ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಉಲ್ಲಂಘನೆಯನ್ನು ತಡೆಯುವುದು ಇದರ ಮೂಲ ಉದ್ದೇಶವಾಗಿದೆ. ಹಾಗೆಯೇ ಮಾನವ ಹಕ್ಕುಗಳು ಉಲ್ಲಂಘನೆ ಆಗದಂತೆ ಸರ್ಕಾರದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ.ಶ್ಯಾಮ ಭಟ್ ಅವರು ಹೇಳಿದರು.
ವರದಿ: ಪರಮೇಶ್ ಅಂಗಡಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಧಾರವಾಡ
ಧಾರವಾಡ (ಆ.09): ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಉಲ್ಲಂಘನೆಯನ್ನು ತಡೆಯುವುದು ಇದರ ಮೂಲ ಉದ್ದೇಶವಾಗಿದೆ. ಹಾಗೆಯೇ ಮಾನವ ಹಕ್ಕುಗಳು ಉಲ್ಲಂಘನೆ ಆಗದಂತೆ ಸರ್ಕಾರದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ.ಶ್ಯಾಮ ಭಟ್ ಅವರು ಹೇಳಿದರು. ಅವರು ಇಂದು ಮದ್ಯಾಹ್ನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ಆಯೋಜಿಸಲಾದ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ, ಮಾತನಾಡಿದರು.
ರಾಜ್ಯ ಮಟ್ಟದಲ್ಲಿ 2023 ರಿಂದ ಇಲ್ಲಿವರೆಗೆ ಬಾಕಿ ಇದ್ದ ಒಟ್ಟು ಎಂಟು ಸಾವಿರ ಪ್ರಕರಣಗಳಲ್ಲಿ 5100 ಪ್ರಕರಣಗಳನ್ನು ವಿಲೇವಾರಿ ಮಾಡಿದ್ದು ಇನ್ನು 2900 ಪ್ರಕರಣಗಳು ವಿಲೇವಾರಿ ಹಂತದಲ್ಲಿವೆ.ರಾಜ್ಯ ಮಟ್ಟದಲ್ಲಿ ಮಾತ್ರ ಕಾರ್ಯನಿರ್ವಹಿಸಿತ್ತಿದ್ದ ಆಯೋಗವು ಹೊಸ ಯೋಜನೆಯನ್ನು ರೂಪಿಸಿ ಪ್ರತಿ ಜಿಲ್ಲಾ ಮಟ್ಟದಲ್ಲಿ ಸಾರ್ವಜನಿಕರಿಗೆ ಸೇವೆಯನ್ನು ನೀಡುವ ಉದ್ದೇಶವನ್ನು ಹೊಂದಿದೆ ಹಾಗೂ ಬಾಕಿ ಇರುವಂತಹ ಪ್ರಕರಣಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡಲಾಗುವುದು ಎಂದು ಅವರು ತಿಳಿಸಿದರು. ಧಾರವಾಡ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 46 ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ 22 ಪ್ರಕರಣಗಳು ಪರಿಹಾರ ಬಾಕಿಯಲ್ಲಿ ಇದೆ. ಇದರಲ್ಲಿ 18 ಪ್ರಕರಣಗಳು ಜಿಲ್ಲಾ ಮಟ್ಟದಲ್ಲಿ ಬಾಕಿ ಇವೆ ಎಂದು ಅವರು ಹೇಳಿದರು.
45 ದಿನದಿಂದ ಕರೆಂಟ್ ಇಲ್ಲದೆ ಕತ್ತಲಲ್ಲಿ ಕಾಫಿನಾಡ ಅತ್ತಿಗುಂಡಿ ಗ್ರಾಮ: ಬಸ್ ಸಂಚಾರವೂ ಬಂದ್!
