ಇಂದು ನುಡಿಜಾತ್ರೆ ಸಮಾರೋಪ; ಭಾಗಿಯಾಗಲಿರುವ ಸಿಎಂ, ಮಾಜಿ ಪ್ರಧಾನಿ ದೇವೇಗೌಡ

By Kannadaprabha News  |  First Published Jan 8, 2023, 7:32 AM IST

ನುಡಿ ಜಾತ್ರೆಯ ಕೊನೆಯ ದಿನವಾದ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಹಲವು ಗೋಷ್ಠಿಗಳು ನಡೆಯಲಿದ್ದು, ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಅನೇಕ ಗಣ್ಯರು ಸಮಾರೋಪದಲ್ಲಿ ಪಾಲ್ಗೊಳ್ಳಲಿದ್ದಾರೆ.


 ಹಾವೇರಿ (ಜ.8) : ನುಡಿ ಜಾತ್ರೆಯ ಕೊನೆಯ ದಿನವಾದ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಹಲವು ಗೋಷ್ಠಿಗಳು ನಡೆಯಲಿದ್ದು, ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಅನೇಕ ಗಣ್ಯರು ಸಮಾರೋಪದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಧಾನ ವೇದಿಕೆಯಲ್ಲಿ ಗೋಷ್ಠಿ-7: ಅನ್ನದಾತರ ಅಳಲು -ಅಪೇಕ್ಷೆಗಳು ಬೆಳಗ್ಗೆ-9 ರಿಂದ 11 ಗಂಟೆವರೆಗೆ ಜರುಗಲಿದೆ.

Tap to resize

Latest Videos

undefined

ಗೋಷ್ಠಿ -8: ವರ್ತಮಾನದಲ್ಲಿ ಮಹಿಳೆ ಬೆಳಗ್ಗೆ 11 ರಿಂದ 1ಗಂಟೆವರೆಗೆ ಜರುಗಲಿದೆ.

ಗೋಷ್ಠಿ-9: ದಮನಿತ ಲೋಕದ ಸಬಲೀಕರಣ ಮಧ್ಯಾಹ್ನ 1 ರಿಂದ 3ಗಂಟೆವರೆಗೆ ಜರುಗಲಿದೆ.

ವೇದಿಕೆ-2: ಗೋಷ್ಠಿ-09 ವಿದೇಶದಲ್ಲಿ ಕನ್ನಡ ಡಿಂಡಿಮ ಬೆಳಗ್ಗೆ 9 ರಿಂದ 11 ಗಂಟೆವರೆಗೆ ಜರುಗಲಿದೆ.

ಗೋಷ್ಠಿ-10: ಕನ್ನಡ ಸಾಹಿತ್ಯದಲ್ಲಿ ವಿಷಯ ವೈವಿಧ್ಯ ಬೆಳಗ್ಗೆ 11 ರಿಂದ ಮಧ್ಯಾಹ್ನ 1ರವರೆಗೆ ಜರುಗಲಿದೆ.

ಗೋಷ್ಠಿ-11: ವಿಜ್ಞಾನ, ಮಾಹಿತಿ ಮತ್ತು ತಂತ್ರಜ್ಞಾನ ದೊಂದಿಗೆ ಕನ್ನಡ ಮಧ್ಯಾಹ್ನ 1 ರಿಂದ 3ರವರೆಗೆ ಜರುಗಲಿದೆ.

ಗೋಷ್ಠಿ-12: ಜಾನಪದ ಜಗತ್ತು ಮಧ್ಯಾಹ್ನ 3 ರಿಂದ 5ರವರೆಗೆ ಜರುಗಲಿದೆ.

Kannada sahitya sammelana: ನುಡಿಜಾತ್ರೆಗೆ ನೆಂಟರು, ಸ್ನೇಹಿತರಿಗೆ ಫೋನ್‌ ಮಾಡಿ ಕರೆಸಿದ ಹಾವೇರಿ ಜನ!

ಸಾಧಕರಿಗೆ ಸನ್ಮಾನ:

ಮಧ್ಯಾಹ್ನ 3ರಿಂದ 4ಗಂಟೆವರೆಗೆ ಸಧಾಕರಿಗೆ ಸನ್ಮಾನ ಜರುಗಲಿದೆ. ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮೂಡುಬಿದರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಮೋಹನ್‌ ಆಳ್ವಾ ಆಶಯ ನುಡಿಗಳನ್ನಾಡಲಿದ್ದಾರೆ. ಬೆಂಗಳೂರು ಇಸ್ರೋ ಹಿರಿಯ ವಿಜ್ಞಾನಿ ಡಾ.ಕಿರಣ್‌ ಕುಮಾರ್‌ ಸನ್ಮಾನಿಸಲಿದ್ದಾರೆ.

ಸಮಾರೋಪ:

Üಂಜೆ 5 ರಿಂದ 8-30ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತಿಯಲ್ಲಿ, ಗೌರವ ಅತಿಥಿಗಳಾಗಿ ಮಾಜಿ ಪ್ರಧಾನಮಂತ್ರಿ ಎಚ್‌.ಡಿ.ದೇವೇಗೌಡ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಖಾತೆ ಸಚಿವ ಬಿ.ಸಿ.ನಾಗೇಶ ಭಾಗವಹಿಸಲಿದ್ದಾರೆ.

ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ(Vivek rai) ಸಮಾರೋಪ ಭಾಷಣ ಮಾಡಲಿದ್ದಾರೆ. ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡರು(Dr.Doddarangegowda) ಸಮ್ಮೇಳನಾಧ್ಯಕ್ಷರ ನುಡಿಗಳನ್ನಾಡುವರು. ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ(Dr.Mahesh Joshi) ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಸಾಹಿತ್ಯ ಸಮ್ಮೇಳನ ನಡೆಸಬೇಕೆಂಬ 50 ವರ್ಷಗಳ ಕನಸು ನನಸು; ಹಾವೇರಿ ಜನ ಖುಷಿಯೋ ಖುಷಿ

ಅತಿಥಿಗಳಾಗಿ ವಿಧಾನ ಪರಿಷತ್‌ ವಿರೋಧಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ(BK Hariprasad). ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ ಕಟೀಲ್‌(Nalin Kumar kateel), ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ(DK Shivakumar), ಜೆಡಿಎಸ್‌ ಅಧ್ಯಕ್ಷ ಸಿ.ಎಂ.ಇಬ್ರಾಹಿಂ(CM Ibrahim) ಮೊದಲಾದ ಗಣ್ಯರು ಪಾಲ್ಗೊಳ್ಳಲಿದ್ದಾರೆ. ರಾತ್ರಿ 11 ಗಂಟೆವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ.

click me!