ಮೈಸೂರು ಭಾಗದಲ್ಲಿ ಜಿಟಿಡಿ ನೇತೃತ್ವದಲ್ಲಿಯೇ ಪಂಚರತ್ನ ಯಾತ್ರೆ

By Kannadaprabha News  |  First Published Oct 20, 2022, 4:59 AM IST

ಮೈಸೂರು ಭಾಗದಲ್ಲಿ ಜನವರಿ ತಿಂಗಳಲ್ಲಿ ಪಂಚರತ್ನ ಯಾತ್ರೆಯು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಘೋಷಿಸಿದರು.


 ಮೈಸೂರು (ಅ.20):  ಮೈಸೂರು ಭಾಗದಲ್ಲಿ ಜನವರಿ ತಿಂಗಳಲ್ಲಿ ಪಂಚರತ್ನ ಯಾತ್ರೆಯು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಘೋಷಿಸಿದರು.

ನಗರದ ಹೊರ ವಲಯದ ನಲ್ಲಿ ಬುಧವಾರ ಆರಂಭವಾದ ಪಕ್ಷದ ಸಂಘಟನಾ ಕಾರ್ಯಾಗಾರಕ್ಕೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಟಿ. ದೇವೇಗೌಡರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆರಾದ ಸಾ.ರಾ. ಮಹೇಶ್‌ (Sara Mahesh) , ಸಿ.ಎಸ್‌. ಪುಟ್ಟರಾಜು (CS pittaraju) ಅವರೂ ಸಂಪರ್ಕದಲ್ಲಿದ್ದಾರೆ. ಯಾವುದೇ ಸಮಸ್ಯೆ ಇಲ್ಲ. ಎಲ್ಲವೂ ಬಗೆಹರಿದಿದೆ. ನನ್ನ ಅನುಮತಿ ಪಡೆದೇ ಇವತ್ತಿನ ಸಭೆಗೆ ಗೈರಾಗಿದ್ದಾರೆ ಎಂದರು.

Tap to resize

Latest Videos

ಮೊದಲ ಹಂತದಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ 35 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪಂಚರತ್ನ ಯಾತ್ರೆ ನಡೆಯಲಿದೆ. ನಂತರ ಜನವರಿಯಲ್ಲಿ ಮೈಸೂರು ಭಾಗದಲ್ಲಿ ಎರಡನೇ ಹಂತದ ಪಂಚರತ್ನ ಯಾತ್ರೆ ಆರಂಭವಾಗಲಿದೆ. ಮೈಸೂರು ಭಾಗದ ನೇತೃತ್ವವನ್ನು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರೂ ಆದ ಮಾಜಿ ಸಚಿವ ಜಿ.ಟಿಯ ದೇವೇಗೌಡರೇ ವಹಿಸಿಕೊಳ್ಳಲಿದ್ದಾರೆ ಎಂದು ಅವರು ಹೇಳಿದರು.

ಮೈಸೂರು ಜಿಲ್ಲೆಯ 11 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯೂ ಅಂತಿಮವಾಗಿದೆ. ಈ ಪೈಕಿ ಎಂಟರಲ್ಲಿ ಗೆಲ್ಲುವುದು ನಮ್ಮ ಗುರಿಯಾಗಿದೆ ಎಂದು ಅವರು ತಿಳಿಸಿದರು.

ಹಿನ್ನೆಲೆ ಏನು?

ಸಮ್ಮಿಶ್ರ ಸರ್ಕಾರ ಪತನಾನಂತರ ಜಿ.ಟಿ. ದೇವೇಗೌಡರು ಜೆಡಿಎಸ್‌ನಿಂದ ದೂರ ಇದ್ದರು. 2018ರ ಚುನಾವಣೆಯಲ್ಲಿ ತಮ್ಮ ವಿರುದ್ಧ 36 ಸಾವಿರ ಮತಗಳ ಅಂತರದಿಂದ ಸೋತ ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಸಂಪರ್ಕ ಸಾಧಿಸಿ, ಅವರೊಂದಿಗೆ ವೇದಿಕೆ ಹಂಚಿಕೊಂಡರು. ಇದರಿಂದ ಜಿಟಿಡಿ ಕಾಂಗ್ರೆಸ್‌ ಸೇರುತ್ತಾರೆ ಎಂದು ಹೇಳಲಾಗಿತ್ತು. ಆದರೆ ಅವರು ತಮಗೆ ಚಾಮುಂಡೇಶ್ವರಿ, ತಮ್ಮ ಪುತ್ರ ಜಿ.ಡಿ. ಹರೀಶ್‌ಗೌಡ ಅವರಿಗೆ ಹುಣಸೂರಿನಲ್ಲಿ ಟಿಕೆಟ್‌ ಕೇಳಿದ್ದರು. ಇದಕ್ಕೆ ಒಪ್ಪದ ಕಾಂಗ್ರೆಸ್‌ನವರು ಹರೀಶ್‌ಗೌಡರಿಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ನೀಡುತ್ತೇವೆ ಎಂದಿದ್ದರು. ಆದರೆ ವಿಧಾನಸಭೆಯ ಚುನಾವಣೆಯ ಟಿಕೆಟ್‌ ಬೇಕು ಎಂದಾಗ ಹುಣಸೂರು, ಚಾಮರಾಜ, ಕೆ.ಆರ್‌. ನಗರ ಕ್ಷೇತ್ರಗಳ ಪ್ರಸ್ತಾಪವಾಗಿತ್ತು. ಈ ಬಗ್ಗೆ ಹೈಕಮಾಂಡ್‌ ಜೊತೆ ಮಾತನಾಡುವುದಾಗಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದರು.

