ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಜ್ಯದಲ್ಲಿ ಕೋಟಿ ಕಂಠ ಗೀತ ಗಾಯನ ಎಂಬ ಅಭಿಯಾನವನ್ನು ಸರ್ಕಾರವು ರೂಪಿಸಲಾಗಿದ್ದು, ಅ.28 ರಂದು ಬೆಳಿಗ್ಗೆ 11 ಗಂಟೆಗೆ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮವನ್ನು ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ನಾಗರಾಜ್ ತಿಳಿಸಿದರು.
ಚಿಕ್ಕಬಳ್ಳಾಪುರ (ಅ.24): ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಜ್ಯದಲ್ಲಿ ಕೋಟಿ ಕಂಠ ಗೀತ ಗಾಯನ ಎಂಬ ಅಭಿಯಾನವನ್ನು ಸರ್ಕಾರವು ರೂಪಿಸಲಾಗಿದ್ದು, ಅ.28 ರಂದು ಬೆಳಿಗ್ಗೆ 11 ಗಂಟೆಗೆ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮವನ್ನು ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ .ಎಂ.ನಾಗರಾಜ್ ತಿಳಿಸಿದರು.
2.50 ಲಕ್ಷ ಮಂದಿ ಭಾಗಿ:
ಜಿಲ್ಲಾದ್ಯಂತ (Chikkaballapura) 2.50 ಲಕ್ಷಕ್ಕೂ ಹೆಚ್ಚು ಜನರು ಈ ಅಭಿಯಾನದಲ್ಲಿ ಭಾಗವಹಿಸುವಂತೆ ಜಿಲ್ಲಾಡಳಿತ ಕ್ರಮವಹಿಸಲಾಗಿದೆ. ತಮ್ಮ ಕಚೇರಿಗಳಲ್ಲಿ ಹಾಗೂ ಜಿಲ್ಲೆಯ ತಮ್ಮ ಅಧೀನ ಎಲ್ಲಾ ಸಹಗಳಲ್ಲಿ ಜಿಲ್ಲಾ ಮತ್ತು ತಾಲ್ಲೂಕು (Taluk) ಮಟ್ಟದ ಅಧಿಕಾರಿಗಳು ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದ್ದಾರೆ.
ಕೋಟಿ ಕಂಠ ಗೀತ ಗಾಯನ
ನಾಡು ನುಡಿಯ ಬಗ್ಗೆ ಅಭಿಮಾನ ಮೂಡಿಸುವ, ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಗೀತೆ ಹಾಗೂ ಕವನಗಳನ್ನು ನಾಡಿನ ಹೆಮ್ಮೆಯ ಕವಿಗಳು ರಚಿಸಿದ್ದು, ಇವುಗಳ ಕೇಳುವಿಕೆಯು ನಮ್ಮಲ್ಲಿ ಅಭಿಮಾನವನ್ನು ಮೂಡಿಸುತ್ತದೆ. ಈ ದೃಷ್ಟಿಯಿಂದ ಈ ಗೀತೆಗಳು ಕನ್ನಡದ ಶಕ್ತಿ, ಕಳೆದ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಾತಿನಿಧಿಕವಾಗಿ ಆಯ್ದ 3 ಕನ್ನಡ ಗೀತೆಗಳ ಸಮೂಹ ಗಾಯನವನ್ನು ವಿನೂತನವಾಗಿ ಲಕ್ಷ ಕಂಠ ಗೀತ ಗಾಯನ ಶೀರ್ಷಿಕೆಯಡಿ ರಾಜ್ಯಾದ್ಯಂತ ಆಯೋಜಿಸಿ ಯಶಸ್ವಿಗೊಳಿಸಿದ ನಿಟ್ಟಿನಲ್ಲಿ, ಈ ವರ್ಷವೂ ಅಕ್ಟೋಬರ್ 28 ರಂದು ಬೆಳಿಗ್ಗೆ 11 ಗಂಟೆಗೆ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಆಯೋಜಿಸಿ ಒಂದು ಕೋಟಿಗೂ ಹೆಚ್ಚು ಜನರನ್ನು ಭಾಗಿಯಾಗಿಸುವಂತೆ ವ್ಯವಸ್ಥೆಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ನನ್ನ ಹಾಡು - ನನ್ನ ಹಾಡು ಸಮೂಹ ಗೀತ ಗಾಯನ - ಕನ್ನಡ ನಾಡು-ನುಡಿಯ ಶ್ರೇಷ್ಠತೆಯನ್ನು ಸಾರುವ ನಾಡಗೀತೆ, ಹುಯಿಲಗೋಳ ನಾರಾಯಣರಾಯರ ’ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು’, ರಾಷ್ಟ್ರಕವಿ ಕುವೆಂಪುರವರ ಬಾರಿಸು ಕನ್ನಡ ಡಿಂಡಿಮವ’, ಡಾ.ಡಿ.ಎಸ್. ಕರ್ಕಿಯವರ ’ಹಚ್ಚೇವು ಕನ್ನಡದ ದೀಪ’, ನಾಡೋಜ ಡಾ. ಚೆನ್ನವೀರ ಕಣವಿಯವರ ’ವಿಶ್ವವಿನೂತನ ವಿದ್ಯಾಚೇತನ’, ಡಾ. ಹಂಸಲೇಖರವರ ’ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ಈ ಗೀತೆಗಳನ್ನು ಅಕ್ಟೋಬರ್ 28ರ ಬೆಳಿಗ್ಗೆ 11ಕ್ಕೆ ಆರಂಭವಾಗಿ 11.30 ವರೆಗೂ ಏಕ ಕಾಲದಲ್ಲಿ ಸಮೂಹವಾಗಿ ಹಾಡಲಾಗುವುದೆಂದರು.
