ.

ನಾಗಮಂಗಲ ಪಟ್ಟಣದ ಪ್ರವಾಸಿಮಂದಿರಲ್ಲಿ ಶುಕ್ರವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿವರಾಮೇಗೌಡರು, ಬೆಂಗಳೂರಿನ ಖಾಸಗಿ ಹೋಟೆಲೊಂದರಲ್ಲಿ ನಡೆಯುತ್ತಿದ್ದ ಕಾಂಗ್ರೆಸ್‌ ಪಕ್ಷದ ಸಭೆಯಲ್ಲಿ ಕಾಣಿಸಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ನನಗೂ ಕಾಂಗ್ರೆಸ್‌ ಸಭೆಗೂ ಯಾವುದೇ ಸಂಬಂಧವಿಲ್ಲ. ಆತ್ಮೀಯ ಸ್ನೇಹಿತರೊಬ್ಬರನ್ನು ಭೇಟಿಮಾಡುವ ಸಲುವಾಗಿ ನಾನು ಅಲ್ಲಿಗೆ ಹೋಗಿದ್ದ ವೇಳೆ ಅಲ್ಲಿ ಕಾಂಗ್ರೆಸ್‌ ಸಭೆ ನಡೆಯುತ್ತಿತ್ತು. ಅದನ್ನೇ ನೆಪ ಮಾಡಿಕೊಂಡು ಕೆಲ ಮಾಧ್ಯಮದವರು ಜನರಿಗೆ ತಪ್ಪು ಸಂದೇಶ ನೀಡಿದ್ದಾರೆ ಎಂದರು.

Latest Videos

undefined

ಮೇಲಾಧಿಕಾರಿ ಲಂಚಕ್ಕೆ ಬೇಡಿಕೆ: ಬಸ್‌ ಚಾಲಕ ಆತ್ಮಹತ್ಯೆಗೆ ಯತ್ನ

ಪಕ್ಷ ಸಂಘಟನೆ ಮಾಡುತ್ತೇನೆ:

ನಾನು ಜೆಡಿಎಸ್‌ ಪಕ್ಷದಲ್ಲಿ ಸಕ್ರಿಯವಾಗಿದ್ದುಕೊಂಡು ಪಕ್ಷ ಸಂಘಟನೆ ಮಾಡುತ್ತೇನೆ. ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರೇ ನಮ್ಮ ನಾಯಕರು, ಪಕ್ಷದ ವರಿಷ್ಠರು. ತಮ್ಮ ನಡುವೆ ಸಣ್ಣ ಪುಟ್ಟ ವ್ಯತ್ಯಾಸಗಳಿದ್ದರೆ ಅದನ್ನು ನಾವೇ ಸರಿಪಡಿಸಿಕೊಳ್ಳುತ್ತೇವೆ. ಆದರೆ ನಾನು ಜೆಡಿಎಸ್‌ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಈಗ ಕುಮಾರಸ್ವಾಮಿ ನನ್ನ ಬಗ್ಗೆ ಏನೂ ಬೇಕಾದರೂ ಮಾತನಾಡಲಿ. ಆದರೆ, ನಾನು ಕಾಂಗ್ರೆಸ್‌ ಪಕ್ಷ ಸೇರುವುದಿಲ್ಲ ಎಂದರು.

ಸ್ಪರ್ಧೆ ಮಾಡೋ ಆಸೆ ಇಲ್ಲ

ನಾನು ಜಿಪಂ ಸದಸ್ಯನಾಗಿ, ಶಾಸಕ ಸಂಸದನಾಗಿ ಜನರ ಸೇವೆ ಮಾಡಿದ್ದೇನೆ. ನನಗೆ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಆಸೆಯಿಲ್ಲ. ಅಂತಹ ಪರಿಸ್ಥಿತಿ ಎದುರಾದರೆ ನಾಗಮಂಗಲದಿಂದ ಸ್ಪರ್ಧಿಸುತ್ತೇನೆ ಹೊರತು ಬೇರೆ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ. ಸ್ಥಳೀಯ ಶಾಸಕ ಸುರೇಶ್‌ ಗೌಡರು ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಶ್ರಮಿಸಲಿ. ನಾನು ತಾಲೂಕಿನ ಜನರ ಸಣ್ಣ ಪುಟ್ಟಕೆಲಸಗಳನ್ನು ಮಾಡಿಕೊಡುವ ಜೊತೆಗೆ ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತೇನೆ ಎಂದಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಟಿ.ಕೃಷ್ಣಪ್ಪ, ಟಿ.ಕೆ.ರಾಮೇಗೌಡ, ಲಾರಿಚನ್ನಪ್ಪ ಇದ್ದರು.

ಮಂಡ್ಯ: ದಸರಾ ಪೆಂಡಾಲ್ ಹಾಕೋದಿಕ್ಕೂ JDS, BJP ಜಗಳ

click me!