NWKRTCಯಿಂದ 340 ಹೆಚ್ಚುವರಿ ಬಸ್; ಬಾಗಲಕೋಟೆ, ಗದಗ, ಹಾವೇರಿ, ಹುಬ್ಬಳ್ಳಿ, ಚಿಕ್ಕೋಡಿ

Published : Nov 04, 2026, 05:36 PM IST
NWKRTC

ಸಾರಾಂಶ

2026ರ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು 340 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಓಡಿಸಲು ನಿರ್ಧರಿಸಿದೆ. ಬೆಂಗಳೂರು ಸೇರಿದಂತೆ ವಿವಿಧ ಪ್ರಮುಖ ಸ್ಥಳಗಳಿಂದ ನವೆಂಬರ್ 6 ರಿಂದ 8 ರವರೆಗೆ ಈ ವಿಶೇಷ ಸಾರಿಗೆ ಸೌಲಭ್ಯ ಲಭ್ಯವಿರಲಿದೆ.

ಗದಗ: 2026ನೇ ಸಾಲಿನ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ವಿವಿಧ ವಿಭಾಗಗಳಿಂದ ಸುಮಾರು 340 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲು ನಿರ್ಧರಿಸಿದೆ.

ನ.9ರಂದು ಅಮವಾಸ್ಯೆ ಹಾಗೂ ನ.10ರಂದು ಬಲಿಪಾಡ್ಯಮಿ

ನ.9ರಂದು ಅಮವಾಸ್ಯೆ ಹಾಗೂ ನ.10ರಂದು ಬಲಿಪಾಡ್ಯಮಿ ಇರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ಇತರ ಪ್ರಮುಖ ಸ್ಥಳಗಳಿಂದ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಹಾಗೂ ಬಾಗಲಕೋಟೆ ವಿಭಾಗಗಳಿಂದ ಈ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.

ಬೆಂಗಳೂರಿನಿಂದಲೂ ವಿಶೇಷ ಬಸ್ 

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ, ವಿಜಯನಗರ ಟಿಟಿಎಂಸಿ, ಮಲ್ಲೇಶ್ವರಂ, ಶಾರದಾ ಕಾಲನಿ, ಯಶವಂತಪುರ ಟಿಟಿಎಂಸಿ ಹಾಗೂ ಬಸವೇಶ್ವರ ನಗರ ಟಿಟಿಎಂಸಿ ಬಸ್ ನಿಲ್ದಾಣಗಳಿಂದ ಸಂಸ್ಥೆಯ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ತೆರಳಲು ನ.6ರಿಂದ ನ.8ರವರೆಗೆ ಹೆಚ್ಚುವರಿ ವಿಶೇಷ ಬಸ್‌ಗಳ ಸೌಲಭ್ಯ ಕಲ್ಪಿಸಲಾಗಿದೆ.

ಪ್ರಯಾಣಿಕರು ಈ ವಿಶೇಷ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡು, ಸಂಸ್ಥೆಯ ಬಸ್‌ಗಳಲ್ಲಿ ಸುಖಕರ ಹಾಗೂ ಸುರಕ್ಷಿತ ಪ್ರಯಾಣ ಕೈಗೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ನಿಗದಿತ ದರಕ್ಕಿಂತ ಹೆಚ್ಚು ಹಣ ವಸೂಲಿ : ಬಸ್ ನಿಲ್ದಾಣದ ಶೌಚಾಲಯ ಗುತ್ತಿಗೆ ರದ್ದು

ಹೊಸಪೇಟೆ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿರುವ ಶೌಚಾಲಯದ ನಿರ್ವಹಣೆಯಲ್ಲಿ ನ್ಯೂನ್ಯತೆ ಕಂಡುಬಂದ ಹಿನ್ನೆಲೆ ಹಾಗೂ ಸಾರ್ವಜನಿಕ ಪ್ರಯಾಣಿಕರಿಂದ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಮೊತ್ತ ವಸೂಲಿ ಮಾಡುತ್ತಿದ್ದ ಕಾರಣದಿಂದ ಪರವಾನಗಿ ರದ್ದುಪಡಿಸಲಾಗಿದೆ. ಮುಂದಿನ 3 ವರ್ಷಗಳ ಅವಧಿಗೆ ಹೊಸದಾಗಿ ಟೆಂಡರ್ ಆಹ್ವಾನಿಸಲಾಗಿದ್ದು, ಮುಂದಿನ ಪರವಾನಗಿದಾರರು ಆಯ್ಕೆಯಾಗುವವರೆಗೆ ತಾತ್ಕಾಲಿಕವಾಗಿ ವ್ಯವಸ್ಥೆ ಕಲ್ಪಿಸಲಾಗಿದೆ.

ಶೌಚಾಲಯ ಬಳಕೆಗೆ ಕೇವಲ ₹5 ಮಾತ್ರ ಪಡೆಯುವಂತೆ ಸೂಚಿಸಲಾಗಿದೆ. ನಿಗದಿತ ದರಕ್ಕಿಂತ ಹೆಚ್ಚಿನ ಹಣ ನೀಡದಂತೆ ಧ್ವನಿವರ್ಧಕ ಹಾಗೂ ಶೌಚಾಲಯದ ಒಳ​ಹೊರಗೆ ಬರವಣಿಗೆಯ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Read more Articles on
click me!

Recommended Stories

'ಪ್ರಾಣಿಗಳಲ್ಲ, ಪ್ರಯಾಣಿಕರ ಮೇಲೆ ದಯೆ ಇರಲಿ': ಬಡ ಜನರ ಹೊಟ್ಟೆ ಮೇಲೆ ಬಸ್‌ ಹತ್ತಿಸಿದ ಗ್ಯಾರಂಟಿ ಸರ್ಕಾರಕ್ಕೆ ಸಾರ್ವಜನಿಕರ ಹಿಡಿಶಾಪ!
ಬಾಲಿವುಡ್ ನಟರಿಗೆ ಬಿಷ್ಣೋಯ್ ಗ್ಯಾಂಗ್ ಬೆದರಿಕೆ, ಬೆಂಗಳೂರಿನ ಟೆಕ್ಕಿ ಅರೆಸ್ಟ್ ಮಾಡಿ ಕರೆದೊಯ್ದ ಮುಂಬೈ ಪೊಲೀಸ್