ಕೋಟಿ ಕಂಠ ಗೀತ ಗಾಯನಕ್ಕೆ ನೋಂದಣಿ
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಸ್ವಯಂ ಚಾಲಿತ ಆನ್ ಲೈನ್ ಪ್ರಮಾಣ ಪತ್ರ ನೀಡಲು ಸರ್ಕಾರವು ಅವಕಾಶ ಕಲ್ಪಿಸಿದೆ. ಇದಕ್ಕಾಗಿ ಕಾರ್ಯಕ್ರಮದ ದಿನಾಂಕಕ್ಕಿಂತ ಮುಂಚಿತವಾಗಿ ನೋಂದಾಯಿಸಿಕೊಳ್ಳಬಹುದು. ಹಾಡುಗಳ ಸಾಹಿತ್ಯ ಹಾಗೂ ಧಾಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಯುಟ್ಯೂಬ್ ಚಾನೆಲ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಸಂಪರ್ಕ ಮಾಡಬಹುದಾಗಿದೆ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಮಾಹಿತಿ ನೀಡಿದ್ದಾರೆ.
60 ಲಕ್ಷ ನೋಂದಣಿ
ಬೆಂಗಳೂರು
ಅ.28ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿರುವ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮಕ್ಕೆ ದೇಶ- ವಿದೇಶಗಳಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, 60 ಲಕ್ಷಕ್ಕೂ ಅಧಿಕ ಕನ್ನಡ ಪ್ರೇಮಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.
ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಲಾಖೆಯಿಂದ ಪ್ರತ್ಯೇಕ ‘ಕ್ಯೂ ಆರ್’ ಕೋಡ್ ಆರಂಭಿಸಲಾಗಿದ್ದು, ಇದರಲ್ಲಿ 29 ರಾಜ್ಯ ಹಾಗೂ 25 ರಾಷ್ಟ್ರಗಳಿಂದ 60 ಲಕ್ಷಕ್ಕೂ ಅಧಿಕ ಮಂದಿ ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಒಂದು ಕೋಟಿ ಜನರು ಭಾಗವಹಿಸಿ ಏಕಕಾಲದಲ್ಲಿ ಕನ್ನಡದ ಕಂಪು ಪಸರಿಸುತ್ತಾರೆ ಎಂಬ ಗುರಿ ಹೊಂದಲಾಗಿತ್ತು. ನೋಂದಣಿಗೆ ಉತ್ತಮ ಸ್ಪಂದನೆ ಸಿಕ್ಕಿರುವುದರಿಂದ ಕೋಟಿಗೂ ಅಧಿಕ ಕನ್ನಡ ಪ್ರೇಮಿಗಳು ಈ ವೃಂದ ಗಾಯನದಲ್ಲಿ ಭಾಗವಹಿಸಬಹುದು ಎಂದು ಇಲಾಖೆ ಮೂಲಗಳು ತಿಳಿಸಿವೆ.
ಅ.28ರಂದು ಬೆಳಗ್ಗೆ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ‘ಜಯ ಭಾರತ ಜನನಿಯ ತನುಜಾತೆ’, ಹುಯಿಲಗೊಳ ನಾರಾಯಣರಾವ್ ವಿರಚಿತ ‘ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು’, ಡಾ.ಚನ್ನವೀರ ಕಣವಿ ಅವರ ‘ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ’, ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವಾ’, ಡಾ.ಡಿ.ಎಸ್.ಕರ್ಕಿಯವರ ‘ಹಚ್ಚೇವು ಕನ್ನಡದ ದೀಪ’ ಹಾಗೂ ಡಾ.ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಆರು ಗೀತೆಗಳನ್ನು ಕೋಟಿ ಕಂಠಗಳಲ್ಲಿ ಹಾಡಲಾಗುತ್ತದೆ. ಇದನ್ನು ಹೊರತುಪಡಿಸಿಯೂ ಆಸಕ್ತರು ಬೇರೆ ಕನ್ನಡ ಗೀತೆಗಳನ್ನು ಸಮಯದ ಮಿತಿ ಆಧರಿಸಿ ಪ್ರಸ್ತುತಪಡಿಸಬಹುದು.