ಹಾಳಾದ ಚಾರ್ಮಾಡಿ ಘಾಟಲ್ಲಿ ವಾಹನ ಸವಾರರಿಗೆ ಮತ್ತೊಂದು ಭಯ

By Web Desk  |  First Published Nov 30, 2019, 11:51 AM IST

ಹಾಳಾದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸವಾರರಿಗೆ ಇದೀಗ ಮತ್ತೊಂದು ಆತಂಕ ಎದುರಾಗಿದೆ. ಜೀವ ಭಯದಿಂದಲೇ ಇಲ್ಲಿ ಪ್ರಯಾಣಿಸುವಂತಾಗಿದೆ. 


ಚಿಕ್ಕಮಗಳೂರು (ನ.30):  ಮಳೆಗಾಲದಲ್ಲಿ ಸುರಿದ ಭಾರೀ ಮಳೆಯಿಂದ ಹಾಳಾಗಿರುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಇದೀಗ ಪ್ರಯಾಣಿಕರಿಗೆ ಮತ್ತೊಂದು ಆತಂಕ ಎದುರಾಗಿದೆ. 

ಚಿಕ್ಕಮಗಳೂರಿನಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕಾಡಾನೆ ಕಾಟ ಹೆಚ್ಚಾಗಿದ್ದು ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ಎದುರಾಗಿದೆ. 

Latest Videos

undefined

ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನಗಳು ಸಂಚರಿಸುವಾಗ ಒಂಟಿ ಸಲಗವೊಂದು ಏಕಾ ಏಕಿ ಎದುರಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಳೆದ ಎರಡು ದಿನಗಳ ಹಿಂದಷ್ಟೇ ಇಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಹಾಳಾದ ರಸ್ತೆಯಲ್ಲಿ ಪ್ರಯಾಣಿಸುವಾಗ ಜನರಿಗೆ ಜಿವ ಭಯ ಕಾಡುವುದರೊಂದಿಗೆ ಇದೀಗ ಆನೆಗಳ ಭಯವು ಹೆಚ್ಚಾಗಿದೆ.  

ಕಳೆದ ಮಳೆಗಾಲದಲ್ಲಿ ಭಾರೀ ಪ್ರಮಾಣದಲ್ಲಿ ಸುರಿದ ಮಳೆಯಿಂದ ಚಾರ್ಮಾಡಿ ಘಾಟ್ ರಸ್ತೆ ಸಂಪೂರ್ಣವಾಗಿ ಹಾಳಾಗಿತ್ತು. ದುರಸ್ಥಿ ಕಾರ್ಯದ ಬಳಿಕ ಇಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. 

click me!