ಭಟ್ಕಳ ಶಾಸಕ ಸುನೀಲ್ ನಾಯ್ಕಗೆ ಶಾಸಕನಾಗುವ ಯಾವುದೇ ಯೋಗ್ಯತೆ ಇಲ್ಲ ಎಂದು ಆರೋಪಿಸಿರುವ ಸ್ವಪಕ್ಷೀಯರು, ಈ ಬಾರಿ ಚುನಾವಣೆಗೆ ಟಿಕೆಟ್ ನೀಡದಂತೆ ಒತ್ತಾಯಿಸಿದ್ದಾರೆ.
ಉತ್ತರ ಕನ್ನಡ (ಮಾ.19): ಭಟ್ಕಳ ಶಾಸಕ ಸುನೀಲ್ ನಾಯ್ಕಗೆ ಶಾಸಕನಾಗುವ ಯಾವುದೇ ಯೋಗ್ಯತೆ ಇಲ್ಲ ಎಂದು ಆರೋಪಿಸಿರುವ ಸ್ವಪಕ್ಷೀಯರು, ಈ ಬಾರಿ ಚುನಾವಣೆಗೆ ಟಿಕೆಟ್ ನೀಡದಂತೆ ಒತ್ತಾಯಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಆಯೋಜಿಸಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಕಾರ್ಯಕರ್ತರು, ಶಾಸಕ ಸುನೀಲ್ ನಾಯ್ಕ್ ಭಟ್ಕಳ ಮುಸ್ಲಿಂ ಸಮುದಾಯದ ತಂಜೀಂ ಸಂಸ್ಥೆಯೊಂದಿಗೆ ಕೈಮಿಲಾಯಿಸಿ ಬಿಜೆಪಿ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯ ಮೂಲ ಕಾರ್ಯಕರ್ತರನ್ನೇ ಪಕ್ಷದಲ್ಲಿ ಕಡೆಗಣಿಸಲಾಗುತ್ತಿದ್ದು, ಸರ್ವಾಧಿಕಾರಿ ಧೋರಣೆ ವಿರೋಧಿಸುವ ಕಾರ್ಯಕರ್ತರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ಅಕೌಂಟ್‌ಗಳ ಮೂಲಕ ತೇಜೋವಧೆ ಮಾಡಿ ಬೆದರಿಕೆ ಒಡ್ಡಲಾಗುತ್ತಿದೆ.
ಕೊಪ್ಪಳದಲ್ಲಿ ತಂದೆ ತಾಯಿ ಇಲ್ಲದ ಮಕ್ಕಳನ್ನು ದತ್ತು ಪಡೆದ ಗಾಲಿ ಜನಾರ್ಧನ ರೆಡ್ಡಿ!
ಅಲ್ಲದೇ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭಟ್ಕಳಕ್ಕೆ ಬಂದ ಸಂದರ್ಭದಲ್ಲಿ ಹಲಾಲ್ ಮಾಂಸದ ಊಟ ಮಾಡಿಸಿ ಉದ್ದೇಶಪೂರ್ವಕವಾಗಿ ದೇವಸ್ಥಾನಕ್ಕೆ ಕರೆದೊಯ್ದಿದ್ದರು. ಈ ಮೂಲಕ ಸಿ.ಟಿ.ರವಿ ಹಾಗೂ ಬಿಜೆಪಿ ಪಕ್ಷಕ್ಕೆ ಮುಜುಗರ ಉಂಟಾಗುವಂತೆ ಸುನೀಲ್ ನಾಯ್ಕ ನಡೆದುಕೊಂಡಿದ್ದು, ಪಕ್ಷಕ್ಕೆ ತೇಜೋವಧೆ ಮಾಡುವ ಉದ್ದೇಶದಿಂದಲೇ ಈ ರೀತಿ ನಡೆದುಕೊಂಡಿದ್ದಾರೆ ಎಂದು ಕಾರ್ಯಕರ್ತರು ಕಿಡಿಕಾರಿದ್ದಾರೆ.
UTTARA KARNATAKA: ಬರೋಬ್ಬರಿ 23 ವರ್ಷಗಳ ಹೋರಾಟಕ್ಕೆ ಕೊನೆಗೂ ರೈತರಿಗೆ ಸಿಕ್ಕಿತು ಪ್ರತಿಫಲ
ಈ ಬಾರಿ ಭಟ್ಕಳ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಸುನೀಲ್ ನಾಯ್ಕಗೆ ಬಿಜೆಪಿ ಟಿಕೆಟ್ ನೀಡಬಾರದು. ಒಂದು ವೇಳೆ ಅವರಿಗೇ ಟಿಕೆಟ್ ನೀಡಿದಲ್ಲಿ ನಾವು ಬೇರೆ ಅಭ್ಯರ್ಥಿಗೆ ಬೆಂಬಲ ನೀಡುತ್ತೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.