
ಬೆಂಗಳೂರು(ಫೆ.11): ಯಲಹಂಕದ ವಾಯು ನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಆರಂಭವಾದ ಬೆನ್ನಲ್ಲೇ ಸೋಮವಾರ ಯಲಹಂಕ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಸೇರಿದಂತೆ ಸುತ್ತಮುತ್ತಲ ಹಲವು ರಸ್ತೆಗಳಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿ ಸವಾರರು ಪರದಾಡಿದರು.
ವೈಮಾನಿಕ ಪ್ರದರ್ಶನ ವೀಕ್ಷಣೆಗೆ ತೆರ ಳುವ ವಾಹನಗಳನ್ನು ತಪಾಸಣೆ ನಡೆಸಿ ಒಳಗೆ ಬಿಡುತ್ತಿರುವುದರಿಂದ ಕಿಲೋ ಮೀಟರ್‌ಗಳಷ್ಟು ಉದ್ದಕ್ಕೆ ವಾಹನಗಳ ಸಂಚಾರ ದಟ್ಟಣೆ ಉಂಟಾಯಿತು. ಅದರಲ್ಲೂ ಯಲಹಂಕ ಬಿಎಸ್‌ಎಫ್ ಟ್ರೈನಿಂಗ್ ಸೆಂಟರ್‌ನಿಂದ ಯಲಹಂಕ ವಾಯು ನೆಲೆ, ಬೆಂಗಳೂರು-ಹೈದರಾಬಾದ್ ಹೆದ್ದಾರಿ, ಕೆಂಪೇಗೌಡ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ, ಹೆಬ್ಬಾಳ ಮೇಲ್ಸೇತುವೆ, ಬಾಗಲೂರು ಕ್ರಾಸ್, ಸರ್ವಿಸ್ ರಸ್ತೆ ಸೇರಿದಂತೆ ಸುತ್ತ ಮುತ್ತಲ ರಸ್ತೆಗಳಲ್ಲಿ ಸುಮಾರು ಐದಾರು ಕಿ.ಮೀ.ಉದ್ದಕ್ಕೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.
Aero India 2025: ಬೆಂಗ್ಳೂರಲ್ಲಿ ಏಷ್ಯಾದ ಅತಿದೊಡ್ಡ ಏರ್ ಶೋ ಆರಂಭ
ಸುಡು ಬಿಸಿಲಿನ ತಾಪ ಒಂದೆ ಡೆಯಾದರೆ, ಸಂಚಾರ ದಟ್ಟಣೆಯ ಬಿಸಿ ವಾಹನ ಸವಾರರನ್ನು ಹೈರಣಾಗಿಸಿತು. ಸಂಚಾರ ಪೊಲೀಸರು ಯಲಹಂಕ ಭಾಗದ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆ ಯಲ್ಲಿಹಲವು ಬದಲಾವಣೆ ಮಾಡಿದ್ದರೂ ಸಂಚಾರ ದಟ್ಟಣೆ ತಪ್ಪಿಸಲು ಸಾಧ್ಯವಾಗಲಿಲ್ಲ.
ನಗರದಿಂದ ಏರ್‌ಪೋರ್ಟ್ ಕಡೆಗೆ ತೆರಳುತ್ತಿದ್ದ ವಾಹನ ಸವಾರರು, ಸುಮಾರು 2 ತಾಸು ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಪರದಾಡಿದರು. ಯಲಹಂಕ ಸುತ್ತಮುತ್ತಲ ರಸ್ತೆಗಳಲ್ಲಿ ಆ್ಯಂಬುಲೆನ್ಸ್ ಗಳ ಸಂಚಾರಕ್ಕೂ ಜಾಮ್ ಬಿಸಿ ತಟ್ಟಿತು.