ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಹಿಂದುಳಿದÜ ಸಮುದಾಯದ ಅಭಿವೃದ್ಧಿ ದೃಷ್ಟಿಯಿಂದ ಹತ್ತಾರು ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಿದೆ: ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್
ಹೊಸಕೋಟೆ(ಮಾ.13): ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಮುದಾಯ ಸಂಘಟಿಸಿ, ಬಿಜೆಪಿ ಶಾಸಕರ ಗೆಲುವಿಗೆ ಶ್ರಮಿಸಬೇಕು ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ತಾಲೂಕಿನ ತಗ್ಗಲಿ ಹೊಸಹಳ್ಳಿ ಗ್ರಾಮದ ತ.ರಾ.ವೆಂಕಟೇಶ್ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಹಿಂದುಳಿದ ಸಮುದಾಯದ ಅಭಿವೃದ್ಧಿ ದೃಷ್ಟಿಯಿಂದ ಹತ್ತಾರು ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಿದೆ. ಆ ಯೋಜನೆಗಳು ಸಮರ್ಪಕವಾಗಿ ಹಿಂದುಳಿದ ವರ್ಗಕ್ಕೆ ತಲುಪಿಸುವ ಹಾಗೂ ಸರ್ಕಾರದ ಅಭಿವೃದ್ಧಿ ಬಗ್ಗೆ ಸಮುದಾಯಕ್ಕೆ ತಲುಪಿಸುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ನೂತನ ಜಿಲ್ಲಾಧ್ಯಕ್ಷರು ಕಾರ್ಯಪ್ರವೃತ್ತರಾಗಿ ಪಕ್ಷ ಸಂಘಟಿಸುವ ಮೂಲಕ ಜಿಲ್ಲೆಯ ನಾಲ್ಕು ತಾಲೂಕಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗಲು ಶ್ರಮಿಸಬೇಕು ಎಂದರು.
ಬಚ್ಚೇಗೌಡರು ದೌರ್ಜನ್ಯದಿಂದಲೇ ಚುನಾವಣೆಯಲ್ಲಿ ಗೆದ್ದವರು: ಸಚಿವ ಎಂಟಿಬಿ ನಾಗರಾಜ್
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ತ.ರಾ.ವೆಂಕಟೇಶ್ ಮಾತನಾಡಿ, ಸಚಿವ ಎಂಟಿಬಿ ನಾಗರಾಜ್ ಅವರ ಮಾರ್ಗದರ್ಶನದಲ್ಲಿ ಪ್ರಾಮಾಣಿಕವಾಗಿ ಪಕ್ಷ ಸಂಘಟನೆ ಮಾಡುತ್ತೇನೆಂದರು. ತಾಲೂಕು ಬಿಜೆಪಿ ಅಧ್ಯಕ್ಷ ಕೆ.ಸತೀಶ್, ನಗರಸಭೆ ಮಾಜಿ ಅಧ್ಯಕ್ಷ ಹೇಮಂತ್ ಕುಮಾರ್, ಯುವ ಮುಖಂಡ ಅತ್ತಿವಟ್ಟನಾಗೇಶ್, ದೇವನಗೊಂದಿ ನಾರಾಯಣಸ್ವಾಮಿ, ಅನಿಲ್ ಇತರಿದ್ದರು.