ಚಿತ್ರದುರ್ಗದಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್

By Kannadaprabha NewsFirst Published Jul 8, 2020, 9:15 AM IST
Highlights

ಕೋಟೆ ನಾಡಿನಲ್ಲಿ ಮಂಗಳವಾರ(ಜು.07) ಹೊಸದಾಗಿ ಒಂದು ಕೋವಿಡ್ 19 ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಚಿತ್ರದುರ್ಗ(ಜು.08): ಜಿಲ್ಲೆಯ ಹಿರಿಯೂರು ನಗರದ 54 ವರ್ಷದ ವ್ಯಕ್ತಿಗೆ ಮಂಗಳವಾರ ಕೊರೋನಾ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 90ಕ್ಕೆ ಏರಿಕೆಯಾದಂತಾಗಿದೆ. 

ಜಿಲ್ಲೆಯ ಒಟ್ಟು 90 ದೃಢಪಟ್ಟ ಪ್ರಕರಣಗಳಲ್ಲಿ ಈಗಾಗಲೇ 54 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 36 ಪ್ರಕರಣಗಳು ಸಕ್ರಿಯವಾಗಿವೆ. ಇವುಗಳ ಪೈಕಿ ಚಿತ್ರದುರ್ಗದ ಕೋವಿಡ್‌ ಆಸ್ಪತ್ರೆಯಲ್ಲಿ 13, ಭರಮಸಾಗರ-4, ಹಿರಿಯೂರು ತಾಲೂಕು ಧರ್ಮಪುರದ ನಿಗದಿತ ಕೋವಿಡ್‌ ಹೆಲ್ತ್‌ಕೇರ್‌ ಸೆಂಟರ್‌ನಲ್ಲಿ 10, ಚಳ್ಳಕೆರೆ ತಾಲೂಕು ನಾಯಕನಹಟ್ಟಿಯಲ್ಲಿ 1, ಪರಶುರಾಂಪುರ 2, ಮೊಳಕಾಲ್ಮೂರು ತಾಲೂಕು ರಾಂಪುರದಲ್ಲಿ 4 ಹಾಗೂ ಹೊಸದುರ್ಗ ತಾಲೂಕು ಬೆಲಗೂರಿನ ನಿಗದಿತ ಕೋವಿಡ್‌ ಹೆಲ್ತ್‌ಕೇರ್‌ ಸೆಂಟರ್‌ನಲ್ಲಿ ಇಬ್ಬರು ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಚಿಕ್ಕಮಗಳೂರಿನಲ್ಲಿ ಶತಕ ಬಾರಿಸಿದ ಕೊರೋನಾ ವೈರಸ್..!

ಸದ್ಯ ಜಿಲ್ಲೆಯಲ್ಲಿ ಒಟ್ಟು 20 ಕಂಟೈನ್ಮೆಂಟ್‌ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1619 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ ಐಎಲ್‌ಐ, ಯುಆರ್‌ಐನ ಒಟ್ಟು 2431 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 488 ಜನ ಹೋಂಕ್ವಾರಂಟೈನ್‌ನಲ್ಲಿ ಹಾಗೂ ಮೂವರು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇದ್ದಾರೆ. ಈವರೆಗೆ 7274 ಜನರ ಮಾದರಿ ಸಂಗ್ರಹಿಸಲಾಗಿದ್ದು, 5388 ಜನರ ವರದಿ ನೆಗೆಟಿವ್‌ ಬಂದಿದೆ. ಉಳಿದ 180 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಾಲಾಕ್ಷ ತಿಳಿಸಿದ್ದಾರೆ.
 

click me!