ಅ. 16ರಿಂದ 19ರವರೆಗೆ ಬೆಂಗಳೂರು ಸೇರಿದಂತೆ ಪ್ರಮುಖ ಸ್ಥಳಗಳಿಗೆ 400 ಹೆಚ್ಚುವರಿ ಬಸ್

Published : Oct 13, 2026, 07:53 AM IST
NWKRTC

ಸಾರಾಂಶ

ದಸರಾ, ಆಯುಧಪೂಜೆ ಹಾಗೂ ವಿಜಯದಶಮಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು 400 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆಗೊಳಿಸುತ್ತಿದೆ. ಅಕ್ಟೋಬರ್ 16ರಿಂದ 19ರವರೆಗೆ ಬೆಂಗಳೂರು ಸೇರಿದಂತೆ ಪ್ರಮುಖ ಸ್ಥಳಗಳಿಂದ ವಿವಿಧ ಜಿಲ್ಲೆಗಳಿಗೆ ಈ ವಿಶೇಷ ಬಸ್‌ಗಳು ಸಂಚರಿಸಲಿವೆ.

ಹುಬ್ಬಳ್ಳಿ: ಮಹಾನವಮಿ, ಆಯುಧಪೂಜೆ ಹಾಗೂ ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ವಿವಿಧ ವಿಭಾಗಗಳಿಂದ 400 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.

ಹೆಚ್ಚುವರಿ ಸಾರಿಗೆ ವ್ಯವಸ್ಥೆ

ಅ. 20ರಂದು ಮಹಾನವಮಿ ಹಾಗೂ ಆಯುಧಪೂಜೆ, ಅ. 21ರಂದು ವಿಜಯದಶಮಿ ಹಬ್ಬ ಇರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹಾಗೂ ಇತರ ಪ್ರಮುಖ ಸ್ಥಳಗಳಿಂದ ಸ್ವಂತ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಅ. 16ರಿಂದ 19ರ ವರೆಗೆ ವಿಶೇಷ ಬಸ್‌ಗಳ ಕಾರ್ಯಾಚರಣೆ

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ, ವಿಜಯನಗರ ಟಿಟಿಎಂಸಿ, ಮಲ್ಲೇಶ್ವರಂ, ಶಾರದಾ ಕಾಲನಿ, ಯಶವಂತಪುರ ಟಿಟಿಎಂಸಿ ಹಾಗೂ ಬಸವೇಶ್ವರನಗರ ಟಿಟಿಎಂಸಿ ನಿಲ್ದಾಣಗಳಿಂದ ಸಂಸ್ಥೆಯ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಅ. 16ರಿಂದ 19ರ ವರೆಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ರಕಟಣೆ

ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಹಾಗೂ ಬಾಗಲಕೋಟೆ ವಿಭಾಗಗಳಿಂದ ಈ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ. ಪ್ರಯಾಣಿಕರು ಹೆಚ್ಚುವರಿ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

PREV
Read more Articles on
click me!

Recommended Stories

ಕೋಡಿಂಗ್ ಇಲ್ಲದೇ ಮೊಬೈಲ್‌ ನಲ್ಲೇ ವೆಬ್‌ಸೈಟ್ ನಿರ್ಮಿಸಿದ ಹುಬ್ಬಳ್ಳಿಯ ಉದ್ಯಮಿಗಳು!
ಬೆಂಗಳೂರಿನ ಸಮಸ್ಯೆಗಳಿಗೆ ಮುಕ್ತಿ ನೀಡಲು ಹೊಸ ತಂತ್ರಜ್ಞಾನ: Digital Twin Technology