Bengaluru: ಖಾಸಗಿ ಶಾಲೆಗಳಲ್ಲಿ ಕೊರೋನಾ ಮಾರ್ಗಸೂಚಿ ಪಾಲನೆಗೆ ಸೂಚನೆ

By Govindaraj S  |  First Published Dec 24, 2022, 8:16 AM IST

ವಿದೇಶಗಳಲ್ಲಿ ಕೊರೋನಾ ಪ್ರಕರಣ ಅಧಿಕವಾಗುತ್ತಿರುವ ಬೆನ್ನಲ್ಲೇ ರಾಜ್ಯದ ಖಾಸಗಿ ಶಾಲೆಗಳು ಕೊರೋನಾ ಸಮಯದಲ್ಲಿ ಅನುಸರಿಸುತ್ತಿದ್ದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟಗಳಾದ ರುಪ್ಸಾ ಮತ್ತು ಕ್ಯಾಮ್‌ ಸಂಘಟನೆಗಳು ಖಾಸಗಿ ಶಾಲೆಗಳಿಗೆ ಸೂಚಿಸಿವೆ. 


ಬೆಂಗಳೂರು (ಡಿ.24): ವಿದೇಶಗಳಲ್ಲಿ ಕೊರೋನಾ ಪ್ರಕರಣ ಅಧಿಕವಾಗುತ್ತಿರುವ ಬೆನ್ನಲ್ಲೇ ರಾಜ್ಯದ ಖಾಸಗಿ ಶಾಲೆಗಳು ಕೊರೋನಾ ಸಮಯದಲ್ಲಿ ಅನುಸರಿಸುತ್ತಿದ್ದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟಗಳಾದ ರುಪ್ಸಾ ಮತ್ತು ಕ್ಯಾಮ್‌ ಸಂಘಟನೆಗಳು ಖಾಸಗಿ ಶಾಲೆಗಳಿಗೆ ಸೂಚಿಸಿವೆ. ಶಾಲೆಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯು ಕೊರೋನಾ ಮಾರ್ಗಸೂಚಿಯನ್ನು ಪ್ರಕಟಿಸದಿದ್ದರೂ ತಮ್ಮ ಸಂಘಟನೆಗಳ ವ್ಯಾಪ್ತಿಯಲ್ಲಿ ಬರುವ ಖಾಸಗಿ ಶಾಲೆಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ರುಪ್ಸಾ ಮತ್ತು ಕ್ಯಾಮ್‌, ಹಿಂದಿನ ಮಾರ್ಗಸೂಚಿಗಳನ್ನೇ ಅನುಸರಿಸಿ ಎಂದು ತಿಳಿಸಿವೆ.

ವಿದ್ಯಾರ್ಥಿಗಳಿಗೆ ಶಾಲೆ ಸಮಯದಲ್ಲಿ ಜ್ವರ ಮತ್ತಿತರ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ಪಾಲಕರಿಗೆ ವಿಷಯ ತಿಳಿಸಿ ಮಕ್ಕಳನ್ನು ಮನೆಗೆ ಕಳುಹಿಸಬೇಕು. ಕಡ್ಡಾಯವಾಗಿ ಮಾಸ್‌್ಕ, ಸ್ಯಾನಿಟೈಸರ್‌ ಬಳಕೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂಬ ಸೂಚನೆಯನ್ನು ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಸಂಘಟನೆಗಳು ಸೂಚಿಸಿವೆ.

Tap to resize

Latest Videos

undefined

ಕೋವಿಡ್‌ ಎದುರಿಸಲು ಡಿ.27ರಂದು ತಾಲೀಮು: ಸಚಿವ ಸುಧಾಕರ್‌

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರುಪ್ಸಾ ಅಧ್ಯಕ್ಷ ಲೋಕೇಶ್‌ ತಾಳಿಕಟ್ಟೆ, ವಿದೇಶಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲೆಗಳ ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರೊಂದಿಗೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್‌ ನಡೆಸಿ ಅಭಿಪ್ರಾಯ ಸಂಗ್ರಹಿಸಲಾಯಿತು. ಈ ಹಿಂದೆ ಕೊರೋನಾ ಸಮಯದಲ್ಲಿ ಅನುಸರಿಸುತ್ತಿದ್ದ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಸೂಚಿಸಲಾಯಿತು ಎಂದು ಸ್ಪಷ್ಟಪಡಿಸಿದರು.

ಮೌಲ್ಯಾಂಕನ ವಿರುದ್ಧ ಪಿಐಎಲ್‌: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ನಡೆಸಲು ಹೊರಟಿರುವ ಮೌಲ್ಯಾಂಕನ ಪರೀಕ್ಷೆ ವಿರುದ್ಧ ಶೀಘ್ರದಲ್ಲೇ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಲಾಗುವುದು. ಇಂಗ್ಲಿಷ್‌ ಮತ್ತು ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ತಾರತಮ್ಯ ಮಾಡುತ್ತಿರುವುದನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು ಲೋಕೇಶ್‌ ತಾಳಿಕಟ್ಟೆ ವಿವರಿಸಿದರು.

16 ಜನರಲ್ಲಿ ಕೊರೋನಾ ಸೋಂಕು: ನಗರದಲ್ಲಿ ಶುಕ್ರವಾರ 16 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.1.39 ದಾಖಲಾಗಿದೆ. ಸೋಂಕಿನಿಂದ 37 ಗುಣಮುಖರಾಗಿದ್ದು, ಮೃತಪಟ್ಟ ವರದಿಯಾಗಿಲ್ಲ. ನಗರದಲ್ಲಿ 1,203 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಎಲ್ಲರೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 1377 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 

Corona Crisis: ಬಿಎಂಟಿಸಿ ಬಸ್‌ಗಳಲ್ಲಿ ಮಾಸ್ಕ್‌ ಕಡ್ಡಾಯ

70 ಮಂದಿ ಮೊದಲ ಡೋಸ್‌, 65 ಮಂದಿ ಎರಡನೇ ಡೋಸ್‌ ಮತ್ತು 1242 ಮಂದಿ ಮೂರನೇ ಡೋಸ್‌ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 1559 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 1356 ಆರ್‌ಟಿಪಿಸಿಆರ್‌ ಹಾಗೂ 194 ಮಂದಿಗೆ ರಾರ‍ಯಪಿಡ್‌ ಆ್ಯಂಟಿಜನ್‌ ಪರೀಕ್ಷೆ ನಡೆಸಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

click me!