ಇತ್ತೀಚಿನ ದಿನಗಳಲ್ಲಿ ಮಾನವ ಹಕ್ಕುಗಳ ಆಯೋಗದ ಹೆಸರು ಹೇಳಿ ಕೆಲವರು ದುರುಪಯೋಗ ಪಡೆಯುವ ಕುರಿತು ಆಯೋಗಕ್ಕೆ ದೂರುಗಳು ಬಂದಿವೆ.ಇಂತಹ ಸುಳ್ಳು ದಾಖಲೆ ಇರುವಂತಹ ಸಂಸ್ಥೆ ಮತ್ತು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿ ಮುಂದಿನ ದಿನಮಾನಗಳಲ್ಲಿ ಆದಷ್ಟು ಕಡಿಮೆ ಅವಧಿಯಲ್ಲಿ ಪ್ರಕರಣಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಅವರು ತಿಳಿಸಿದರು. ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಜೆ.ವಂಟಗೋಡಿ ಅವರು ಮಾತನಾಡಿ ಪ್ರತಿ ಜಿಲ್ಲೆಯಲ್ಲಿ ಮಾನವ ಹಕ್ಕುಗಳ ಆಯೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು.
ಸಾರ್ವಜನಿಕರಲ್ಲಿ ಮೂಢನಂಬಿಕೆ ಹಾಗೂ ಅನಿಷ್ಟ ಪದ್ದತಿಗಳನ್ನು ಹೋಗಲಾಡಿಸುವುದರಿಂದ ಮಾನವ ಹಕ್ಕುಗಳನ್ನು ರಕ್ಷಣೆ ಮಾಡಿದಂತಾಗುತ್ತದೆ ಎಂದು ಅವರು ಹೇಳಿದರು ಬಸ್ ನಿಲ್ದಾಣ, ಜೈಲು, ಪೊಲೀಸ್ ಠಾಣೆ, ವಿದ್ಯಾರ್ಥಿ ನಿಲಯ ಸೇರಿದಂತೆ ಹಲವಾರು ಸಾರ್ವಜನಿಕ ಸ್ಥಳಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗಿ ನಡೆಯುತ್ತದೆ ಅಂತಹ ಸ್ಥಳಗಳಲ್ಲಿ ಅಧಿಕಾರಿಗಳು ಜಾಗೃತಿ ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ತಂಪು ಪಾನೀಯಗಳನ್ನು ಮಾರಾಟ ಮಾಡುವಂತಹ ಅಂಗಡಿಗಳ ಮೇಲೆ ಜಾಗೃತಿ ವಹಿಸಬೇಕು ಎಂದು ಅವರು ತಿಳಿಸಿದರು.
ಕರಾವಳಿ ಮತ್ತು ಮಲೆನಾಡಿಗೆ 300 ಕೋಟಿ ಅನುದಾನ ನೀಡಲು ಸಿಎಂ ಒಪ್ಪಿಗೆ: ಸಚಿವ ಕೃಷ್ಣ ಭೈರೇಗೌಡ
ಹೊಸದಾಗಿ ಸರ್ಕಾರದಿಂದ ಮಂಜೂರಾಗುವ ಪದವೀಧರ ವಿದ್ಯಾರ್ಥಿನಿಯರ ವಸತಿ ನಿಲಯಗಳ ಹೊಸ ಕಟ್ಟಡಗಳಲ್ಲಿ ರೂಮ್ ಗಳಲ್ಲಿ ಅಟ್ಯಾಚ್ ಶೌಚಾಲಯ ಹಾಗೂ ಪ್ರತ್ಯೇಕ ಡ್ರೆಸ್ಸಿಂಗ್ ರೂಮ್ ಗಳನ್ನು ಮಾಡಬೇಕು. ಕಾರ್ಮಿಕರ ಮಕ್ಕಳಿಗೆ ಅಗತ್ಯವಿರುವ ಅವಶ್ಯಕತೆಗಳನ್ನು ನೀಡಿ, ಮೂಲಭೂತ ಸೌಕರ್ಯಗಳನ್ನು ದೊರಕುವಂತೆ ಮಾಡಿ ಎಂದು ಅಧಿಕಾರಿಗಳಿಗೆ ಅವರು ಸಲಹೆ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ಮಹಾನಿಂಗ ನಂದಗಾಂವಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ.ಮಹಾನಗರಪಾಲಿಕೆ ಡಾ. ಈಶ್ವರ ಉಳ್ಳಾಗಡ್ಡಿ ಅವರು ಮಾತನಾಡಿದರು ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.