ಮಳೆ ಬರುವ ಟೈಮ್‌ನಲ್ಲಿ ಅಂಡರ್​ಪಾಸ್​ನಲ್ಲಿ ವಾಹನ ನಿಲ್ಲಿಸಿದರೆ ದಂಡ: ರವಿಕಾಂತೇಗೌಡ

By Govindaraj S  |  First Published Sep 1, 2022, 1:54 AM IST

ಮಳೆ ಟೈಮ್‌ನಲ್ಲಿ ಅಂಡರ್​ಪಾಸ್​ನಲ್ಲಿ ವಾಹನ ನಿಲ್ಲಿಸಿದರೆ ದಂಡ ವಿಧಿಸಲಾಗುವುದು. ಆ ರೀತಿ ನಿಂತರೇ ಪ್ರಕರಣ ದಾಖಲು ಮಾಡಿ ಸಾರ್ವಜನಿಕರ ಮೇಲೆ ಬಿಗಿ ಕ್ರಮ ತೆಗದುಕೊಳ್ಳಲಾಗುತ್ತೆ ಎಂದು ಬೆಂಗಳೂರು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಎಚ್ಚರಿಕೆ ನೀಡಿದ್ದಾರೆ. 


ಬೆಂಗಳೂರು (ಸೆ.01): ಮಳೆ ಟೈಮ್‌ನಲ್ಲಿ ಅಂಡರ್​ಪಾಸ್​ನಲ್ಲಿ ವಾಹನ ನಿಲ್ಲಿಸಿದರೆ ದಂಡ ವಿಧಿಸಲಾಗುವುದು. ಆ ರೀತಿ ನಿಂತರೇ ಪ್ರಕರಣ ದಾಖಲು ಮಾಡಿ ಸಾರ್ವಜನಿಕರ ಮೇಲೆ ಬಿಗಿ ಕ್ರಮ ತೆಗದುಕೊಳ್ಳಲಾಗುತ್ತೆ ಎಂದು ಬೆಂಗಳೂರು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಎಚ್ಚರಿಕೆ ನೀಡಿದ್ದಾರೆ. ದಯವಿಟ್ಟು ಸಾರ್ವಜನಿಕರು ಅಂಡರ್ ಪಾಸ್‌ಗಳಲ್ಲಿ ವಾಹನ ನಿಲ್ಲಿಸಬಾರದು.  

ಅಂಡರ್ ಪಾಸ್‌ನಲ್ಲಿ ವಾಹನ ನಿಲ್ಲಿಸುವುದರಿಂದ ಹಿಂಬದಿಯಿಂದ ಬರುವ ವಾಹನ ಅಪಘಾತ ಸಂಭವಿಸುತ್ತಿದೆ. ಒಟ್ಟು 3 ಕಡೆ ಈ ರೀತಿಯ ಪ್ರಕರಣ ದಾಖಲಾಗಿದೆ. ನಾಯಂಡಹಳ್ಳಿ, ವಿಂಡ್ಸನ್ ಮ್ಯಾನರ್​ ಮಳೆ ಬಂತೆಂದು ಅಂಡರ್​ಪಾಸ್​ನಲ್ಲಿ ವಾಹನ ನಿಲ್ಲಿಸಿಸಲಾಗುತ್ತಿದ್ದು, ಇದರಿಂದ ಟ್ರಾಫಿಕ್ ​ಜಾಮ್​ ಉಂಟಾಗುತ್ತಿತ್ತು. ಇಂತಹ ಸಂದರ್ಭದಲ್ಲಿ ಹೆವಿ ವೆಹಿಕಲ್ಸ್​ ಪಾಸ್​ ಆದಾಗ ಅಪಘಾತವಾಗುತ್ತದೆ. ಹೀಗಾಗಿ ಇನ್ಮುಂದೆ ಅಂಡರ್​ಪಾಸ್​ನಲ್ಲಿ ವಾಹನ ನಿಲ್ಲಿಸದಂತೆ ಸೂಚನೆ ನೀಡಲಾಗಿದೆ. ಕೆಳಸೇತುವೆಯಲ್ಲಿ ಗಾಡಿ ನಿಲ್ಲಿಸಿ ಟ್ರಾಫಿಕ್​ಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಅವರು ಹೇಳಿದ್ದಾರೆ.

