ಚಾರ್ಮಾಡಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಮತ್ತೆ ವಾಹನ ಸಂಚಾರ ನಿಷೇಧ | ವಾಹನ ಸಂಚಾರ ನಿಷೇಧ ಮಾಡಿ ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ| ಇಂದಿನಿಂದ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಜಿಲ್ಲಾಡಳಿತ| ಗುಡ್ಡ ಕುಸಿಯುವ ಸಾಧ್ಯತೆ ಇರೋದ್ರಿಂದ ವಾಹನ ಸಂಚಾರಕ್ಕೆ ಮತ್ತೆ ಬ್ರೇಕ್.
ಚಿಕ್ಕಮಗಳೂರು, [ಆ.30]: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಇಂದಿನಿಂದ [ಶುಕ್ರವಾರ] ಮತ್ತೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಚಾರ್ಮಾಡಿ ಘಾಟ್ ಸಹಜ ಸ್ಥಿತಿಗೆ ಬರಲು ಇನ್ನಷ್ಟು ದಿನಗಳು ಬೇಕೆಂದು ಪೊಲೀಸ್ ಇಲಾಖೆ ನೀಡಿದ ವರದಿ ಆಧಾರದ ಮೇಲೆ ಮತ್ತೆ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.
undefined
ಚಾರ್ಮಾಡಿ ಘಾಟ್ ಈಗ ಡೇಂಜರ್ ಝೋನ್!
ಪಶ್ಚಿಮ ಘಟ್ಟ ಹಾಗೂ ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿದ್ದ ಮಳೆಗೆ ಚಿಕ್ಕಮಗಳೂರಿನಿಂದ ಮಂಗಳೂರು, ಉಡುಪಿ, ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುತ್ತಿದ್ದ ಚಾರ್ಮಾಡಿ ಘಾಟಿ ರಸ್ತೆಯ ಹಲವು ಕಡೆ ಗುಡ್ಡ ಕುಸಿದಿದ್ದ ಪರಿಣಾಮ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು.
ಆದರೆ ಇಂದು ಬೆಳಗ್ಗೆ ಲಘು ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿತ್ತು. ಆದ್ರೆ ಜಿಲ್ಲಾ ಪೊಲೀಸ್ ಇಲಾಖೆ ನೀಡಿದ ವರದಿಯಲ್ಲಿ ಗುಡ್ಡ ಕುಸಿಯುವ ಸಾಧ್ಯತೆ ಇದೆ ಎಂದು ತಿಳಿಸಿರುವುದರಿಂದ ವಾಹನ ಸಂಚಾರಕ್ಕೆ ಮತ್ತೆ ಬ್ರೇಕ್ ಹಾಕಲಾಗಿದೆ.
ಈ ನಿಷೇಧ ಎಲ್ಲಿಯವರಿಗೆ ಎನ್ನುವುದು ಮಾತ್ರ ಜಿಲ್ಲಾಡಳಿತ ದಿನಾಂಕ ತಿಳಿಸಿಲ್ಲ. ಈ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್ ಸಹಜ ಸ್ಥಿತಿಗೆ ಬರಲು ಇನ್ನೇಷ್ಟು ದಿನ ಬೇಕು ಎನ್ನುವುದು ಕಾದು ನೋಡಬೇಕಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆ ಕೊಟ್ಟಿಗೆಹಾರದಿಂದ ದಕ್ಷಿಣ ಕನ್ನಡಕ್ಕೆ ಸಂಪರ್ಕ ಕಲ್ಪಿಸೋ ಮಾರ್ಗವಾಗಿದೆ.