ಉಡುಪಿ: 'ಶ್ರೀಗಳಿಗೆ ವೆಂಟಿಲೇಟರ್‌ನಲ್ಲೇ ಉಸಿರಾಟ ಮುಂದುವರಿಕೆ'..!

Suvarna News   | Asianet News
Published : Dec 22, 2019, 11:07 AM IST
ಉಡುಪಿ: 'ಶ್ರೀಗಳಿಗೆ ವೆಂಟಿಲೇಟರ್‌ನಲ್ಲೇ ಉಸಿರಾಟ ಮುಂದುವರಿಕೆ'..!

ಸಾರಾಂಶ

ಪೇಜಾವರ ಶ್ರೀಗಳು ನಿಧಾನವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ವೆಂಟಿಲೇಟರ್ ಮೂಲಕ ಉಸಿರಾಟ ಮುಂದುವರಿಸಲಾಗಿದೆ ಎಂದು ಪೇಜಾವರ ಮಠದ ಕಿರಿಯ ಯತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಕೆಎಂಸಿ ಆಸ್ಪತ್ರೆಯ ಸಮೀಪ ಮಾತನಾಡಿದ ಅವರು ಶ್ರೀಗಳ ಆರೋಗ್ಯದ ಬಗ್ಗೆ ಮಾತನಾಡಿದ್ದಾರೆ.

ಉಡುಪಿ(ಡಿ.22): ಪೇಜಾವರ ಶ್ರೀಗಳು ನಿಧಾನವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ವೆಂಟಿಲೇಟರ್ ಮೂಲಕ ಉಸಿರಾಟ ಮುಂದುವರಿಸಲಾಗಿದೆ ಎಂದು ಪೇಜಾವರ ಮಠದ ಕಿರಿಯ ಯತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಕೆಎಂಸಿ ಆಸ್ಪತ್ರೆಯ ಸಮೀಪ ಮಾತನಾಡಿದ ಅವರು ಶ್ರೀಗಳ ಆರೋಗ್ಯದ ಬಗ್ಗೆ ಮಾತನಾಡಿ, ಪೇಜಾವರ ಶ್ರೀ ಅನಾರೋಗ್ಯ ಹಿನ್ನೆಲೆ ಶ್ರೀಗಳ ಎದೆಯಲ್ಲಿರುವ ಕಫ ನೀರಾಗುತ್ತಿದೆ. ವೈದ್ಯರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ವಯೋ ಸಹಜದಿಂದಾಗಿ ನಿಧಾನವಾಗಿ ರಿಕವರ್ ಆಗುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೇಜಾವರ ಶ್ರೀ ಭೇಟಿ ಮಾಡಿ ತೊಂದರೆ ಕೊಡಬೇಡಿ, ದೂರದಿಂದಲೇ ಪ್ರಾರ್ಥಿಸಿ ಎಂದ ಕಿರಿಯ ಸ್ವಾಮೀಜಿ

ಭಕ್ತರು ಉದ್ವೇಗಕ್ಕೆ ಒಳಗಾಗಬೇಡಿ. ಎಲ್ಲರೂ ಅಲ್ಲಲ್ಲೇ ಪ್ರಾರ್ಥನೆ ಮಾಡಿ. ವೆಂಟಿಲೇಟರ್‌ನಲ್ಲೆ ಉಸಿರಾಟ ಮುಂದುವರಿಸಲಾಗಿದೆ. ನಾವು ಪೂಜೆ ಮಾಡುತ್ತಿದ್ದೇವೆ. ಕರ್ನಾಟಕ ಅಲ್ಲದೇ ಇತರ ರಾಜ್ಯಗಳಲ್ಲೂ ಪ್ರಾರ್ಥನೆ ನಡೆಯುತ್ತಿದೆ ಎಂದು ಉಡುಪಿಯ ಮಣಿಪಾಲದಲ್ಲಿ ಪೇಜಾವರ ಕಿರಿಯ ಯತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಶ್ರೀಗಳ ಆರೋಗ್ಯ ಏರು ಪೇರಾದ ಕಾರಣ ಡಿ. 20ರಂದು ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾಜಕೀಯ ಮುಖಂಡರೂ, ಗಣ್ಯರೂ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸುತ್ತಿದ್ದಾರೆ.

ಪೇಜಾವರ ಶ್ರೀ ಚಿಕಿತ್ಸೆಗೆ ಸ್ಪಂದನೆ : ಕಣ್ಣು ತೆರೆಯಲು ಪ್ರಯತ್ನ

PREV
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಜಾಸ್ತಿ ಬೇಡ ಎರಡೇ ಮಕ್ಕಳನ್ನಷ್ಟೇ ಮಾಡಿಕೊಳ್ಳಿ: ನವದಂಪತಿಗಳಿಗೆ ಸಿಎಂ ಸಲಹೆ