ಹುಣಸೂರು: ಪುತ್ರನ ಸಾವಿನಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

Published : Oct 20, 2023, 11:00 PM IST
ಹುಣಸೂರು: ಪುತ್ರನ ಸಾವಿನಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

ಸಾರಾಂಶ

ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ವೈದ್ಯರು ಹುಡುಗನ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ತಿಳಿಸಿದಾಗ ದುಃಖದ ನಡುವೆಯೂ ಪುತ್ರನ ಅಂಗಾಂಗಳನ್ನು 6 ಮಂದಿಗೆ ದಾನ ಮಾಡಿದ ಪೋಷಕರು 

ಹುಣಸೂರು(ಅ.20):  ಅಪಘಾತದಲ್ಲಿ ಪುತ್ರನ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ತಿಳಿದ ದಂಪತಿ ಪುತ್ರನ ದೇಹದ ಅಂಗಾಂಗಳನ್ನು ದಾನ ಮಾಡುವ ಮೂಲಕ 6 ಮಂದಿಗೆ ಜೀವದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ತಾಲೂಕಿನ ಶ್ಯಾನುಭೋಗನಹಳ್ಳಿಯ ಸೋಮಶೇಖರ್, ಶ್ರೀಮತಿ ದಂಪತಿಯ ಪುತ್ರ ಎಸ್. ಆದಿತ್ಯ ಬಿಳಿಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿದ್ದ. ವಾರದ ಹಿಂದೆ ರಾಯನಹಳ್ಳಿ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ. 

ಮಂಗಳೂರು: ಪುತ್ರ ಶೋಕದಲ್ಲೂ ಮಗನ ಅಂಗಾಂಗ ದಾನ, ದಂಪತಿ ಕಾರ್ಯಕ್ಕೆ ಸಚಿವ ಗುಂಡೂರಾವ್ ಶ್ಲಾಘನೆ

ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ವೈದ್ಯರು ಹುಡುಗನ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ತಿಳಿಸಿದಾಗ ದುಃಖದ ನಡುವೆಯೂ ಪುತ್ರನ ಅಂಗಾಂಗಳನ್ನು 6 ಮಂದಿಗೆ ದಾನ ಮಾಡಿದ್ದಾರೆ. ಹಣಕ್ಕಾಗಿ ಕಿಡ್ನಿಗಳನ್ನು ಮಾರಾಟ ಮಾಡುತ್ತಿರುವ ಈ ಕಾಲದಲ್ಲಿ ಪುತ್ರನ ಸಾವಿನಲ್ಲೂ ಮಾನವೀಯತೆ ಮೆರೆದ ದಂಪತಿಯನ್ನು ಸತ್ಯ ಎಂಎಎಸ್ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ ಕೊಂಡಾಡಿದ್ದಾರೆ.

PREV
Read more Articles on
click me!

Recommended Stories

ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!