ಶಿವಮೊಗ್ಗ : ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ

Published : Sep 19, 2019, 11:53 AM ISTUpdated : Sep 19, 2019, 11:58 AM IST
ಶಿವಮೊಗ್ಗ : ಬೆಳ್ಳಂಬೆಳಗ್ಗೆ ಭೀಕರ ಸರಣಿ  ಅಪಘಾತ

ಸಾರಾಂಶ

ಬೆಳ್ಳಂಬೆಳಗ್ಗೆ ಶಿವಮೊಗ್ಗ ಭೀಕರ ಸರಣಿ ಅಪಘಾತ ನಡೆದಿದೆ. ಈ ವೇಳೆ ಹಲವು ವಾಹನಗಳು ಜಖಂಗೊಂಡಿವೆ. 

ಹೊಸನಗರ [ಸೆ.19]: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತವಾಗಿದೆ.

ಜಿಲ್ಲೆಯ ಬಟ್ಟೆ ಮಲ್ಲಪ್ಪ ಎಂಬಲ್ಲಿ ವೇಗವಾಗಿ ಬರುತ್ತಿದ್ದ ಕಾರು ಬ್ಯಾರಿಕೇಡ್ ಗೆ ಡಿಕ್ಕಿಯಾಗಿದ್ದು, ಬಳಿಕ ಬೈಕಿಗೆ ಗುದ್ದಿ ನಿಂತಿದ್ದ ಮಹಿಳೆಗೆ ಬಡಿದಿದೆ.  ಈ ವೇಳೆ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. 

ಅಪಘಾತದಲ್ಲಿ ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದು, ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಹಿಳೆಗೆ ಗುದ್ದಿದ ಕಾರು ಆಟೋಗೂ ಗುದ್ದಿ ಬಳಿಕ ಮೋರಿಯಲ್ಲಿ ಉರುಳಿ ಬಿದ್ದಿದೆ. ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ. 

ಸರಣಿ ಅಪಘಾತದಲ್ಲಿ ಹಲವು ವಾಹನಗಳು ಜಖಂ ಆಗಿದ್ದು ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
click me!

Recommended Stories

ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಹೊಸ ಮಾರ್ಗಗಳಿಗೆ ಬರಲಿವೆ ಚಾಲಕ ರಹಿತ ರೈಲು