ರಾಜ್ಯದಲ್ಲಿ ಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಇದೀಗ ಎಲ್ಲೆಡೆ ಸೋಂಕು ಹೆಚ್ಚಳವಾಗುತ್ತಿದೆ. ಇಂತಹ ಆತಂಕದ ಸಂದರ್ಭದಲ್ಲಿ ಶಾಲೆಗಳನ್ನು ಆರಂಭಿಸಿ ಇನ್ನಷ್ಟು ಆನಾಹುತ ಸೃಷ್ಟಿಸುವುದು ಬೇಡ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಶಿವಮೊಗ್ಗ(ಜೂ.20): ಕೊರೋನಾ ನಿಯಂತ್ರಣಕ್ಕೆ ಬಾರದ ಹೊರತು ಶಾಲೆಗಳನ್ನು ತುರ್ತಾಗಿ ಆರಂಭಿಸಬಾರದೆಂದು ಒತ್ತಾಯಿಸಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯಿಂದ ಜಿಲ್ಲಾಡಳಿತ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಇದೀಗ ಎಲ್ಲೆಡೆ ಸೋಂಕು ಹೆಚ್ಚಳವಾಗುತ್ತಿದೆ. ಇಂತಹ ಆತಂಕದ ಸಂದರ್ಭದಲ್ಲಿ ಶಾಲೆಗಳನ್ನು ಆರಂಭಿಸಿ ಇನ್ನಷ್ಟುಆನಾಹುತ ಸೃಷ್ಟಿಸುವುದು ಬೇಡ. ಅಲ್ಲದೆ, ಮಕ್ಕಳ ಪ್ರಾಣ ಪಣಕ್ಕಿಟ್ಟು ಶಿಕ್ಷಣ ನೀಡಲು ಮುಂದಾಗುವುದು ಸರಿಯಲ್ಲ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದರು.ಮಕ್ಕಳಿಗೆ ಶಿಕ್ಷಣ ದೊರಕಬೇಕು ನಿಜ. ಹಾಗೆಂದು ಆತಂಕದ ಸಂದರ್ಭದಲ್ಲಿ ಶಾಲೆಯನ್ನು ಆರಂಭ ಮಾಡುವುದು ಬೇಡ. ಹಾಗಾಗಿ ಕನಿಷ್ಟ ಇನ್ನು 6 ತಿಂಗಳು ಶಾಲೆಗಳನ್ನು ತೆರೆಯದಿರುವುದೆ ಒಳಿತು ಎಂದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತಿಬ್ಬರಿಗೆ ಕೊರೋನಾ
ಈ ಸಂಬಂಧ ಸಾಂಸ್ಕೃತಿಕ ವೇದಿಕೆ ವಿಚಾರ ಸಂಕಿರಣ ಏರ್ಪಡಿಸಿದ್ದು, ವಿಚಾರ ಸಂಕಿರಣದಲ್ಲಿ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಶಿಕ್ಷಣ ತಜ್ಞರು ಸೇರಿದಂತೆ ಹಲವರು ಭಾಗವಹಿಸಿ ತಮ್ಮ ಆತಂಕ ಮತ್ತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ಶಾಲೆಗಳು ತೆರೆಯುವುದು ಬೇಡ ಎಂದೇ ತಿಳಿಸಿದ್ದಾರೆ. ಆದರೆ ಇದಕ್ಕೆ ಪೂರಕವಾದ ಶಿಕ್ಷಣ ಚಟುವಟಿಕೆ ಮುಂದುವರೆಸಬಹುದು ಎಂಬ ಅಭಿಪ್ರಾಯ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚರಿಕೆ ಮಾರ್ಗ ಅನುಸರಿಸಬೇಕು ಒತ್ತಾಯಿಸಿದರು. ವೇದಿಕೆ ಅಧ್ಯಕ್ಷ ಡಿ. ಮಂಜುನಾಥ್, ಕಾರ್ಯದರ್ಶಿ ಡಿ. ಗಣೇಶ್, ಪ್ರಧಾನ ಕಾರ್ಯದರ್ಶಿ ಎಸ್. ಶಿವಮೂರ್ತಿ ಇತರರು ಇದ್ದರು.