Kalaburagi News: ಕಲುಷಿತ ನೀರು ಸೇವಿಸಿ ಓರ್ವ ಸಾವು; 50ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥ

Published : Sep 11, 2022, 01:09 PM ISTUpdated : Sep 11, 2022, 01:10 PM IST
Kalaburagi News: ಕಲುಷಿತ ನೀರು ಸೇವಿಸಿ ಓರ್ವ ಸಾವು; 50ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥ

ಸಾರಾಂಶ

ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಒರ್ವ ವ್ಯಕ್ತಿ ಸಾವನ್ನಪ್ಪಿದ್ದು, 52 ಜನ ಅಸ್ವಸ್ಥಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ತಾಯಪ್ಪ ತಂದೆ ಯಂಕಪ್ಪ ಬೇಲೂರ (72) ಎಂದು ಗುರುತಿಸಲಾಗಿದೆ. ಶಾಸಕ ಅಜಯ್ ಸಿಂಗ್ ಆಸ್ಪತ್ರೆಗೆ ಭೇಟಿ. ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮಕ್ಕೆ ಖಡಕ್ ಸೂಚನೆ

ಜೇವರ್ಗಿ (ಸೆ.11) : ತಾಲೂಕಿನ ಮಂದೇವಾಲ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಒರ್ವ ವ್ಯಕ್ತಿ ಸಾವನ್ನಪ್ಪಿದ್ದು, 52 ಜನ ಅಸ್ವಸ್ಥಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ತಾಯಪ್ಪ ತಂದೆ ಯಂಕಪ್ಪ ಬೇಲೂರ (72) ಎಂದು ಗುರುತಿಸಲಾಗಿದೆ. ಕಳೆದ ಶುಕ್ರವಾರ ರಾತ್ರಿಯಿಂದ ಕಲುಷಿತ ನೀರು ಸೇವನೆಯಿಂದ ವಾಂತಿ ಭೇದಿ ಹೊಟ್ಟೆನೊವು ಆರಂಭವಾಗಿ ಬಹುತೇಕರು ಮಂದೆವಾಲ ಸಾರ್ವಜನಿಕ ಆಸ್ಪತ್ರೆ ಜೇವರ್ಗಿಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಕಲಬುರ್ಗಿಯ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆ ಪಡೆಯಲು ದಾಖಲಾಗಿದ್ದಾರೆ.

ಬಳ್ಳಾರಿ: ಕಲುಷಿತ ನೀರು ಕುಡಿದು 10 ವರ್ಷದ ಬಾಲಕಿ ಸಾವು

ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡ ಸುದ್ದಿ ತಿಳಿಯುತ್ತಿದ್ದಂತೆಯೇ ತಹಸೀಲ್ದಾರ ಸಂಜೀವಕುಮಾರ ದಾಸರ, ತಾಲೂಕು ಆರೋಗ್ಯಾಧಿಕಾರಿ ಡಾ.ಸಿದ್ದುಪಾಟೀಲ ಅವರು ಸಿಬ್ಬಂದಿ ಸಮೇತ ಮಂದೇವಾಲ ಗ್ರಾಮದಲ್ಲಿ ಮುಕಾಂ ಹೂಡಿ ಗ್ರಾಮದ ಮನೆ ಮನೆಗೆ ತೆರಳಿ ಮುಂಜಾಗ್ರತ ಕ್ರಮವಾಗಿ ಮಾತ್ರೆಗಳನ್ನು ನೀಡುತ್ತಿದ್ದು ಅಸ್ವಸ್ಥಗೊಂಡವರನ್ನು ಮಂದೆವಾಲ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡುತ್ತಿದ್ದಾರೆ.

ಕಳೆದ ಹಲವಾರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಕುಡಿಯುವ ನೀರು ಪೂರೈಸುವ ಪೈಪ್‌ಗಳಿಗೆ ಸುತ್ತುವರಿದ ಕಲುಷಿತ ನೀರು ಮನೆಗಳಿಗೆ ತಲುಪುವ ನಲ್ಲಿಗಳಲ್ಲಿ ಬಂದಿವೆ. ಇದರ ಜೊತೆಗೆ ಪಕ್ಕದಲ್ಲಿಯೆ ಚರಂಡಿ ನೀರು ಹರಿಯುತ್ತಿದ್ದು, ಕೊಳಚೆ ನೀರು ಸಹ ಇದರಲ್ಲಿ ಸೇರಿರುವದರಿಂದ, ಗ್ರಾಮಸ್ಥರ ಆರೋಗ್ಯದಲ್ಲಿ ಏರು ಪೇರಾಗಿದೆ ಎಂದು ಗ್ರಾಮಸ್ಥರು ಅಳಲು ತೊಡಿಕೊಂಡಿದ್ದಾರೆ. ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪಿಸುವಂತೆ ಅನೇಕ ಬಾರಿ ಅ​ಕಾರಿಗಳಿಗೆ ಮನವಿ ಮಾಡಿದರು ಸ್ಪಂದಿಸದೆ ಇರುವುದರಿಂದ ಈ ಅವಘಡ ಸಂಭವಿಸಲು ಕಾರಣವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

Raichur; ಕಲುಷಿತ ನೀರು ಸೇವಿಸಿ ಮಹಿಳೆ ಸಾವು, 50ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು

ಆಸ್ಪತ್ರೆಗೆ ಶಾಸಕ ಅಜಯ್‌ಸಿಂಗ್‌ ಭೇಟಿ

ಕುಡಿವ ನೀರಿನ ಟ್ಯಾಂಕ್‌ನಲ್ಲಿರುವ ಕಲುಷಿತ ನೀರು ಕುಡಿದು ಸುಮಾರು 50ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿರುವ ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮಕ್ಕೆ ಶನಿವಾರ ಭೇಟಿ ನೀಡಿದ ಶಾಸಕ ಅಜಯ್‌ ಸಿಂಗ್‌ ಅವರು ಗ್ರಾಮದಲ್ಲಿರುವ ಬೋರ್‌ವೇಲ್‌, ನೀರಿನ ಟ್ಯಾಂಕ್‌ಗೆ ತೆರಳಿ ವೀಕ್ಷಿಸಿ ಸಂಬಂಧಪಟ್ಟಅಧಿಕಾರಿಗಳ ಮೇಲೆ ಕ್ರಮತೆಗೆದುಕೊಳ್ಳುವಂತೆ ಗ್ರಾಮಸ್ಥರ ಸಮ್ಮುಖದಲ್ಲಿ ಹಿರಿಯ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದ ಶಾಸಕರು ಅನಾರೋಗ್ಯದಿಂದ ಮೃತಪಚ್ಚ ಕುಟುಂಬಕ್ಕೆ ಸ್ಥಳದಲ್ಲಿಯೇ ಸಹಾಯಧನದ ಚೆಕ್‌ ನೀಡಿದರು. ಜೇವರ್ಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಕಲುಷಿತ ನೀರು ಕುಡಿತು ಆಸ್ಪತ್ರೆಗೆ ದಾಖಲಾದವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಸಂಬಂಧಪಟ್ಟಅಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು, ವೈದ್ಯರು, ಗ್ರಾಮಸ್ಥರು, ಪೊಲೀಸ್‌ ಅಧಿಕಾರಿಗಳು, ಹಿರಿಯ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

PREV
Read more Articles on
click me!

Recommended Stories

Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!
ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