ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ಬಸ್ ಇಲ್ಲದೆ ಪರದಾಟ, ಸಿಟ್ಟಿಗೆದ್ದು ಪ್ರಯಾಣಿಕರ ಪ್ರತಿಭಟನೆ

By Girish GoudarFirst Published Dec 10, 2023, 8:06 PM IST
Highlights

ಪ್ರಯಾಣಿಕರ ಆಕ್ರೋಶ ಕಂಡು ಬಸ್ ಡಿಪೋ ಅಧಿಕಾರಿಗಳು ಬೇಲೂರು ಡಿಪೋನಿಂದ ಬಸ್ ಗಳನ್ನ ಕಳುಹಿಸಿದ್ದಾರೆ. ಇದೇ ಡಿಸೆಂಬರ್ 12ರಂದು ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಪೂಜೆ ಇರುವುದರಿಂದ ಸಾವಿರಾರು ಭಕ್ತರು ಧರ್ಮಸ್ಥಳಕ್ಕೆ ತೆರಳುತ್ತಿದ್ದಾರೆ. ಹಾಗಾಗಿ, ಇಂದಿನಿಂದ ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಆರು ಡಿಪೋಗಳಿಂದಲೂ ಕೂಡ ಧರ್ಮಸ್ಥಳಕ್ಕೆ ಬಸ್‌ಗಳನ್ನು ಬಿಡಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ. 
 

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು(ಡಿ.10):  ಧರ್ಮಸ್ಥಳಕ್ಕೆ ಬಸ್ಸಿಲ್ಲ ಎಂದು ಪ್ರಯಾಣಿಕರು ಮಧ್ಯರಾತ್ರಿ ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲಾ ಕೇಂದ್ರದ ಬಸ್ ನಿಲ್ದಾಣದಲ್ಲಿ ನಡೆದಿದೆ. ಧರ್ಮಸ್ಥಳದಲ್ಲಿ ಇದೇ ಡಿಸೆಂಬರ್ 12ರಂದು ಮಂಜುನಾಥ ಸ್ವಾಮಿ ದೇಗುಲದಲ್ಲಿ ಲಕ್ಷ ದೀಪೋತ್ಸವ ಪೂಜಾ ಕಾರ್ಯ ಇದೆ. ಈ ಪೂಜಾ-ಕೈಂಕರ್ಯದ ಕಾರ್ಯಕ್ರಮಕ್ಕೆ ಹೋಗಲು ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಪ್ರಯಾಣಿಕರು ನಿತ್ಯ ಸಂಚರಿಸುತ್ತಿದ್ದಾರೆ. ಆದರೆ, ಕಳೆದ ರಾತ್ರಿ ಚಿಕ್ಕಮಗಳೂರು ಬಸ್ ನಿಲ್ದಾಣಕ್ಕೆ ಬಂದಿದ್ದ ನೂರಾರು ಪ್ರಯಾಣಿಕರು ಬಸ್ಸ್ ಇಲ್ಲದ್ದರಿಂದ ಬಸ್ ನಿಲ್ದಾಣದೊಳಗಡಯೇ ಮಧ್ಯರಾತ್ರಿ ಕೆಲ ಕಾಲ ಪ್ರತಿಭಟನೆ ನಡೆಸಿದರು. 

Latest Videos

ಪ್ರಯಾಣಿಕರಿಂದ ಅಸಮಾಧಾನ : 

ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಬಸ್ ನಿಲ್ದಾಣಕ್ಕೆ ಬಂದರೂ ಕೂಡ ಧರ್ಮಸ್ಥಳಕ್ಕೆ ಬಸ್ ಇಲ್ಲ. ಬೇರೆ-ಬೇರೆ ಮಾರ್ಗಗಳಿಂದ ಬಸ್ ಬಂದರೂ ಕೂಡ ಶಕ್ತಿ ಯೋಜನೆಯಿಂದ ಬಸ್ಸಿನಲ್ಲಿ ನಿಲ್ಲೋದಕ್ಕೂ ಜಾಗ ಇರಲಿಲ್ಲ. ಹಾಗಾಗಿ, ಪ್ರಯಾಣಿಕರು ಬೇರೆ ಬಸ್ಸಿನಲ್ಲಿ ಹೋಗೋಣ ಎಂದು ಕಾದು ಕುಳಿತಿದ್ದಾರೆ. ಆದರೆ, ಬಸ್ ಗಳು ಇರಲಿಲ್ಲ. ದೂರದ ಊರಿಂದ ಬಂದಿದ್ದಂತಹ ನೂರಾರು ಮಹಿಳೆಯರು ಹಾಗೂ ಮಕ್ಕಳು ಸರ್ಕಾರಿ ಬಸ್ ನಿಲ್ದಾಣದೊಳಗಡೆ ಮಲಗಿದ್ದರು. ಚಿಕ್ಕಮಗಳೂರು ಬಸ್ ನಿಲ್ದಾಣದಿಂದ ಬಸ್ ಇಲ್ಲದ್ದನ್ನ ಗಮನಿಸಿದ ಪ್ರಯಾಣಿಕರು ಅಸಮಾಧಾನ ಹೊರಹಾಕಿದ್ದಾರೆ. ನೂರಾರು ಪ್ರಯಾಣಿಕರು ಎಲ್ಲೆಂದರಲ್ಲಿ ಮಲಗಿದ್ದಾರೆ. ಕೂಡಲೇ ಬಸ್ ಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರು: ಹೊಸಕೊಪ್ಪ ಬಳಿ ಕೆರೆಯಲ್ಲಿ 12 ಆನೆಗಳ ಹಿಂಡು

ಪ್ರಯಾಣಿಕರ ಆಕ್ರೋಶ ಕಂಡು ಬಸ್ ಡಿಪೋ ಅಧಿಕಾರಿಗಳು ಬೇಲೂರು ಡಿಪೋನಿಂದ ಬಸ್ ಗಳನ್ನ ಕಳುಹಿಸಿದ್ದಾರೆ. ಇದೇ ಡಿಸೆಂಬರ್ 12ರಂದು ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಪೂಜೆ ಇರುವುದರಿಂದ ಸಾವಿರಾರು ಭಕ್ತರು ಧರ್ಮಸ್ಥಳಕ್ಕೆ ತೆರಳುತ್ತಿದ್ದಾರೆ. ಹಾಗಾಗಿ, ಇಂದಿನಿಂದ ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಆರು ಡಿಪೋಗಳಿಂದಲೂ ಕೂಡ ಧರ್ಮಸ್ಥಳಕ್ಕೆ ಬಸ್‌ಗಳನ್ನು ಬಿಡಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ. 

ಇಂದಿನಿಂದ ಮೂರು ದಿನಗಳ ಕಾಲ ಸಂಜೆಯ ಬಳಿಕ ಐದು ಬಸ್‌ಗಳು ನಿತ್ಯ ಧರ್ಮಸ್ಥಳಕ್ಕೆ ತೆರಳಲಿವೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ನಿನ್ನೆಯೇ ಬಸ್‌ಗಳನ್ನ ಬಿಡುತ್ತಿದ್ದೆವು. ಆದರೆ, ಇಷ್ಟು ದೊಡ್ಡ ಪ್ರಮಾಣದಲ್ಲಿ ಪ್ರಯಾಣಿಕರು ಬರುತ್ತಾರೆ ಎಂದು ಊಹಿಸಿರಲಿಲ್ಲ. ಹಾಗಾಗಿ ಸಮಸ್ಯೆಯಾಗಿದೆ. ಇಂದಿನಿಂದ ಬಸ್ಸುಗಳು ಓಡಾಡಲಿದ್ದು ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

click me!