ಲಾಕ್ ಡೌನ್‌ನಿಂದ ಆರ್ಥಿಕ ಹಿಂಜರಿತ ಉಂಟಾಗಿದೆ. ಮತ್ತೊಮ್ಮೆ ಲಾಕ್ ಡೌನ್ ಹೇರಿಕೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆರ್ಥಿಕತೆ ಸುಧಾರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ದಾವಣಗೆರೆ(ಜೂ.16): ಕೊರೋನಾ ನಿಯಂತ್ರಿಸಲು ಮತ್ತೊಮ್ಮೆ ಲಾಕ್‌ಡೌನ್ ಸಾಧ್ಯವಿಲ್ಲ. ಈ ಮಹಾಮಾರಿಗೆ ವ್ಯಾಕ್ಸಿನ್ ಕಂಡುಹಿಡಿಯುವವರೆಗೂ ಸಾರ್ವಜನಿಕರೂ ಮುಂಜಾಗ್ರತೆ ಕ್ರಮ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ವೈರಸ್ ನಿಯಂತ್ರಿಸಲು ಸಹಕರಿಸಬೇಕು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಮನವಿ ಮಾಡಿದರು.
ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್‌ನಿಂದ ಆರ್ಥಿಕ ಹಿಂಜರಿತ ಉಂಟಾಗಿದೆ. ಮತ್ತೊಮ್ಮೆ ಲಾಕ್ ಡೌನ್ ಹೇರಿಕೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆರ್ಥಿಕತೆ ಸುಧಾರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ಯಾನಿಟೈಜರ್ ಬಳಸುವ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರೋನಾ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅಧಿಕಾರಿಗಳು, ಸಚಿವರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದರು.
ಕೊರೋನಾ ಭಯ: ಮಾಲ್, ಹೋಟೆಲ್, ದೇಗುಲ ಎಲ್ಲೂ ಜನರಿಲ್ಲ
ಜುಲೈ- ಆಗಸ್ಟ್‌ನಲ್ಲಿ ಕೊರೋನಾ ಪ್ರಕರಣ ಮತ್ತಷ್ಟುಹೆಚ್ಚಾಗುವ ಸಾಧ್ಯತೆ ಇದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೊರೋನಾ ನಿಯಂತ್ರಣಕ್ಕೆ ಶ್ರಮಿಸಲಾಗುತ್ತಿದೆ. ಅಗತ್ಯ ಬೆಡ್‌ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜನರೂ ಯಾವುದೇ ಆತಂಕಪಡಿಸಬೇಕಿಲ್ಲ. ಕೊರೋನಾ ವೈರಸ್ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದು ಶ್ರೀರಾಮುಲು ಮನವಿ ಮಾಡಿದರು.