ಸಮಾಜದಲ್ಲಿ ಸಾಮರಸ್ಯವನ್ನು ಕಾಪಾಡುವ ದೃಷ್ಟಿಯಿಂದ ಕೋಮುವಾದಿ ಬಿಜೆಪಿಯನ್ನು ಸೋಲಿಸುವ ನಿರ್ಣಯವನ್ನು ಡಿಎಸ್‌ಎಸ್ ಸಂಘಟನೆ ತೆಗೆದುಕೊಂಡಿದೆ ಎಂದು ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ತಿಳಿಸಿದರು.
ಗುಬ್ಬಿ : ಸಮಾಜದಲ್ಲಿ ಸಾಮರಸ್ಯವನ್ನು ಕಾಪಾಡುವ ದೃಷ್ಟಿಯಿಂದ ಕೋಮುವಾದಿ ಬಿಜೆಪಿಯನ್ನು ಸೋಲಿಸುವ ನಿರ್ಣಯವನ್ನು ಡಿಎಸ್‌ಎಸ್ ಸಂಘಟನೆ ತೆಗೆದುಕೊಂಡಿದೆ ಎಂದು ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ತಿಳಿಸಿದರು.
ಬುಧವಾರ ಪಟ್ಟಣದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೋಮು ದಳ್ಳುರಿಯನ್ನು ಸೃಷ್ಟಿಸಿ ಸಮಾಜದ ಸಾಮರಸ್ಯವನ್ನು ಹಾಳು ಮಾಡುತ್ತಿರುವ ಬಿಜೆಪಿ ಪಕ್ಷವನ್ನು ಸೋಲಿಸಲು ಪಣ ತೊಟ್ಟಿದ್ದೇವೆ. ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಹೇಳುತ್ತಾ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಬಿಜೆಪಿಯನ್ನು ದೇಶದಿಂದಲೇ ಓಡಿಸಬೇಕಾದ ಅಗತ್ಯವಿದೆ.
undefined
ಬಿಜೆಪಿಯನ್ನು ಸೋಲಿಸುವ ಶಕ್ತಿ ಇರುವ ಯಾವುದೇ ಪಕ್ಷಕ್ಕಾದರೂ ಡಿಎಸ್‌ಎಸ್ ಬೆಂಬಲ ನೀಡಲು ಸಿದ್ಧವಿದೆ. ತಾಲೂಕುವಾರು ಸಮೀಕ್ಷೆ ನಡೆಸಿ ಅಲ್ಲಿನ ಪರಿಸ್ಥಿತಿಗೆ ತಕ್ಕಂತೆ ಬಿಜೆಪಿಯನ್ನು ಸೋಲಿಸುವ ಪಕ್ಷಕ್ಕೆ ಬೆಂಬಲ ನೀಡುವೆವು. ಗುಬ್ಬಿ ಕ್ಷೇತ್ರದಲ್ಲಿ ಬಿಜೆಪಿಯನ್ನು ಸೋಲಿಸುವ ಶಕ್ತಿ ಇರುವುದು ಕಾಂಗ್ರೆಸ್ ಅಭ್ಯರ್ಥಿಗೆ ಮಾತ್ರ. ಹಾಗಾಗಿ ಗುಬ್ಬಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿ ಮತದಾರರಲ್ಲಿ ಜಾಗೃತಿ ಮೂಡಿಸುವೆವು ಎಂದು ತಿಳಿಸಿದರು.
