ಇತ್ತೀಚಿನ ರಾಜಕೀಯ ಬೆಳವಣಿಗೆಯಲ್ಲಿ ಕಳೆದ ಒಂದೂವರೆ ವರ್ಷಗಳ ಹಿಂದೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ತಿತಿಮತಿ ಭಾಗದ ಮಾಂಗೇರ ಪದ್ಮಿನಿ ಪೊನ್ನಪ್ಪ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.
ಮಡಿಕೇರಿ(ಜ.18): ಇತ್ತೀಚಿನ ರಾಜಕೀಯ ಬೆಳವಣಿಗೆಯಲ್ಲಿ ಕಳೆದ ಒಂದೂವರೆ ವರ್ಷಗಳ ಹಿಂದೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ತಿತಿಮತಿ ಭಾಗದ ಮಾಂಗೇರ ಪದ್ಮಿನಿ ಪೊನ್ನಪ್ಪ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ರಾಜಿನಾಮೆ ಪತ್ರವನ್ನು ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಸಲ್ಲಿಸುವ ಮೂಲಕ ಅನಿವಾರ್ಯ ಕಾರಣಗಳಿಂದ ಪಕ್ಷದಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಎಂದು ರಾಜಿನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಗೋಣಿಕೊಪ್ಪದಲ್ಲಿ ಕಾಂಗ್ರೆಸ್‌ನಲ್ಲಿ ಸಕ್ರಿಯ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದ ಪದ್ಮಿನಿ ಪೊನ್ನಪ್ಪ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭ ಪ್ರತಿಷ್ಠಿತ ನಿಗಮಗಳಲ್ಲೊಂದಾದ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿದ್ದರು. ಈ ಅವಧಿಯಲ್ಲಿ ಜಿಲ್ಲೆಯ ಉದ್ದಾಗಲಕ್ಕೂ ಸಂಚರಿಸಿ ಗಮನ ಸೆಳೆಯುವ ಮೂಲಕ ವಿದ್ಯುತ್ ಸೌಕರ್ಯದಿಂದ ವಂಚಿತಗೊಂಡಿದ್ದ ಸಾವಿರಾರು ಬಡ ಕುಟುಂಬಗಳಿಗೆ ಸೋಲಾರ್ ದೀಪಗಳು ಹಾಗೂ ಗ್ಯಾಸ್ ಸಿಲಿಂಡರ್, ಸ್ಟೌನೀಡುವ ಮೂಲಕ ಗಮನ ಸೆಳೆದಿದ್ದರು.
undefined
'ಜೈಶ್ರೀರಾಮ್ ಎಂದರೆ ಮಕ್ಕಳು ಹೆದರ್ತಾರೆ'..!
ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ವಿರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದರು. ರಾಜಕೀಯ ಬೆಳವಣಿಗೆಯಲ್ಲಿ ಇವರಿಗೆ ಕೊನೇ ಗಳಿಗೆಯಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್ ಲಭ್ಯವಾಗಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಪದ್ಮಿನಿ ಪೊನ್ನಪ್ಪ, ಕಾಂಗ್ರೆಸ್‌ಗೆ ರಾಜಿನಾಮೆ ನೀಡಿ ಜೆಡಿಎಸ್‌ಗೆ ಸೇರ್ಪಡೆಗೊಂಡಿದ್ದರು. ಇದೀಗ ಜೆಡಿಎಸ್‌ಗೂ ರಾಜಿನಾಮೆ ಸಲ್ಲಿಸಿದ್ದಾರೆ.
'20 ವರ್ಷ ಬೇಕಾದ್ರೆ ಆಳ್ವಿಕೆ ಮಾಡಿ, ಜನರಿಗೆ ವಿಷ ಹಾಕ್ಬೇಡಿ'