ದೀಪಾವಳಿ ಹಬ್ಬಕ್ಕೆ ಏಕಮುಖ ವಿಶೇಷ ರೈಲು ಸಂಚಾರ

By Kannadaprabha News  |  First Published Oct 25, 2024, 11:55 AM IST

ರೈಲು ಸಂಖ್ಯೆ 07323 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ಒನ್ ವೇ ವಿಶೇಷ ಎಕ್ಸ್‌ಪ್ರೆಸ್ ರೈಲು ಅ. 30ರಂದು ಎಸ್‌ಎಸ್ ಎಸ್ ಹುಬ್ಬಳ್ಳಿಯಿಂದ ಬೆಳಗ್ಗೆ 8ಕ್ಕೆ ಹೊರಟು ಅದೇ ದಿನ ಮಧ್ಯಾಹ್ನ 3.45ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ. 


ಹುಬ್ಬಳ್ಳಿ(ಅ.25):  ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯಿಂದ ಹೆಚ್ಚುವರಿ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ವ್ಯವಸ್ಥೆ ಮಾಡಲಾಗಿದೆ. 

ರೈಲು ಸಂಖ್ಯೆ 07323 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ಒನ್ ವೇ ವಿಶೇಷ ಎಕ್ಸ್‌ಪ್ರೆಸ್ ರೈಲು ಅ. 30ರಂದು ಎಸ್‌ಎಸ್ ಎಸ್ ಹುಬ್ಬಳ್ಳಿಯಿಂದ ಬೆಳಗ್ಗೆ 8ಕ್ಕೆ ಹೊರಟು ಅದೇ ದಿನ ಮಧ್ಯಾಹ್ನ 3.45ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ. 

Tap to resize

Latest Videos

ಬೆಂಗಳೂರು-ಕಾಮಾಕ್ಯ ಸೇರಿ 300ಕ್ಕೂ ಹೆಚ್ಚು ರೈಲು ರದ್ದು, ಭಾರತೀಯ ರೈಲ್ವೇ ಹೈ ಅಲರ್ಟ್!

ಈ ರೈಲು ಹಾವೇರಿ, ರಾಣಿಬೆನ್ನೂರು, ದಾವಣಗೆರೆ, ಬೀರೂರು, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲ್ಲಲಿದೆ. ರೈಲು ಸಂಖ್ಯೆ 07325 ಕಲಬುರಗಿ-ಎಸ್ ಎಸ್ಎಸ್‌ ಹುಬ್ಬಳ್ಳಿ ಒನ್ ವೇ ವಿಶೇಷ ಎಕ್ ಪ್ರೆಸ್ ರೈಲು 31ರಂದು ಕಲಬುರಗಿಯಿಂದ ಬೆಳಗ್ಗೆ 6.15ಕ್ಕೆ ಹೊರಟು ಅದೇ ದಿನ ಸಂಜೆ 4 ಗಂಟೆಗೆ ಹುಬ್ಬಳ್ಳಿ ತಲುಪಲಿದೆ. 

ಮಾರ್ಗದಲ್ಲಿ ಈ ರೈಲು ಶಹಾಬಾದ್, ಯಾದಗಿರಿ, ಕೃಷ್ಣಾ, ರಾಯಚೂರು, ಮಂತ್ರಾಲಯಂ ರೋಡ್, ಆದೋನಿ, ಬಳ್ಳಾರಿ, ತೋರಣಗಲ್ಲು, ಹೊಸಪೇಟೆ, ಕೊಪ್ಪಳ ಮತ್ತು ಗದಗ . ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. ಈ ಎರಡೂ ರೈಲುಗಳು (07323, 07325) 1 ಎಸಿ ಫಸ್ಟ್ ಕ್ಲಾಸ್, 2 ಎಸಿ 2 ಟೈರ್, 4 ಎಸಿ 3 ಟೈರ್, 3 ಎಸಿ 3 - ಟೈರ್ ಎಕಾನಮಿ, 6 ಸ್ಟೀಪರ್‌ಕ್ಲಾಸ್, 2 ಜನರಲ್ ಸೆಕೆಂಡ್ ಕ್ಲಾಸ್, 1 ಪ್ಯಾಂಟ್ರಿ ಕಾರ್‌ಮತ್ತು 2 ಲಗೇಜ್ ಬ್ರೇಕ್ ಮತ್ತು ಜನರೇಟರ್ ಕಾರುಗಳು ಸೇರಿದಂತೆ 21 ಬೋಗಿಗಳನ್ನು ಒಳಗೊಂಡಿರುತ್ತದೆ. www.enquiry. indianrail.gov.i ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅಥವಾ ಎನ್ ಟಿಇಎಸ್ ಅಪ್ಲಿಕೇಶನ್ ಬಳಸಿ ಅಥವಾ 139ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ, ನಿರ್ಗಮನ ಸಮಯ ಇತರ ವಿವರಗಳನ್ನು ಪರಿಶೀಲಿಸಬಹುದು ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

click me!