ಏತನ್ಮಧ್ಯೆ ಜಿಟಿಡಿ ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿಯವರು ಹರಸಾಹಸ ಮಾಡಿದ್ದರು. ಅಪ್ಪ- ಮಗ ಇಬ್ಬರಿಗೂ ಚಾಮುಂಡೇಶ್ವರಿ- ಚಾಮರಾಜ ಕ್ಷೇತ್ರದ ಟಿಕೆಟ್‌ ನೀಡುವುದಾಗಿ ಭರವಸೆ ನೀಡಿದ್ದರು. ಈ ನ‚ಡುವೆ ಜಿಟಿಡಿ ಅವರ ಮೊಮ್ಮಗಳು ಗೌರಿ ನಿಧನರಾದಾಗ ಜೆಡಿಎಸ್‌ ನಾಯಕರು ಸಂಪರ್ಕ ಸಾಧಿಸಿದರು. ಎಚ್‌.ಡಿ. ಕುಮಾರಸ್ವಾಮಿ- ಜಿಟಿಡಿ ಮುಖಾಮುಖಿಯಾದರು.

ನಂತರ ಹುಣಸೂರಿನಲ್ಲಿ ನಡೆದ ಕೆಂಪೇ ಗೌಡ ಜಯಂತಿಯಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಪಕಸ್ಪರ ಹೊಗಳಿಕೊಂಡಿದ್ದರು. ಆಗಲೇ ಜಿಟಿಡಿಯವರು ಜೆಡಿಎಸ್‌ಗೆ ಮರಳುವ ಮುನ್ಸೂಚನೆ ಸಿಕ್ಕಿತ್ತು. ಹೀಗಿದ್ದರೂ ರಾಹುಲ್‌ಗಾಂಧಿ ಅವರ ಭಾರತ ಜೋಡೋ ಯಾತ್ರೆ ಆರಂಭವಾದ ನಂತರ ಜಿಟಿಡಿ ಮತ್ತೆ ಕಾಂಗ್ರೆಸ್‌ ಟಿಕೆಟ್‌ಗೆ ಯತ್ನಿಸುತ್ತಿದ್ದಾರೆ ಎಂಬ ವದಂತಿ ಹಬ್ಬಿದ್ದವು.

ಇದೀಗ ಗೊಂದಲಕ್ಕೆ ತೆರೆ ಬೀಳುವ ಕಾಲ ಸನ್ನಿಹಿತವಾಗಿದ್ದು, ಚಾಮುಂಡೇಶ್ವರಿಯಿಂದ ಜಿ.ಟಿ. ದೇವೇಗೌಡ, ಹುಣಸೂರಿನಿಂದ ಅವರ ಪುತ್ರ ಜಿ.ಡಿ. ಹರೀಶ್‌ಗೌಡ ಪಕ್ಷದ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯಗೆ ಒಂದು ಕ್ಷೇತ್ರವಿಲ್ಲ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಒಂದು ಕ್ಷೇತ್ರವಿಲ್ಲ. ಅಂಥವರು ನಮ್ಮ ಪಕ್ಷಕ್ಕೆ ಅಭ್ಯರ್ಥಿಗಳು ಎಲ್ಲಿದ್ದಾರೆ? ಎಂದು ಗೇಲಿ ಮಾಡುತ್ತಾರೆ.

- ಎಚ್‌.ಡಿ. ಕುಮಾರಸ್ವಾಮಿ, ಜೆಡಿಎಸ್‌ ನಾಯಕರು

click me!