ಡಿಎಸ್‌ಎಸ್ ಸಂಘಟನೆಯ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವ ಸದಸ್ಯರನ್ನು ಸಂಘಟನೆಯಿಂದ ಹೊರಹಾಕುತ್ತೇವೆ. ಈ ನಿಟ್ಟಿನಲ್ಲಿ ಡಿಎಸ್‌ಎಸ್ ತಾಲೂಕು ಘಟಕದ ಸಂಚಾಲಕರಾದ ನಿಟ್ಟೂರು ಗಂಗಾರಾಮ್ ಅವರನ್ನು ಉಚ್ಛಾಟನೆ ಮಾಡುವ ನಿರ್ಣಯ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಡಾ. ಬಸವರಾಜು, ಡ್ಯಾಗೇರಹಳ್ಳಿ ವಿರೂಪಾಕ್ಷ, ಮಾರುತಿ ಪ್ರಸಾದ್, ಶಿವನಂಜಪ್ಪ, ಕೊಡಿಯಾಲ ಮಹದೇವ, ನರೇಂದ್ರಕುಮಾರ್, ಬಸವರಾಜು, ಫಣೀಂದ್ರ, ಕುಂದೂರು ಮುರಳಿ, ಡಿಎಸ್‌ಎಸ್ ಮುಖಂಡರು ಹಾಜರಿದ್ದರು.
ಹಲವೆಡೆ 500ಕ್ಕೂ ಅಧಿಕ ನಾಮಪತ್ರ ತಿರಸ್ಕೃತ
ಬೆಂಗಳೂರು (ಏ.22): ವಿಧಾನಸಭೆ ಚುನಾವಣೆಗೆ ಕಳೆದ ಒಂದು ವಾರದಿಂದ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ಕಾರ್ಯವು ಶುಕ್ರವಾರ ನಡೆದಿದ್ದು, 4989 ನಾಮಪತ್ರಗಳು ಕ್ರಮಬದ್ಧವಾಗಿವೆ. ಸುಮಾರು 500ಕ್ಕೂ ಹೆಚ್ಚು ನಾಮಪತ್ರಗಳು ತಿರಸ್ಕೃತಗೊಂಡಿವೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡಾಗ 3632 ಅಭ್ಯರ್ಥಿಗಳಿಂದ ಒಟ್ಟು 5102 ಉಮೇದುವಾರಿಕೆ ಸಲ್ಲಿಕೆಯಾಗಿದ್ದವು. ಶುಕ್ರವಾರ ಬೆಳಗ್ಗೆಯಿಂದ ನಾಮಪತ್ರಗಳ ಪರಿಶೀಲನೆ ಕಾರ್ಯವು ತಡರಾತ್ರಿಯವರೆಗೆ ನಡೆಯಿತು. ಐದು ವಿಧಾನಸಭಾ ಕ್ಷೇತ್ರಗಳ ಉಮೇದುವಾರಿಕೆ ಪರಿಶೀಲನೆ ಕಾರ್ಯವು ತಡರಾತ್ರಿಯಾದರೂ ಮುಗಿದಿರಲಿಲ್ಲ.
ಸವದತ್ತಿ-ಯಲ್ಲಮ್ಮ, ಔರಾದ್, ಹಾವೇರಿ, ರಾಯಚೂರು ಮತ್ತು ಶಿವಾಜಿನಗರ ಕ್ಷೇತ್ರದಲ್ಲಿ ನಾಮಪತ್ರಗಳ ಪರಿಶೀಲನೆ ಕಾರ್ಯವು ತಡರಾತ್ರಿಯವರೆಗೆ ನಡೆದಿದೆ. ಪರಿಶೀಲನೆ ಕಾರ್ಯ ತಡರಾತ್ರಿ ಮುಗಿದ ಹಿನ್ನೆಲೆಯಲ್ಲಿ ಶನಿವಾರ ನಾಮಪತ್ರಗಳ ಕ್ರಮಬದ್ಧ ಸಂಖ್ಯೆಯ ಬಗ್ಗೆ ಸ್ಪಷ್ಟಚಿತ್ರಣ ಲಭ್ಯವಾಗಲಿದೆ. ಐದು ಕ್ಷೇತ್ರಗಳನ್ನು ಹೊರತುಪಡಿಸಿದರೆ 4989 ನಾಮಪತ್ರಗಳು ಕ್ರಮಬದ್ಧವಾಗಿವೆ. ಈ ಪೈಕಿ 4607 ನಾಮಪತ್ರಗಳನ್ನು ಪುರುಷರು ಸಲ್ಲಿಸಿದ್ದು, 381 ನಾಮಪತ್ರಗಳು ಮಹಿಳೆಯರು ಸಲ್ಲಿಸಿದ್ದಾಗಿವೆ. ಇತರೆ ಒಂದು ನಾಮಪತ್ರವು ಕ್ರಮಬದ್ಧವಾಗಿದೆ.
