ಪುತ್ರಿಯು ಪ್ರೇಮ ವಿವಾಹವಾದ ಹಿನ್ನೆಲೆ ಮನನೊಂದ ತಂದೆ, ತಾಯಿ ಕಾಣೆಯಾಗಿರುವ ಘಟನೆ ತಾಲೂಕಿನ ಕೂಗಲೂರು ಗ್ರಾಮದಲ್ಲಿ ನಡೆದಿದೆ.
ನಂಜನಗೂಡು : ಪುತ್ರಿಯು ಪ್ರೇಮ ವಿವಾಹವಾದ ಹಿನ್ನೆಲೆ ಮನನೊಂದ ತಂದೆ, ತಾಯಿ ಕಾಣೆಯಾಗಿರುವ ಘಟನೆ ತಾಲೂಕಿನ ಕೂಗಲೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಚಿನ್ನಪ್ಪಾಜಿ (45) ಮತ್ತು ಭವಾನಿ (40) ಕಾಣೆಯಾದ ದಂಪತಿ.
ಇವರ ಪುತ್ರಿ ನಿಸರ್ಗ ಅದೇ ಗ್ರಾಮದ ಮಹದೇವಸ್ವಾಮಿ ಎಂಬವರೊಂದಿಗೆ ಪ್ರೇಮ ವಿವಾಹವಾಗಿದ್ದ ಕಾರಣ ಮನನೊಂದಿದ್ದ ತಾಯಿ ಭವಾನಿ ಅ. 31 ರಂದು ಕಾಣೆಯಾಗಿದ್ದು, ಪತ್ನಿಯ ಹುಡುಕಾಟದಲ್ಲಿದ್ದ ಚಿನ್ನಪ್ಪಾಜಿ ಕೂಡ ನ. 4ರಂದು ಕಾಣೆಯಾಗಿದ್ದಾರೆ. ಈ ಬಗ್ಗೆ ದಂಪತಿಯ ಪುತ್ರ ಕಾರ್ತಿಕ್ ತಂದೆ ಮತ್ತು ತಾಯಿಯನ್ನು ಹುಡುಕಿಕೊಡುವಂತೆ ನಂಜನಗೂಡು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾನೆ.
ಭವಾನಿಯ ಚಹರೆ ಕೋಲು ಮುಖ, ಎಣ್ಣೆಗೆಂಪು ಬಣ್ಣವಾಗಿದ್ದು. ಚಿನ್ನಪ್ಪಾಜಿ ಅವರ ಚಹರೆ ದುಂಡು ಮುಖ ಸಾಧಾರಣ ಮೈಕಟ್ಟು ಆಗಿದೆ. ಇವರ ಸುಳಿವು ದೊರೆತಲ್ಲಿ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಇನ್‌ಸ್ಪೆಕ್ಟರ್‌ಕಿರಣ್‌ಕುಮಾರ್ ಕೋರಿದ್ದಾರೆ.
ಪ್ರೀತಿಗೆ ವಿರೋಧ
ಬೆಂಗಳೂರು(ನ.07): ತಮ್ಮ ಪ್ರೇಮಕ್ಕೆ ಕುಟುಂಬದವರಿಂದ ವಿರೋಧದ ಹಿನ್ನೆಲೆಯಲ್ಲಿ ಬೇಸರಗೊಂಡು ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ (ವಿವಾಹಿತೆ) ಹಾಗೂ ಆಕೆಯ ಗೆಳೆಯ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕರಿಯಮ್ಮ ಅಗ್ರಹಾರ ನಿವಾಸಿ ಸೌಮಿನಿ ದಾಸ್ (21) ಹಾಗೂ ಅಭಿಲ್ ಅಬ್ರಾಹಂ (25) ಮೃತ ದುರ್ದೈವಿಗಳು. ದೊಡ್ಡ ಗುಬ್ಬಿ ಸಮೀಪದ ಡಿ ಮ್ಯಾಕ್ಸ್ ಸರ್ವೀಸ್ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲಿ ಭಾನುವಾರ ಇಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಫ್ಲ್ಯಾಟ್‌ನಲ್ಲಿ ಬೆಂಕಿ ಕಂಡು ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಅಪಾರ್ಟ್‌ಮೆಂಟ್ ನಿವಾಸಿಗಳು ಮಾಹಿತಿ ನೀಡಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು, ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಬೆಂಕಿಯಲ್ಲಿ ಬೆಂದು ದಾಸ್ ಕೊನೆಯುಸಿರೆಳೆದಿದ್ದಾಳೆ. ಭಾಗಶಃ ಸುಟ್ಟು ಹೋಗಿದ್ದ ಅಬ್ರಾಹಂನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಪೊಲೀಸರು ದಾಖಲಿಸಿದರು. ಆದರೆ ಚಿಕಿತ್ಸೆ ಫಲಿಸದೆ ಆತ ರಾತ್ರಿ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ; ಇತ್ತ ಮೊಬೈಲ್ ಬಿಟ್ಟು ಚೆನ್ನಾಗಿ ಓದು ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ!
