ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನೊಂದು ಕೊರೋನಾ ಸೋಂಕು ಪ್ರಕರಣ ದೃಢ

By Suvarna News  |  First Published Jun 20, 2020, 8:24 AM IST

ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ(ಜೂ.20)ರಂದು ಹೊಸದಾಗಿ ಒಂದು ಪ್ರಕರಣ ಪತ್ತೆಯಾಗಿದೆ. ಕೆಲ ದಿನಗಳ ಹಿಂದೆ ಉಡುಪಿ ಮತ್ತು ದಾವಣಗೆರೆಗೆ ಹೋಗಿ ಇವರು ಹೋಗಿಬಂದಿದ್ದರು. ಮೂರು ದಿನಗಳ ಹಿಂದೆ ಜ್ವರ, ಕೆಮ್ಮಿನಿಂದ ಬಳಲುತ್ತಿದ್ದು ತೀರ್ಥಹಳ್ಳಿಯ ಖಾಸಗಿ ಆಸ್ಪತ್ರೆಗೆ ಹೋದಾಗ ಅಲ್ಲಿನ ವೈದ್ಯರು ಸರ್ಕಾರಿ ಆಸ್ಪತ್ರೆಯಲ್ಲಿ ಕರೊನಾ ಪರೀಕ್ಷೆ ಮಾಡಿಸಿಕೊಂಡು ಬರುವಂತೆ ಸೂಚಿಸಿದ್ದರು. ಬಳಿಕ ಪರೀಕ್ಷೆಯಲ್ಲಿ ಪಾಸಿಟಿವ್‌ ಬಂದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.


ಶಿವಮೊಗ್ಗ(ಜೂ.20): ಜಿಲ್ಲೆಯಲ್ಲಿ ಶುಕ್ರವಾರ ಒಬ್ಬ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಶುಕ್ರವಾರ ಪತ್ತೆಯಾದ ಪ್ರಕರಣ ಸೇರಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 107 ಮಂದಿಗೆ ಸೋಂಕು ಪತ್ತೆಯಾದಂತಾಗಿದೆ. ಪಿ- 8063 ( 42 ವರ್ಷದ ಯುವಕ)ಗೆ ಸೋಂಕು ತಗುಲಿದ್ದು, ಆತನಿಗೆ ಇದೀಗ ಕೋವಿಡ್‌ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಿಪ್ಪನ್‌ಪೇಟೆ ಸಮೀಪದ ವಡಾಹೊಸಳ್ಳಿಯ ಪಾಶೆಟ್ಟಿಕೊಪ್ಪದ ಈತ ರಸ್ತೆ ಬದಿ ಅಂಗಡಿಗಳಿಗೆ ಜ್ಯೂಸ್‌ ಕಬ್ಬು ಸರಬರಾಜು ಮಾಡುತ್ತಿದ್ದರು. ಕೆಲ ದಿನಗಳ ಹಿಂದೆ ಉಡುಪಿ ಮತ್ತು ದಾವಣಗೆರೆಗೆ ಹೋಗಿ ಇವರು ಹೋಗಿಬಂದಿದ್ದರು. ಮೂರು ದಿನಗಳ ಹಿಂದೆ ಜ್ವರ, ಕೆಮ್ಮಿನಿಂದ ಬಳಲುತ್ತಿದ್ದು ತೀರ್ಥಹಳ್ಳಿಯ ಖಾಸಗಿ ಆಸ್ಪತ್ರೆಗೆ ಹೋದಾಗ ಅಲ್ಲಿನ ವೈದ್ಯರು ಸರ್ಕಾರಿ ಆಸ್ಪತ್ರೆಯಲ್ಲಿ ಕರೊನಾ ಪರೀಕ್ಷೆ ಮಾಡಿಸಿಕೊಂಡು ಬರುವಂತೆ ಸೂಚಿಸಿದ್ದರು. ಬಳಿಕ ಪರೀಕ್ಷೆಯಲ್ಲಿ ಪಾಸಿಟಿವ್‌ ಬಂದಿದೆ.

Latest Videos

undefined

ದಕ್ಷಿಣ ಕನ್ನಡ​ದಲ್ಲಿ 206 ಮಂದಿ ಕೊರೋನಾ ಗುಣಮುಖರು ಬಿಡುಗಡೆ

ಸೋಂಕಿತ ವ್ಯಕ್ತಿ ರಿಪ್ಪನ್‌ಪೇಟೆಯ ಮೂರು ಅಂಗಡಿಗಳಿಗೆ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಶುಕ್ರವಾರ ಸ್ಯಾನಿಟೈಸ್‌ ಮಾಡಲಾಯಿತು. ಈತನ ಪತ್ನಿ, ಇಬ್ಬರು, ಮಕ್ಕಳು, ತಾಯಿಗೆ ಹೋಮ್‌ ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 107 ಪಾಸಿಟಿವ್‌ ಪ್ರಕರಣ ಪತ್ತೆಯಾಗಿದ್ದು ಇಲ್ಲಿಯವರೆಗೂ 68 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 38 ಮಂದಿಗೆ ಚಿಕಿತ್ಸೆ ಮುಂದುವರೆದಿದೆ. ಓರ್ವ ಸೋಂಕಿತರು ಮೃತಪಟ್ಟಿದ್ದಾರೆ.

click me!