Tap to resize

Latest Videos

ಮಾದರಿಯಾಯ್ತು ಬಾಗಲಕೋಟೆಯ ಹಿಂದೂ-ಮುಸ್ಲಿಂ ಭಾವೈಕ್ಯತೆ ಗಣೇಶ

ಪೊಲೀಸರಿಗೆ ಹೆಚ್ಚಿನ ತಂತ್ರಜ್ಞಾನ ಬಳಕೆ ಅರಿವು ನೀಡಬೇಕು: ಅಪರಾಧಿಗಳು ನೂತನ ತಂತ್ರಜ್ಞಾನಗಳನ್ನು ಬಳಸಿಕೊಂಡು ಅಪರಾಧ ಚಟುವಟಿಕೆ ನಡೆಸುತ್ತಿದ್ದಾರೆ. ಆದ್ದರಿಂದ ನಮ್ಮ ಭದ್ರತಾ ಸಿಬ್ಬಂದಿಯನ್ನು ಅಪರಾಧಿಗಳಿಗಿಂತಲೂ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳುವ ಮಟ್ಟಿಗೆ ಸಿದ್ಧಗೊಳಿಸುವ ಅಗತ್ಯತೆ ಹೆಚ್ಚಾಗಿದೆ ಎಂದು ಸಂಚಾರ ವಿಭಾಗದ ಆಯುಕ್ತ ಡಾ ರವಿಕಾಂತೇಗೌಡ ಅವರು ಹೇಳಿದ್ದಾರೆ.

‘ಕೀ ಮೀಡಿಯಾ’ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಪೊಲೀಸ್‌ ಮತ್ತು ಭದ್ರತಾ ಎಕ್ಸ್‌ಪೋ ಲೋಗೋ’ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬದಲಾಗುತ್ತಿರುವ ತಂತ್ರಜ್ಞಾನದ ಕುರಿತು ಎಲ್ಲ ಕಡೆ ಸಂಶೋಧನೆಗಳು ನಡೆಯುತ್ತಿವೆ. ಅಪರಾಧಿಗಳು ನೂತನ ತಂತ್ರಜ್ಞಾನಗಳನ್ನು ಬಳಸಿಕೊಂಡು ಅಪರಾಧ ಚಟುವಟಿಕೆ ಮಾಡುತ್ತಿದ್ದಾರೆ. ಹಾಗಾಗಿ ಲಭ್ಯವಿರುವ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ನಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕಾಗಿದೆ. ಹಾಗೆಯೇ ಜನರಲ್ಲಿ ಜಾಗೃತಿ ಮೂಡುವುದು ಕೂಡ ಬಹಳ ಮುಖ್ಯ ಎಂದು ಅವರು ಹೇಳಿದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರಕ್ಕೆ ಮನಸ್ಸಿಲ್ಲ: ಮುಖ್ಯಮಂತ್ರಿ ಚಂದ್ರು

ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಮ್‌ ರಾಯಪುರ್‌ ಮಾತನಾಡಿ, ಪೊಲೀಸ್‌ ಎಕ್ಸ್‌ಪೋ ಬೆಂಗಳೂರಿನಲ್ಲಿ ನಡೆಯುತ್ತಿರುವುದು ಖುಷಿಯ ವಿಚಾರ. ಇದಕ್ಕೆ ರಾಜ್ಯ ಸರ್ಕಾರದ ಜೊತೆ ದಕ್ಷಿಣ ಭಾರತದ ಇತರ ರಾಜ್ಯಗಳ ಸಹಕಾರವೂ ದೊರೆಯುತ್ತದೆ ಎಂಬ ಭರವಸೆ ಇದೆ. ಇಂತಹ ಎಕ್ಸ್‌ಪೋಗಳು ಹಲವಾರು ಕ್ಷೇತ್ರಗಳಲ್ಲಿ ನಡೆಯಬೇಕು. ಇದರಿಂದ ಕರ್ನಾಟಕದ ಆರ್ಥಿಕತೆ ಮತ್ತು ಪ್ರವಾಸೋದ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತದೆ ಎಂದು ಹೇಳಿದರು. ಅಂತಾರಾಷ್ಟ್ರೀಯ ಪೊಲೀಸ್‌ ಮತ್ತು ಭದ್ರತಾ ಎಕ್ಸ್‌ಪೋ ಬರುವ ಅಕ್ಟೋಬರ್‌ 14ರಿಂದ 16ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.

click me!