ಡಯಾಲಿಸಿಸ್‌ ಸಿಬ್ಬಂದಿ ಮುಷ್ಕರ: ಚಿಕಿತ್ಸೆ ಸಿಗದೆ ರೋಗಿ ಸಾವು

By Girish GoudarFirst Published Dec 6, 2023, 6:09 AM IST
Highlights

ಮಮ್ಮದಗೌಸ್‌ ಅಬ್ದುಲವಹಾಬ್‌ ಸೈಯದ್ ಚಿಕಿತ್ಸೆ ಸಿಗದೆ ಮೃತಪಟ್ಟ ವ್ಯಕ್ತಿ. ಕಿಡ್ನಿ ಸಮಸ್ಯೆಯಿಂದಾಗಿ ಕಳೆದ 2 ತಿಂಗಳಿನಿಂದ ಇವರು ಇಲ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದರು. ವೇತನ ನೀಡದ ಕಾರಣಕ್ಕೆ ಡಯಾಲಿಸಿಸ್ ಸಿಬ್ಬಂದಿ ಮುಷ್ಕರ ನಡೆಸಿದ್ದರಿಂದ ಚಿಕಿತ್ಸೆ ಸಿಗದೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
 

ಮುಂಡಗೋಡ(ಡಿ.06):  ಡಯಾಲಿಸಿಸ್ ಸಿಬ್ಬಂದಿಗಳ ಮುಷ್ಕರದಿಂದಾಗಿ ಸಕಾಲಕ್ಕೆ ಚಿಕಿತ್ಸೆ ಸಿಗದೆ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದ ರೋಗಿಯೊಬ್ಬ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ತಾಲೂಕಿನ ಗುಂಜಾವತಿ ಗ್ರಾಮದ ಮಮ್ಮದಗೌಸ್‌ ಅಬ್ದುಲವಹಾಬ್‌ ಸೈಯದ್ (೫೮) ಚಿಕಿತ್ಸೆ ಸಿಗದೆ ಮೃತಪಟ್ಟ ವ್ಯಕ್ತಿ. ಕಿಡ್ನಿ ಸಮಸ್ಯೆಯಿಂದಾಗಿ ಕಳೆದ 2 ತಿಂಗಳಿನಿಂದ ಇವರು ಇಲ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದರು. ವೇತನ ನೀಡದ ಕಾರಣಕ್ಕೆ ಡಯಾಲಿಸಿಸ್ ಸಿಬ್ಬಂದಿ ಮುಷ್ಕರ ನಡೆಸಿದ್ದರಿಂದ ಚಿಕಿತ್ಸೆ ಸಿಗದೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಉತ್ತರ ಕನ್ನಡ: ಯಲ್ಲಾಪುರದಲ್ಲಿ ಕುತೂಹಲ ಮೂಡಿಸಿದ ಹ್ಯಾಲಿಕಾಪ್ಟರ್ ಹಾರಾಟ..!

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಾಲೂಕು ಆರೋಗ್ಯಾಧಿಕಾರಿ ನರೇಂದ್ರ ಪವಾರ, ಕಿಡ್ನಿ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಮ್ಮದಗೌಸ್‌ ಸೆ.11ರಿಂದ ವಾರದಲ್ಲಿ ಒಂದು ಬಾರಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದರು. ಡಿ.1ರಂದು ಡಯಾಲಿಸಿಸ್ ಸಿಬ್ಬಂದಿ ಮುಷ್ಕರಕ್ಕೆ ಹೊರಡುತ್ತಿರುವ ಕುರಿತು ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದ 14 ಜನರಿಗೂ ತಿಳಿಸಿ, ತಾತ್ಕಾಲಿಕವಾಗಿ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚಿಸಲಾಗಿತ್ತು. 14ರಲ್ಲಿ 13 ಜನರು ಬೇರೆ, ಬೇರೆ ಕಡೆ ಹೋಗಿ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

click me!