ಕಾವೇರಿ ನೀರು ಹರಿಸುವ ಆದೇಶಕ್ಕೆ ವಿರೋಧ : ಕಾವೇರಿ ಕ್ರಿಯಾ ಸಮಿತಿ

By Kannadaprabha News  |  First Published Oct 9, 2023, 8:36 AM IST

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್‌ ಆದೇಶ ವಿರೋಧಿಸಿ ಹಾಗೂ ಕನ್ನಡಿಗರ ಜೀವನದಿ ಕಾವೇರಿ ಉಳಿಸಲು ಆಗ್ರಹಿಸಿ ಕಾವೇರಿ ಕ್ರಿಯಾ ಸಮಿತಿಯವರು ನಗರದ ಪುರಭವನ ಮುಂಭಾಗದ ದೊಡ್ಡ ಗಡಿಯಾರದ ಬಳಿ ಭಾನುವಾರ ಸಹ ಪ್ರತಿಭಟಿಸಿದರು.


  ಮೈಸೂರು :  ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್‌ ಆದೇಶ ವಿರೋಧಿಸಿ ಹಾಗೂ ಕನ್ನಡಿಗರ ಜೀವನದಿ ಕಾವೇರಿ ಉಳಿಸಲು ಆಗ್ರಹಿಸಿ ಕಾವೇರಿ ಕ್ರಿಯಾ ಸಮಿತಿಯವರು ನಗರದ ಪುರಭವನ ಮುಂಭಾಗದ ದೊಡ್ಡ ಗಡಿಯಾರದ ಬಳಿ ಭಾನುವಾರ ಸಹ ಪ್ರತಿಭಟಿಸಿದರು.

ಈ ಹೋರಾಟಕ್ಕೆ ಬೆಂಬಲ ಸೂಚಿಸಿ ಅಖಿಲ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಕುಡಿಯಲು ನೀರಿಲ್ಲದಿದ್ದರೂ, ತಮಿಳುನಾಡಿನ ಒತ್ತಾಯಕ್ಕೆ ಮಣಿದು 3ನೇ ಬೆಳೆಗೆ ನೀರು ಬಿಡಲು ಆದೇಶಿಸಿರುವುದು ಖಂಡನಿಯ. ಕಾವೇರಿ ಕಣಿವೆಯ ವಸ್ತುಸ್ಥಿತಿ ತಿಳಿದಿದ್ದರೂ ನಮಗೆ ನೀರು ಬಿಡಿ ಎಂದು ಹಠ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು.

Latest Videos

undefined

ರಾಜ್ಯದಲ್ಲಿ ಸೂಕ್ತ ಮಳೆಯಾಗದೆ ಬರಗಾಲ ಆವರಿಸಿದ್ದರೂ ಸರ್ಕಾರ ರೈತರ ನೆರವಿಗೆ ಧಾವಿಸದೆ ನಿರ್ಲಕ್ಷ್ಯವಹಿಸಿದೆ. ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿದು ರಾಜ್ಯವನ್ನು ಬಲಿಕೊಡಲಾಗುತ್ತಿದೆ. ಇನ್ನಾದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸಬೇಕು. ಕೇಂದ್ರ ಸರ್ಕಾರ ಈ ಕೂಡಲೇ ಮಧ್ಯಸ್ಥಿಕೆ ವಹಿಸಿ ನಮಗೆ ಶಾಶ್ವತ ಪರಿಹಾರ ನೀಡಬೇಕು. ನೀರಿದ್ದಾಗ ಮಾತ್ರ ನೀರು ಬಿಡಲು ಸೂತ್ರ ರಚಿಸಬೇಕು ಎಂದು ಅವರು ಒತ್ತಾಯಿಸಿದರು.

ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷ ಜಯಪ್ರಕಾಶ್, ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಸಿ.ಜಿ. ಗಂಗಾಧರ್, ಮುಖಂಡರಾದ ಮೂಗೂರು ನಂಜುಂಡಸ್ವಾಮಿ, ಮೋಹನ್ ಕುಮಾರ್ ಗೌಡ, ಎಂ.ಜೆ. ಸುರೇಶ್ ಗೌಡ, ತೇಜೇಶ್ ಲೋಕೇಶ್ ಗೌಡ, ಸುಮಿತ್ರಾ ರಮೇಶ್, ಶಿವಲಿಂಗಯ್ಯ, ಸುಜಾತ, ಸುರೇಶ್, ದುರ್ಗಮ್ಮ, ವಿಜಯೇಂದ್ರ, ಕೃಷ್ಣಯ್ಯ, ನಳಿನಿ, ನರಸಿಂಹೇ ಗೌಡ, ಹನುಮಂತಯ್ಯ, ಪುಷ್ಪಾವತಿ, ಶುಭಶ್ರೀ, ಮಂಜುಳ, ಸೌಭಾಗ್ಯ ಲಕ್ಷ್ಮಿ, ಹನುಮಂತೇಶ್, ಸೋಮೇಗೌಡ, ಹೇಮಂತ್, ಪ್ರಭಾಕರ್, ಮಹಾದೇವ ಮೊದಲಾದವರು ಇದ್ದರು

ಗಡಿ ಬಂದ್

ಮಂಡ್ಯ/ಮದ್ದೂರು (ಅ.06): ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ ಅ.10ರಂದು ಕರ್ನಾಟಕ- ತಮಿಳುನಾಡು ಗಡಿ ಬಂದ್ ಮಾಡಿ ಚಳವಳಿ ನಡೆಸಲಾಗುವುದು ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಗುರುವಾರ ಹೇಳಿದರು. ತಮಿಳುನಾಡಿಗೆ ಕಾವೇರಿ ಕೊಳ್ಳದಿಂದ ನೀರು ಬಿಡದಂತೆ ಸರ್ಕಾರವನ್ನು ಒತ್ತಾಯಿಸಿ ಬೆಂಗಳೂರಿನಿಂದ ಕೆಆರ್‌ಎಸ್‌ ಮುತ್ತಿಗೆ ಕಾರ್ಯಕ್ರಮಕ್ಕೆ ತೆರಳುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಂಗ್ರೆಸ್‌ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸದೇ ಹೋದರೆ ರೈತರು ಮತ್ತು ಕನ್ನಡಪರ ಹೋರಾಟಗಾರರು ಕರ್ನಾಟಕ- ತಮಿಳುನಾಡು ಸಂಪರ್ಕಿಸುವ ಹೊಸೂರು, ಚಾಮರಾಜನಗರ ಹಾಗೂ ಕನಕಪುರ ಗಡಿ ಭಾಗಗಳಲ್ಲಿ ಅ.10ರಂದು ಬಂದ್ ಮಾಡುವ ಮೂಲಕ ಚಳವಳಿ ನಡೆಸುತ್ತೇವೆ. ಈ ಬಗ್ಗೆ ಜೈಲಿಗೆ ಹೋಗಲೂ ಸಿದ್ಧ ಎಂದು ಘೋಷಿಸಿದರು. ಕಾವೇರಿ ವಿಚಾರದಲ್ಲಿ ತಮಿಳುನಾಡು ರಾಜಕಾರಣಿಗಳು ಕರ್ನಾಟಕದ ವಿರುದ್ಧ ದ್ವೇಷ ಸಾಧಿಸುತ್ತಿದ್ದಾರೆ. ಬ್ಲಾಕ್ ಮೇಲ್ ಮಾಡುವುದನ್ನು ಬಿಡಬೇಕು. ಇಲ್ಲವಾದಲ್ಲಿ ಕನ್ನಡಿಗರಿಂದ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

Mandya: ತಿಂಗಳ ಬಳಿಕ 100 ಅಡಿ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ!

ಕೆಆರ್‌ಎಸ್‌ ಜಲಾಶಯ ಮುತ್ತಿಗೆ ಕಾರ್ಯಕ್ರಮಕ್ಕೆ ರೈತರು ಮತ್ತು ಕನ್ನಡ ಸಂಘಟನೆಗಳ ಹೋರಾಟಗಾರರು ಬೆಂಬಲ ನೀಡುತ್ತಿರುವುದು ನಮ್ಮ ಹೋರಾಟಕ್ಕೆ ಸ್ಪೂರ್ತಿ ತಂದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಸಚಿವರು ನರಸತ್ತ ಹೇಡಿಗಳಂತೆ ವರ್ತಿಸುತ್ತಿದ್ದಾರೆ. ಹೀಗಾಗಿ ನೀರಿನ ವಿಚಾರದಲ್ಲಿ ನಿರಂತರ ಹೋರಾಟ ನಡೆಸುವುದು ಅನಿವಾರ್ಯ ಎಂದರು.

click me!