ಪ್ರೇಮ ತಂದ ಸಾವು:
ಮೃತ ಸೌಮಿನಿ ದಾಸ್ ಪಶ್ಚಿಮ ಬಂಗಾಳ ರಾಜ್ಯದವಳಾಗಿದ್ದು, ಕರಿಯಮ್ಮ ಅಗ್ರಹಾರ ಸಮೀಪದ ಖಾಸಗಿ ಕಾಲೇಜಿನಲ್ಲಿ 2ನೇ ವರ್ಷದ ನರ್ಸಿಂಗ್ ಓದುತ್ತಿದ್ದಳು. ಎರಡು ವರ್ಷಗಳ ಹಿಂದೆಯೇ ಆಕೆಗೆ ವಿವಾಹವಾಗಿತ್ತು. ಇನ್ನು ನರ್ಸ್ ಸರ್ವೀಸ್ ಏಜೆನ್ಸಿ ನಡೆಸುತ್ತಿದ್ದ ಕೇರಳ ಮೂಲದ ಅಬ್ರಾಹಂಗೆ ಕೆಲ ತಿಂಗಳ ಹಿಂದೆ ಸೌಮಿನಿ ದಾಸ್‌ಗೆ ಪರಿಚಯವಾಗಿದೆ. ಕಾಲೇಜಿಗೆ ರಜೆ ಅಥವಾ ಬಿಡುವಿನ ವೇಳೆಯಲ್ಲಿ ಅಬ್ರಾಹಂ ಏಜೆನ್ಸಿಯಲ್ಲಿ ಸೌಮಿನಿ ದಾಸ್ ಕೆಲಸ ಮಾಡುತ್ತಿದ್ದಳು. ಮೂರು ತಿಂಗಳ ಹಿಂದೆ ತಮ್ಮ ಪತಿಗೆ ಅಬ್ರಾಹಂನನ್ನು ತಾವು ಒಂದೇ ಏಜೆನ್ಸಿಯಲ್ಲಿ ಕೆಲಸ ಮಾಡುತ್ತೇವೆ ಎಂದು ಆಕೆ ಪರಿಚಯಿಸಿದ್ದಳು.
ದಾಬಸ್‌ಪೇಟೆ: ವನಕಲ್ಲು ಮಲ್ಲೇಶ್ವರ ಮಠದ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿ ಆತ್ಮಹತ್ಯೆ
ಕಾಲ ಕ್ರಮೇಣ ಇಬ್ಬರು ಆತ್ಮೀಯ ಒಡನಾಡಿಗಳಾಗಿದ್ದು, ಪ್ರೇಮಾಂಕುರವಾಗಿದೆ. ಹೀಗಿರುವಾಗ ಇತ್ತೀಚಿಗೆ ತನ್ನೂರು ಕೊಲ್ಕತ್ತಾಗೆ ಹೋಗಿದ್ದ ಸೌಮಿನಿ ದಾಸ್, ಅಲ್ಲಿಂದ ಶನಿವಾರ ನಗರಕ್ಕೆ ಮರಳಿದ್ದಾಳೆ. ನಂತರ ದೊಡ್ಡಗುಬ್ಬಿ ಸಮೀಪದ ಡಿ ಮ್ಯಾಕ್ಸ್ ಸರ್ವೀಸ್ ಅಪಾರ್ಟ್‌ಮೆಂಟ್‌ನಲ್ಲಿ 14 ದಿ