ದುಡ್ಡಿಲ್ಲ, ಫುಡ್ಡಿಲ್ಲ... ಕಾಪಾಡಿ: ಸೂಡಾನ್ ಕನ್ನಡಿಗರ ಮೊರೆ
ಬಿಜೆಪಿ 219, ಕಾಂಗ್ರೆಸ್ 218, ಜೆಡಿಎಸ್ 207, ಎಎಪಿ 207, ಬಿಎಸ್‌ಪಿ 135, ಸಿಪಿಐಎಂ 4, ನೋಂದಾಯಿತ ಮಾನ್ಯತೆ ಪಡೆಯದ ಪಕ್ಷಗಳಿಂದ 720, ಪಕ್ಷೇತರರ 1334 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾ ಆಯೋಗವು ತಿಳಿಸಿದೆ. ಸೋಮವಾರ ನಾಮಪತ್ರಗಳನ್ನು ವಾಪಸ್ ತೆಗೆದುಕೊಳ್ಳಲು ಅಂತಿಮ ದಿನವಾಗಿದೆ. ಉಮೇದುವಾರಿಕೆಗಳ ಹಿಂತೆಗೆತ ಕಾರ್ಯ ಪೂರ್ಣಗೊಂಡ ಬಳಿಕ ಚುನಾವಣಾ ಅಖಾಡದಲ್ಲಿ ಎಷ್ಟುಹುರಿಯಾಳುಗಳು ಇದ್ದಾರೆ ಎಂಬುದರ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಲಿದೆ. ಬಹಳಷ್ಟುಮಂದಿ ನಾಮಪತ್ರಗಳನ್ನು ವಾಪಸ್ ತೆಗೆದುಕೊಳ್ಳುವ ಸಾಧ್ಯತೆ ಇದೆ.
ನಾಮಪತ್ರ ಹಿಂತೆಗೆತ ಬಳಿಕ ಚುನಾವಣಾ ಕಣದಲ್ಲಿರುವ ಅಧಿಕೃತ ಅಭ್ಯರ್ಥಿಗಳ ಸಂಖ್ಯೆ ಗೊತ್ತಾಗಲಿದೆ. ಸೋಮವಾರ ರಾತ್ರಿಯ ವೇಳೆಗೆ ಕಣದಲ್ಲಿರುವ ಅಭ್ಯರ್ಥಿಗಳ ಸಂಖ್ಯೆಯ ಬಗ್ಗೆ ಗೊತ್ತಾಗಲಿದೆ. ನಾಮಪತ್ರಗಳ ಹಿಂತೆಗೆತ ಬಳಿಕ ಚುನಾವಣಾ ಕಾವು ಮತ್ತಷ್ಟುರಂಗೇರಲಿದೆ. ಮೇ 8ರವರೆಗೆ ಭರ್ಜರಿ ರೋಡ್‌ಶೋ, ಬೃಹತ್ ಸಮಾವೇಶಗಳು, ಮೆರವಣಿಗೆಗಳು ನಡೆಯಲಿದ್ದು, ಅಭ್ಯರ್ಥಿಗಳ ಪರ ರಾಜಕೀಯ ಪಕ್ಷಗಳ ಮುಖಂಡರು ಮತ ಯಾಚಿಸಲಿದ್ದಾರೆ.