ರೈತ ಮಹಿಳೆ ಮೇಲೆ ಅಧಿಕಾರಿಗಳ ದೌರ್ಜನ್ಯ: ಅಹೋರಾತ್ರಿ ನಡೆದ ಧರಣಿ ದಿಢೀರ್ ಸುಖಾಂತ್ಯ

By Ravi Janekal  |  First Published Jun 4, 2023, 10:53 AM IST

ರೈತ ಮಹಿಳೆ ಮೇಲೆ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಹೊಸನಗರ ತಾಲೂಕು ಕಚೇರಿ ಎದುರು ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ ನೇತೃತ್ವದಲ್ಲಿ ನಡೆದಿದ್ದ ಧರಣಿ ದಿಢೀರ್ ಸುಖಾಂತ್ಯವಾಗಿದೆ.


 ಶಿವಮೊಗ್ಗ (ಜೂ.4) ರೈತ ಮಹಿಳೆ ಮೇಲೆ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಹೊಸನಗರ ತಾಲೂಕು ಕಚೇರಿ ಎದುರು ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ ನೇತೃತ್ವದಲ್ಲಿ ನಡೆದಿದ್ದ ಧರಣಿ ದಿಢೀರ್ ಸುಖಾಂತ್ಯವಾಗಿದೆ.

ಸಾಗರ ಉಪ ವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ರಿಂದ ಕ್ರಮ ಕೈಗೊಳ್ಳುವ ಭರವಸೆ ಮೇರೆಗೆ ಪ್ರತಿಭಟನೆ ಅಂತ್ಯ

Tap to resize

Latest Videos

ನ್ಯಾಯ ಸಿಗುವವರೆಗೆ ಪ್ರತಿಭಟನೆ:

ಬಗರ್‌ಹುಕುಂ ಜಮೀನಿನಲ್ಲಿ ಮಹಿಳೆ ಬೆಳೆದಿದ್ದ ಲಕ್ಷಾಂತರ ಮೌಲ್ಯದ ಶುಂಠಿಯನ್ನ ಅಧಿಕಾರಿಗಳು ನಾಶಪಡಿಸುವ ಮೂಲಕ ಅಧಿಕಾರಿಗಳು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಹೊಸನಗರ ತಾಲೂಕು ಕಚೇರಿ ಎದುರು ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ ನೇತೃತ್ವದಲ್ಲಿ ಶನಿವಾರ ಅಹೋರಾತ್ರಿ ಧರಣಿ ನಡೆಸಿದ್ದರು. ನ್ಯಾಯ ಸಿಗುವವರೆಗೆ ಪ್ರತಿಭಟನೆ ಮುಂದುವರೆಸುವುದಾಗಿ ಮಾಜಿ ಸಚಿವರು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದರು

ಪ್ರವಾಹ ಅವಘಡ ತಡೆಗಟ್ಟಲು ಎಚ್ಚೆ​ತ್ತು​ಕೊ​ಳ್ಳಿ: ಆರಗ ಜ್ಞಾನೇಂದ್ರ

ಒತ್ತುವರಿ ನೆಪದಲ್ಲಿ ಬೆಳೆನಾಶ:

ಹೊಸನಗರ ತಾಲೂಕಿನ ಬ್ರಹ್ಮೇಶ್ವರ ಗ್ರಾಮದ ರುಕ್ಮಿಣಿ ರಾಜು ಎಂಬ ದಲಿತ ಮಹಿಳೆ ಕಚ್ಚಿಗೆಬೈಲು ಬಗರ್‌ಹುಕುಂ ಜಮೀನನಲ್ಲಿ ಸಾಗುವಳಿ ಮಾಡಿದ್ದಾರೆ. ಸಾಲ ಮಾಡಿ ಒಂದೂವರೆ ಎಕರೆ ಜಾಗದಲ್ಲಿ ಬೆಳೆದಿದ್ದ ಬೆಳೆಯನ್ನು ಒತ್ತುವರಿ ತೆರವು ನೆಪದಲ್ಲಿ ಅಧಿಕಾರಿಗಳು ಜೆಸಿಬಿ ಬಳಸಿ ಲಕ್ಷಾಂತರ ಮೌಲ್ಯದ ಶುಂಠಿ ಬೆಳೆಯನ್ನು ನಾಶಪಡಿಸಿದ್ದಾರೆಂಬ ಆರೋಪ.

ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ:

ರೈತ ಮಹಿಳೆ ಬೆಳೆದಿದ್ದ ಲಕ್ಷಾಂತರ ರೂಪಾಯಿ ಬೆಳೆಯನ್ನು ಜೆಸಿಬಿ ಬಳಸಿ ನಾಶಪಡಿಸಿದ್ದಾರೆ. ಅಕ್ರಮ ಸಕ್ರಮೀಕರಣಕ್ಕೆ ಫಾರಂ ನಂಬರ್ 57ರಲ್ಲಿ ಅರ್ಜಿ ಸಲ್ಲಿಸಿದ್ದರೂ ಅಧಿಕಾರಿಗಳು ಬೇಲಿ ತೆರವು ನೆಪದಲ್ಲಿ ಬೆಳೆ ಹಾನಿ ಮಾಡಿದ್ದಾರೆ. ಇಂತಹ ಅಮಾನವೀಯ ಕೃತ್ಯವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ರೈತ ಮಹಿಳೆಗೆ ಆಗಿರುವ ನಷ್ಟವನ್ನು ಭರಿಸಬೇಕು ಎಂದು ಒತ್ತಾಯಿಸಿದರು. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಉಪವಿಭಾಗಾಧಿಕಾರಿ ಬೆಳೆ ಹಾನಿ ಕುರಿತು ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತದೆ. ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಅಂತ್ಯಗೊಳಿಸಲಾಯಿತು.

 

ಅಭಿ​ವೃದ್ಧಿ ಬಿಟ್ಟು ಹಿಂದೂ ಧರ್ಮ ವಿರೋ​ಧಿ​ಸುವ ಹೊಸ ಸರ್ಕಾ​ರ: ಆರಗ ಜ್ಞಾನೇಂದ್ರ

click me!