ಜೂನ್ ತಿಂಗಳಿನಿಂದ ಮಳೆಗಾಲ ಆರಂಭವಾಗುವುದರಿಂದ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಅದರಂತೆ ಮಡಿಕೇರಿಯ ಬೆಟ್ಟದ ಮೇಲೆ ಮನೆಗಳಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ಮಡಿಕೇರಿ ನಗರಸಭೆ ಮಳೆಗಾಲದಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆಸಿದೆ.
ಮಡಿಕೇರಿ(ಮೇ 28): ಜೂನ್ ತಿಂಗಳಿನಿಂದ ಮಳೆಗಾಲ ಆರಂಭವಾಗುವುದರಿಂದ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಅದರಂತೆ ಮಡಿಕೇರಿಯ ಬೆಟ್ಟದ ಮೇಲೆ ಮನೆಗಳಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ಮಡಿಕೇರಿ ನಗರಸಭೆ ಮಳೆಗಾಲದಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆಸಿದೆ.
ಮಡಿಕೇರಿಯ ಮಂಗಳಾದೇವಿ ನಗರ, ಇಂದಿರಾ ನಗರ ಹಾಗೂ ಚಾಮುಂಡೇಶ್ವರಿ ನಗರದಲ್ಲಿ 300 ಮನೆಗಳು ಅಪಾಯಕಾರಿ ಸ್ಥಳದಲ್ಲಿವೆ ಎಂದು ಗುರುತಿಸಲಾಗಿದೆ. ಮಡಿಕೇರಿ ನಗರದ ಅಪಾಯದಂಚಿನಲ್ಲಿರುವ ಮನೆಯ ನಿವಾಸಿಗಳು ಮುಂಗಾರು ಮಳೆಯ ಸಂದರ್ಭದಲ್ಲಿ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚಿಸಿ, ಮುಂದಿನ ವಾರ ನೋಟಿಸ್ ಜಾರಿ ಮಾಡಲಾಗುತ್ತಿದೆ.
ಕಾರ್ಕಳದಲ್ಲಿ ಬೃಹತ್ ರಕ್ಕಸ ಮಿಡತೆ ಪತ್ತೆ!
ಮುಂಗಾರು ಮಳೆಯ ಅಬ್ಬರ ಜೋರಾಗಿ ಅಪಾಯ ಸಂಭವಿಸುವ ಸಾಧ್ಯತೆ ಕಂಡುಬಂದರೆ, ಪರಿಹಾರ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಳೆದ ವರ್ಷವೂ ಮಳೆಗಾಲದ ಸಂದರ್ಭದಲ್ಲಿ ನೋಟಿಸ್ ಜಾರಿ ಮಾಡಲಾಗಿತ್ತು.
ಕೊಡಗು ಜಿಲ್ಲೆಯಲ್ಲಿ 2018 ಹಾಗೂ 2019ರಲ್ಲಿ ಭಾರಿ ಮಳೆಯಿಂದ ಪ್ರಕೃತಿ ವಿಕೋಪ ಸಂಭವಿಸಿ ಅಪಾರ ಪ್ರಮಾಣದಲ್ಲಿ ನಷ್ಟಸಂಭವಿಸಿತ್ತು. ಜನ, ಜಾನುವಾರುಗಳನ್ನು ಕಳೆದುಕೊಳ್ಳುವಂತಾಯಿತು. ಕಳೆದ ಎರಡು ವರ್ಷದಿಂದ ಕೊಡಗಿನಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತಾಗಿತ್ತು. ಆದರೆ ಮಡಿಕೇರಿ ನಗರದ ಬೆಟ್ಟದ ಮೇಲೆ ಇರುವ ಮಂಗಳಾದೇವಿ ನಗರ, ಇಂದಿರಾ ನಗರ ಹಾಗೂ ಚಾಮುಂಡೇಶ್ವರಿ ನಗರ ಮತ್ತಿತರ ಬಡಾವಣೆಗಳಲ್ಲಿ ಪ್ರತಿ ಮಳೆಗಾಲದ ಸಂದರ್ಭ ಆತಂಕ ಮನೆ ಮಾಡುತ್ತದೆ. ಮಳೆಗಾಲದಲ್ಲಿ ಬರೆ ಜರಿಯುವುದು, ಮನೆ ಕುಸಿಯುವ ಭೀತಿ ಜರನ್ನು ಆತಂಕ್ಕಕ್ಕೆ ಒಳಗಾಗಿಸುತ್ತದೆ. ಈ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ನಗರಸಭೆಯಿಂದ ನೋಟಿಸ್ ಜಾರಿ ಮೂಲಕ ಕ್ರಮ ಕೈಗೊಳ್ಳಲಾಗುತ್ತಿದೆ.
ಮನೆ ಕೇರಳದಲ್ಲಿ, ರಸ್ತೆ ಕರ್ನಾಟಕದಲ್ಲಿ: ಅತಂತ್ರ ಸ್ಥಿತಿಯಲ್ಲಿ 700 ಕನ್ನಡಿಗರ ಕುಟುಂಬ!
