ಕರ್ನಾಟಕದಲ್ಲಿ ಶಾಂತಿ, ಸುವ್ಯವಸ್ಥೆ ಹದಗೆಟ್ಟಿದೆ: ಶಾಸಕ ವೇದವ್ಯಾಸ್‌ ಕಾಮತ್‌

By Kannadaprabha News  |  First Published Dec 3, 2023, 4:00 AM IST

ಇಷ್ಟು ದಿನ ಬಡವರು, ರೈತರು, ಬಿಜೆಪಿ ಹಾಗೂ ದೇಶಭಕ್ತ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ಪೊಲೀಸರ ಮೂಲಕ ನಡೆಸುತ್ತಿದ್ದ ದೌರ್ಜನ್ಯ ಈಗ ವಕೀಲರ ಮೇಲೂ ಆರಂಭವಾಗಿದೆ: ಮಂಗಳೂರು ದಕ್ಷಿಣ ಶಾಸಕ ವೇದದಾಸ್ ಕಾಮತ್ 


ಮಂಗಳೂರು(ಡಿ.04):  ಕಾಂಗ್ರೆಸ್ ಆಡಳಿತ ವಹಿಸಿ ವರ್ಷ ತುಂಬುವುದರೊಳಗೆ ರಾಜ್ಯದ ಶಾಂತಿ- ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ಚಿಕ್ಕಮಗಳೂರಿನ ವಕೀಲರೊಬ್ಬರು ಹೆಲ್ಮೆಟ್ ಹಾಕಿಲ್ಲ ಎಂಬ ಏಕೈಕ ಕಾರಣಕ್ಕೆ ಪೊಲೀಸರು ಅಮಾನುಷವಾಗಿ ಥಳಿಸಿರುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಪೊಲೀಸರ ಮೇಲೆ ನಿಯಂತ್ರಣವಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದದಾಸ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ರಾಜ್ಯದ ವಿವಿಧ ಭಾಗಗಳಲ್ಲಿ ವಕೀಲರಿಂದ ಪ್ರತಿಭಟನೆ ನಡೆಯುತ್ತಿದ್ದು ಅಮಾನವೀಯ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಈಗಾಗಲೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವುದು ಗಮನಾರ್ಹ ಸಂಗತಿ. ಇಷ್ಟು ದಿನ ಬಡವರು, ರೈತರು, ಬಿಜೆಪಿ ಹಾಗೂ ದೇಶಭಕ್ತ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ಪೊಲೀಸರ ಮೂಲಕ ನಡೆಸುತ್ತಿದ್ದ ದೌರ್ಜನ್ಯ ಈಗ ವಕೀಲರ ಮೇಲೂ ಆರಂಭವಾಗಿದೆ ಎಂದು ಹೇಳಿದ್ದಾರೆ. 

Tap to resize

Latest Videos

ಇಂಡಿಯಾ ಮೈತ್ರಿಕೂಟದ ಜಿಹಾದಿ ಮನಸ್ಥಿತಿ: ವೇದವ್ಯಾಸ್‌ ಕಾಮತ್‌

ಕರ್ನಾಟಕ ಪೊಲೀಸ್ ಎಂದರೆ ದೇಶದಾದ್ಯಂತ ಉತ್ತಮ ಹೆಸರು ಗಳಿಸಿರುವ ಇಲಾಖೆ. ಕೆಲವೊಬ್ಬರ ಇಂತಹ ಹದ್ದು ಮೀರಿದ ವರ್ತನೆಯಿಂದಾಗಿ ಇಡೀ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಈ ಕೂಡಲೇ ಪೋಲಿಸರ ಇಂತಹ ಗೂಂಡಾ ವರ್ತನೆಗೆ ಕಡಿವಾಣ ಹಾಕಬೇಕು ಎಂದು ಶಾಸಕ ವೇದವ್ಯಾಸ್‌ ಕಾಮತ್‌ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

click me!