
ಮೈಸೂರು(ನ.01): ರೈತನ ಮೇಲೆ ದಾಳಿ ಮಾಡಿದ್ದ ಹುಲಿ ದಿಢೀರ್ ಪ್ರತ್ಯಕ್ಷವಾದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮಹದೇವನಗರದಲ್ಲಿ ಇಂದು(ಬುಧವಾರ) ನಡೆದಿದೆ.
ನಂಜನಗೂಡು ತಾಲೂಕಿನ ಮಹದೇವನಗರದ ಮತ್ತಿಮರದ ಜೇನುಕಟ್ಟೆ ಬಳಿ ಹುಲಿ ಪ್ರತ್ಯಕ್ಷವಾಗಿದೆ. ಹುಲಿ ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ.
ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಮೊಟ್ಟ ಮೊದಲ ಪತ್ರಿಕಾ ವಿತರಕ ಮೈಸೂರು ಜವರಪ್ಪ
ಧನಗಾಹಿ ವೀರಭದ್ರ ಭೋವಿ ಮೇಲೆ ಹುಲಿ ದಾಳಿ ನಡೆಸಿತ್ತು, ಈ ಹುಲಿ ಕಳೆದ ಮೂರು ದಿನಗಳಿಂದ ಕಾಣಿಸಿಕೊಳ್ಳುತ್ತಿದೆ. ಹುಲಿ ಸೆರೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.