ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೂತನ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೆಯ ನಿಶ್ಚಿತ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವುದಾಗಿ ಶಾಸಕ, ಮಾಜಿ ಸಚಿವ ಡಾ.ಶಾಮನೂರು ಶಿವಶಂಕರಪ್ಪ ಭರವಸೆ ನೀಡಿದರು.
ದಾವಣಗೆರೆ (ಡಿ.10) : ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೂತನ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೆಯ ನಿಶ್ಚಿತ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವುದಾಗಿ ಶಾಸಕ, ಮಾಜಿ ಸಚಿವ ಡಾ.ಶಾಮನೂರು ಶಿವಶಂಕರಪ್ಪ ಭರವಸೆ ನೀಡಿದರು.
ನಗರದ ತಮ್ಮ ನಿವಾಸ ಶಿವ ಪಾರ್ವತಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದವರು ಓಟ್ ಪಾರ್ ಓಪಿಎಸ್ ಅಭಿಯಾನದಡಿ ನೀಡಿದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆ ಜಾರಿ ಗೊಳಿಸುತ್ತೇವೆ ಎಂದರು.
ಹಿರಿಯ ನಾಗರಿಕರಿಗೆ ಹೊಸ ಸೇವೆ ಪ್ರಾರಂಭಿಸಿದ ಎಸ್ ಬಿಐ; ವಾಟ್ಸ್ ಆ್ಯಪ್ ನಲ್ಲೇ ಸಿಗಲಿದೆ ಪಿಂಚಣಿ ಸ್ಲಿಪ್
ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ, ಹಿಂದೆ ಇದ್ದ ನಿಶ್ಚಿತ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೊಳಿಸಿದರೆ, ನಮ್ಮ ರಾಜ್ಯದ 5 ಲಕ್ಷ ನೌಕರರ ಕುಟುಂಬಕ್ಕೆ ಆಸರೆಯಾಗಲಿದೆ. ನೌಕರರು ನಿವೃತ್ತ ಜೀವನ ಶಾಂತಿ, ನೆಮ್ಮದಿ, ಸಮಾಧಾನದಿಂದ ಕಳೆಯುವಂತಹ ಅವಕಾಶವನ್ನು ಕಾಂಗ್ರೆಸ್ ಕಲ್ಪಿಸಿಕೊಡಲು ಬದ್ಧವಾಗಿರಲಿದೆ ಎಂದು ಪುನರುಚ್ಛರಿಸಿದರು.
ರಾಜ್ಯ ಸರ್ಕಾರಿ ನೌಕರರ ಪೈಕಿ 1-4-2006 ರಿಂದ ನೌಕರಿಗೆ ಸೇರಿದವರಿಗೆ ನೂತನ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿತ್ತು. ಇದೊಂದು ಅವೈಜ್ಞಾನಿಕ ಯೋಜನೆ ಎಂಬುದು ನಮಗೂ ಗೊತ್ತಿದೆ. ಇದರಿಂದ ನೌಕರರು ತಮ್ಮ ನಿವೃತ್ತಿಯ ಜೀವನವನ್ನೇ ಕಳೆದುಕೊಂಡಂತಾಗಿದೆ. ಇಂತಹ ನೌಕರ ವಿರೋಧಿ ಯೋಜನೆಯನ್ನು ರದ್ದುಗೊಳಿಸುವ ಕೆಲಸವನ್ನು ಈಗಿನ ಸರ್ಕಾರವಾದರೂ ಮಾಡಲಿ ಎಂದು ಆಗ್ರಹಿಸಿದರು.
ವಿಧಾನಸಭೆ ಚಳಿಗಾಲದ ಅಧಿವೇಶನ ಶುರುವಾಗುತ್ತಿದ್ದಂತೆಯೇ ಎನ್‌ಪಿಎಸ್ ನೌಕರರ ಬೇಡಿಕೆಯಂತೆ ನೂತನ ಪಿಂಚಣಿ ಯೋಜನೆ ಕೈಬಿಟ್ಟು, ಹಳೆಯ ನಿಶ್ಚಿತ ಪಿಂಚಣಿ ಯೋ ಜನೆ ಮರು ಜಾರಿಗೊಳಿಸುವಂತೆ ಒತ್ತಾಯಿಸುತ್ತೇವೆ. ಅಲ್ಲದೆ, ಸರ್ಕಾರದ ಮೇಲೆ ಒತ್ತಡವನ್ನೂ ಹೇರುತ್ತೇವೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಿಮ್ಮೆಲ್ಲರ ಪರವಾಗಿ ಧ್ವನಿ ಎತ್ತುತ್ತೇವೆ. ಇನ್ನು ಕೆಲವೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ಬರಲಿದೆ. ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಹಳೆ ಪಿಂಚಣಿ ಯೋಜನೆ ಪುನಃ ಜಾರಿಗೊಳಿಸಲು ಬದ್ಧ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜಸ್ಥಾನ, ಛತ್ತೀಸಘಡ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನೇ ಮರು ಜಾರಿಗೊಳಿಸಲಾಗಿದೆ. ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ನಿನ್ನೆಯಷ್ಟೆನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಅಲ್ಲಿ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವ ಕೆಲಸ ಕಾಂಗ್ರೆಸ್ ಮಾಡಲಿದೆ. ಎನ್‌ಪಿಎಸ್ ನೌಕರರ ಬೇಡಿಕೆಯನ್ನು ಈಡೇರಿಸಲು ಈಗಿನ ಸರ್ಕಾರದ ಗಮನ ಸೆಳೆಯುವ ಕೆಲಸವನ್ನು ಸದನದಲ್ಲಿ ಮಾಡುತ್ತೇನೆ. ಒಂದು ವೇಳೆ ಸರ್ಕಾರ ಸ್ಪಂದಿಸದಿದ್ದರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಹಳೆ ಪಿಂಚಣಿ ಯೋಜನೆ ತರುತ್ತೇವೆ ಎಂದು ಡಾ.ಶಾಮನೂರು ಶಿವಶಂಕರಪ್ಪ ಅಭಯ ನೀಡಿದರು.
Government Schemes: ಹಿರಿಯ ನಾಗರಿಕರಿಗೆ ಈ ಯೋಜನೆ ಅಡಿ ಸರ್ಕಾರ ನೀಡುತ್ತೆ ಪಿಂಚಣಿ
ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ.ಶೆಟ್ಟಿ, ಎನ್‌ಪಿಎಸ್ ನೌಕರರ ಸಂಘದ ತಾಲೂಕು ಅಧ್ಯಕ್ಷ ಜಿ.ಎನ್. ಮಂಜಪ್ಪ, ಎಚ್.ಜಿ.ಎಂ. ಬಸವರಾಜ, ಪಿ.ಎಂ. ನಾಗರಾಜ, ಶಿವಕುಮಾರ, ಪುನೀತ್ ಶಂಕರ್, ಗುರುಮೂರ್ತಿ, ಎಚ್.ಎಂ. ತ್ರಿವೇಣಿ, ತಿಪ್ಪಣ್ಣ, ಸಿದ್ಧಲಿಂಗಸ್ವಾಮಿ ಇತರರು ಇದ್ದರು.