2018ರಲ್ಲಿ ಆಗಸ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಮಡಿಕೇರಿಯ ಮುತ್ತಪ್ಪ ದೇವಾಲಯದ ಸಮೀಪದ ಮನೆಯೊಂದು ಜಾರಿ ನೆಲಸಮವಾಗಿತ್ತು. ಮನೆ ಜಾರಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದಲ್ಲದೆ ನಗರದ ಅಲ್ಲಲ್ಲಿ ಮನೆಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿತ್ತು. ಮನೆ ಕಳೆದುಕೊಂಡ ಸಂತ್ರಸ್ತರು ಇಂದಿಗೂ ಬಾಡಿಗೆ ಮನೆಯಲ್ಲೇ ವಾಸವಾಗಿದ್ದು, ಸರ್ಕಾರದಿಂದ ನೀಡಲಾಗುತ್ತಿರುವ ಮನೆಗಳಿಗಾಗಿ ಎದುರು ನೋಡುತ್ತಿದ್ದಾರೆ. ಇದರಿಂದ ಮಳೆಗಾಲ ಎಂದರೆ ಬೆಟ್ಟದ ಮೇಲಿನ ಮನೆಗಳಲ್ಲಿ ವಾಸಿಸುವವರಿಗೆ ರಾತ್ರಿ ನಿದ್ರೆ ಬರುವುದು ಕೂಡ ಕಷ್ಟ.
ಬಾಡಿಗೆ ಮನೆ ಸಿಗುವುದ ಕಷ್ಟ: ಮಡಿಕೇರಿಯಲ್ಲಿ ಮೊದಲೇ ಬಾಡಿಗೆಗೆ ಮನೆಗಳು ಸಿಗುವುದು ತೀರಾ ಕಷ್ಟ. ಇದೀಗ ಮಳೆಗಾಲದ ಹಿನ್ನೆಲೆಯಲ್ಲಿ ಅಪಾಯದಂಚಿನಲ್ಲಿರುವ ಮನೆಗಳಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಹಲವಾರು ಮಂದಿ ಮನೆ ದೊರಕದೆ ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆಯಿದೆ. ಲಾಕ್‌ಡೌನ್ ಅವಧಿಯಲ್ಲಿ ಕೆಲಸ ಕೂಡ ಇಲ್ಲದಿರುವುದರಿಂದ ಮನೆಯ ಬಾಡಿಗೆ ಹೇಗೆ ಪಾವತಿಸಬೇಕೆಂಬ ಚಿಂತೆಯಲ್ಲಿದ್ದಾರೆ. ಮಡಿಕೇರಿಯಲ್ಲಿ ಬಾಡಿಗೆ ಮನೆಗಳಿಗೆ ಹೆಚ್ಚಿನ ಹಣ ಕೂಡ ಪಾವತಿಸಬೇಕಾಗಿರುವುದರಿಂದ ಮತ್ತೆ ಮಳೆಗಾಲದಲ್ಲಿ ಅಪಾಯದಂಚಿನಲ್ಲಿರುವ ಮನೆಗಳ ಜನರು ಸಮಸ್ಯೆ ಎದುರಿಸುವಂತಾಗಿದೆ.
ಉಡುಪಿ: ಮೀನುಗಾರರ ಬಲೆಗೆ ಬಿತ್ತು ದೆವ್ವ ಮೀನು
ಮಡಿಕೇರಿಯ ಮಂಗಳಾದೇವಿ ನಗರ, ಇಂದಿರಾ ನಗರ ಹಾಗೂ ಚಾಮುಂಡೇಶ್ವರಿ ನಗರದಲ್ಲಿ 300 ಮನೆಗಳು ಅಪಾಯಕಾರಿ ಸ್ಥಳದಲ್ಲಿವೆ ಎಂದು ಗುರುತಿಸಲಾಗಿದೆ. ಆ ಮನೆಯವರು ಮುಂಗಾರು ಮಳೆಯ ವೇಳೆ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚಿಸಿ, ಮುಂದಿನ ವಾರ ನೋಟಿಸ್ ಜಾರಿ ಮಾಡಲಾಗುವುದು. ಮುಂಗಾರು ಮಳೆಯ ಅಬ್ಬರ ಜೋರಾಗಿ ಅಪಾಯ ಸಂಭವಿಸುವ ಸಾಧ್ಯತೆ ಕಂಡುಬಂದರೆ, ಪರಿಹಾರ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಡಿಕೇರಿ ನಗರಸಭೆ ಪೌರಾಯುಕ್ತ ರಮೇಶ್ ತಿಳಿಸಿದ್ದಾರೆ.
ಕಳೆದ ಬಾರಿ ಸುರಿದ ಭಾರಿ ಮಳೆಯಿಂದ ಮನೆಗೆ ಹಾನಿಯಾಗಿತ್ತು. ಇದರಿಂದ ಚಾಮುಂಡೇಶ್ವರಿ ನಗÜರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದೇವೆ. ಜೂ.4ಕ್ಕೆ ಜಂಬೂರಿನಲ್ಲಿ ಸರ್ಕಾರದಿಂದ ಹೊಸ ಮನೆ ನೀಡುತ್ತಾರೆಂಬ ಮಾಹಿತಿಯಿದೆ. ನಮಗೆ ಬಾಡಿಗೆ ಹಣ ಬರುತ್ತಿತ್ತು. ಆದರೆ ಈಗ ಅದೂ ಕೂಡ ನಿಲ್ಲಿಸಿದ್ದಾರೆ. ನಗರಸಭೆಯಿಂದ ಈ ಮಳೆಗಾಲದಲ್ಲಿ ಮತ್ತೆ ಬೇರೆ ಕಡೆ ತೆರಳುವಂತೆ ಸೂಚಿಸಲಾಗುತ್ತಿದೆ ಎನ್ನಲಾಗುತ್ತಿದೆ ಎಂದು ಚಾಮುಂಡೇಶ್ವರಿ ನಗರದ ನಿವಾಸಿ ನವೀನ್ ಪೂಜಾರಿ ತಿಳಿಸಿದ್ದಾರೆ.
-ವಿಘ್ನೇಶ್ ಎಂ. ಭೂತನಕಾಡು