ಅನುತ್ತೀರ್ಣರಿಗೆ ಪರೀಕ್ಷೆ ಬರೆಯುವ ಅವಕಾಶ

By Kannadaprabha News  |  First Published Dec 18, 2019, 9:58 AM IST

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸುಗಳಿಗೆ ಪ್ರವೇಶ ಪಡೆದು ಪರೀಕ್ಷೆ ತೆಗೆದುಕೊಂಡಿಲ್ಲದ ಅಥವಾ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಅವಕಾಶವನ್ನು ಕಲ್ಪಿಸಲಾಗಿದೆ


ಚಾಮರಾಜನಗರ(ಡಿ.18): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸುಗಳಿಗೆ ಪ್ರವೇಶ ಪಡೆದು ಪರೀಕ್ಷೆ ತೆಗೆದುಕೊಂಡಿಲ್ಲದ ಅಥವಾ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಅವಕಾಶವನ್ನು ಕಲ್ಪಿಸಲಾಗಿದೆ.

ಅದರಂತೆ 2013-14 ಮತ್ತು 2013-14ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದ ಬಿ.ಎ, ಬಿ.ಕಾಂ, ಬಿಎಲ್‌ಐಎಸ್‌ಸಿ, ಬಿ.ಎಡ್‌(ವಿಶೇಷ), ಎಂಎ, ಎಂ.ಕಾಂ, ಎಂಬಿಎ, ಲೈಬ್ರರಿ ಸೈನ್ಸ್‌, ಎಲ್ಲ ಎಂಎಸ್‌ಸಿ, ಎಲ್ಲ ಡಿಪ್ಲೋಮಾ ಅಥವಾ ಸರ್ಟಿಫಿಕೇಟ್‌ ಕೋರ್ಸ್‌ಗಳು ಹಾಗೂ 2011-12, 2012-13 ಮತ್ತು 2018-19ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ಸ್ನಾತಕ ಪದವಿಗಳಾದ ಬಿ.ಎ, ಬಿ.ಕಾಂ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳದೇ ಇದ್ದಲ್ಲಿ ಅಥವಾ ಅನುತ್ತೀರ್ಣರಾಗಿದ್ದಲ್ಲಿ ಮತ್ತೊಮ್ಮೆ ಪರೀಕ್ಷೆ ಬರೆಯಬಹುದಾಗಿದೆ.

Latest Videos

undefined

ಕೆಪಿಎಸ್‌ಸಿ ನೇಮಕಾತಿ: ಗ್ರೂಪ್ ಸಿ ಹುದ್ದೆಗಳ ಭರ್ತಿ

ಆಸಕ್ತ ವಿದ್ಯಾರ್ಥಿಗಳು ದಂಡ ಶುಲ್ಕವಿಲ್ಲದೇ ಡಿ. 24ರೊಳಗೆ ಮತ್ತು ದಂಡ ಸಹಿತ 2020ರ ಜ. 5ರೊಳಗೆ ಪರೀಕ್ಷಾ ಶುಲ್ಕವನ್ನು ಪಾವತಿಸಬೇಕು. ಜಿಲ್ಲೆಯ ವಿದ್ಯಾರ್ಥಿಗಳು ಈ ಅವಕಾಶದ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾಲಯದ ವೆಬ್‌ಸೈಟ್‌ https://www.ksoumysuru.ac.in/ ವೀಕ್ಷಿಸಬಹುದು ಮತ್ತು ನಗರದ ರಾಮಸಮುದ್ರ ಕೆಎಚ್‌ಬಿ ಬಡಾವಣೆಯ ಇಮಾನ್ಯುವೆಲ್‌ ಕ್ರಿಶ್ಚಿಯನ್‌ ಪಬ್ಲಿಕ್‌ ಶಾಲೆಯ ಎದುರು ಇರುವ ವಿವಿ ಪ್ರಾದೇಶಿಕ ಕೇಂದ್ರ ಕಚೇರಿ ಅಥವಾ ದೂ.ಸಂ: 08226-222191 ಅನ್ನು ಸಂಪರ್ಕಿಸುವಂತೆ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಎಸ್‌.ಮಹದೇವ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿರುದ್ಯೋಗಿಗಳನ್ನು ಉದ್ಯೋಗಸ್ಥರಾಗಿಸಲು ಕರ್ನಾಟಕ ಸರ್ಕಾರದಿಂದ ಮಹತ್ವದ ಯೋಜನೆ

click me!